ಬೆಂಗಳೂರು: ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಘೋಷಣೆಯಾಗಿರುವ ಉಪಚುನಾವಣೆ ಸಂಬಂಧ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದೆ.
ಉಪ ಚುನಾವಣೆ ಸಂಬಂಧ ಚುನಾವಣಾ ಆಯೋಗವು ಇಂದು ಅಧಿಕೃತವಾಗಿ ಅಧಿಸೂಚನೆ ಹೊರಡಿಸಿದೆ. ನಾಮಪತ್ರ ಸಲ್ಲಿಕೆಯ ಮೊದಲ ದಿನವೇ ಒಟ್ಟು 14 ನಾಮಪತ್ರ ಸಲ್ಲಿಕೆಯಾಗಿವೆ. ಚುನಾವಣಾ ಆಯೋಗ 15 ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗಿದೆ. ಅಕ್ಟೋಬರ್ 21ರಂದು ಅಥಣಿ,ಕಾಗವಾಡ,ಗೋಕಾಕ್,ಯಲ್ಲಾಪುರ,ಹಿರೇಕೆರೂರು,ರಾಣೆಬೆನ್ನೂರು,ವಿಜಯನಗರ,ಚಿಕ್ಕಬಳ್ಳಾಪುರ,ಕೆ.ಆರ್.ಪುರ,ಯಶವಂತಪುರ,ಮಹಾಲಕ್ಷ್ಮೀಲೇಔಟ್,ಶಿವಾಜಿನಗರ,ಹೊಸಕೋಟೆ,ಕೆ.ಆರ್.ಪೇಟೆ ಮತ್ತು ಹುಣಸೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ.
ಉಪ ಚುನಾವಣೆ ಸಂಬಂಧ ಸೆಪ್ಟೆಂಬರ್ 30ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಅಕ್ಟೋಬರ್ 1ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅ.3ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ನಾಮಪತ್ರ ಸಲ್ಲಿಕೆಯ ಮೊದಲ ದಿನವಾದ ಇಂದು 14 ನಾಮಪತ್ರಗಳು ಸಲ್ಲಿಕೆಯಾಗಿವೆ. ಅಥಣಿ ಕ್ಷೇತ್ರದಲ್ಲಿ 4,ಕಾಗವಾಡ ಕ್ಷೇತ್ರದಲ್ಲಿ 5,ರಾಣೆಬೆನ್ನೂರು ಕ್ಷೇತ್ರದಲ್ಲಿ 1,ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ 1, ಕೆ.ಆರ್.ಪುರ ಕ್ಷೇತ್ರದಲ್ಲಿ 1, ಹುಣಸೂರು ಕ್ಷೇತ್ರದಲ್ಲಿ 2 ನಾಮಪತ್ರ ಸಲ್ಲಿಕೆಯಾಗಿವೆ ಎಂದು ಚುನಾವಣಾ ಆಯೋಗ ತಿಳಿಸಿದೆ.