ETV Bharat / city

ಆರ್‌.ಆರ್‌ ನಗರ, ಶಿರಾ ಕ್ಷೇತ್ರಕ್ಕೆ ಉಪ ಚುನಾವಣೆ ದಿನಾಂಕ ಘೋಷಣೆ

ಶಾಸಕ ಸತ್ಯನಾರಾಯಣ ಅವರ ಅಕಾಲಿಕ ನಿಧನದಿಂದ ತೆರವಾಗಿದ್ದ ತುಮಕೂರು ಜಿಲ್ಲೆ ಶಿರಾ ವಿಧಾನಸಭೆ ಹಾಗೂ ಬೆಂಗಳೂರಿನ ಆರ್.‌ಆರ್‌ ನಗರ ವಿಧಾನಸಭೆಯ ಉಪ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ನವೆಂಬರ್‌ 3ರಂದು ಮತದಾನ ನಡೆಯಲಿದ್ದು, ನವೆಂಬರ್‌ 10ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

sira
ಚುನಾವಣೆ
author img

By

Published : Sep 29, 2020, 2:29 PM IST

Updated : Sep 29, 2020, 2:57 PM IST

ಬೆಂಗಳೂರು: ರಾಜ್ಯದಲ್ಲಿ ಮಿನಿ ಸಮರಕ್ಕೆ ಅಖಾಡ ಸಿದ್ಧವಾಗಿದ್ದು, ಖಾಲಿಯಾಗಿರುವ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರ ಹಾಗೂ ತುಮಕೂರು ಜಿಲ್ಲೆಯ ಶಿರಾ ಕ್ಷೇತ್ರಗಳಿಗೆ ನವೆಂಬರ್‌ 3ರಂದು ಉಪ ಚುನಾವಣೆ ನಡೆಯಲಿದೆ. ನವೆಂಬರ್‌ 10ರಂದು ಫಲಿತಾಂಶ ಪ್ರಕಟವಾಗಲಿದೆ.

ಕಾಂಗ್ರೆಸ್‌ ಶಾಸಕ ಸತ್ಯನಾರಾಯಣ ಅವರ ಅಕಾಲಿಕ ನಿಧನದಿಂದ ಶಿರಾ ಕ್ಷೇತ್ರ ತೆರವಾಗಿದ್ದು, ಇಲ್ಲಿ ಕಾಂಗ್ರೆಸ್‌ನಿಂದ ಟಿ.ಬಿ.ಜಯಚಂದ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಬಿಜೆಪಿ ಇನ್ನೂ ತನ್ನ ಅಭ್ಯರ್ಥಿಯನ್ನು ಅಂತಿಮಗೊಲಿಸಿಲ್ಲ.

ಮತದಾರರ ಗುರುತಿನ ಚೀಟಿ ಪ್ರಕರಣ ಎದುರಿಸುತ್ತಿರುವ ಅನರ್ಹ ಶಾಸಕ ಮುನಿರತ್ನ ಅವರಿಂದ ಆರ್‌.ಆರ್‌ ನಗರ ಕ್ಷೇತ್ರವು ತೆರವಾಗಿತ್ತು. ಹೀಗಾಗಿ ಈ ಕ್ಷೇತ್ರಕ್ಕೂ ಚುನಾವಣಾ ಆಯೋಗ ಚುನಾವಣಾ ದಿನಾಂಕವನ್ನು ಘೋಷಿಸಿದೆ. ಬಿಜೆಪಿಯಿಂದ ಮುನಿರತ್ನ ಸ್ಪರ್ಧಿಸುವ ಸಾಧ್ಯತೆ ಇದೆ.

Last Updated : Sep 29, 2020, 2:57 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.