ETV Bharat / city

ತಪ್ಪಿದ ಪರಿಷತ್‌ ಪ್ರವೇಶ ಅವಕಾಶ.. ಸಹನೆ, ಸೌಜನ್ಯದಿಂದ ವರ್ತಿಸಲು ಬೆಂಬಲಿಗರಿಗೆ ಬಿ.ವೈ ವಿಜಯೇಂದ್ರ ಮನವಿ - ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿವೈ ವಿಜಯೇಂದ್ರ

ರಾಜಕೀಯ, ಅಧಿಕಾರ ನಿಂತ ನೀರಲ್ಲ. ಅದು ಹರಿಯುವ ನದಿಯ ಹಾಗೆ. ಇದನ್ನು ಕಾರ್ಯಕರ್ತರು ಅಭಿಮಾನಿಗಳು ಅರ್ಥ ಮಾಡಿಕೊಳ್ಳಬೇಕು - ಬಿ.ವೈ ವಿಜಯೇಂದ್ರ.

BY Vijayendra
ಬಿ.ವೈ ವಿಜಯೇಂದ್ರ
author img

By

Published : May 24, 2022, 1:39 PM IST

ಬೆಂಗಳೂರು : ಪರಿಷತ್ ಟಿಕೆಟ್ ಕೈತಪ್ಪಿದಕ್ಕೆ ಬೆಂಬಲಿಗರು ಅಸಮಧಾನಗೊಂಡು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿರುವ ಹಿನ್ನೆೆಲೆ ನಾವೆಲ್ಲರೂ ಸಾಮಾನ್ಯ ಕಾರ್ಯಕರ್ತರು. ಸಾಮರ್ಥ್ಯ ಇರುವವರನ್ನು ಪಕ್ಷ ಎಂದಿಗೂ ಕೈಬಿಟ್ಟಿಲ್ಲ, ಬಿಡುವುದೂ ಇಲ್ಲ. ಈ ನಿಟ್ಟಿನಲ್ಲಿ ಎಲ್ಲರೂ ಸಹನೆ, ಸೌಜನ್ಯದಿಂದ ವರ್ತಿಸಬೇಕೆಂದು ಬೆಂಬಲಿಗರಿಗೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಮನವಿ ಮಾಡಿದ್ದಾರೆ.

ಸಂಘದ ಶಿಸ್ತು, ಪಕ್ಷದ ಸಂಘಟನೆ, ಜನಪರ ಹೋರಾಟ ಹಾಗೂ ಸೇವೆಯನ್ನು ನಿಜ ಕಾಯಕವೆಂದು ತಿಳಿದು ಬದುಕಿನ ಹೆಜ್ಜೆಯಿಟ್ಟವರು ನನ್ನ ತಂದೆ ಯಡಿಯೂರಪ್ಪನವರು. ಈ ಕಾರಣಕ್ಕಾಗಿಯೇ ರಾಜ್ಯದ ಮುಖ್ಯಮಂತ್ರಿಯಾಗಿ ನಾಲ್ಕು ಬಾರಿ ಪ್ರಮಾಣ ವಚನ ಸ್ವೀಕರಿಸುವ ಅವಕಾಶ ಕಲ್ಪಿಸಿದ್ದು ಜನರ ಆಶೀರ್ವಾದ ಹಾಗೂ ಭಾರತೀಯ ಜನತಾ ಪಕ್ಷ.

BY Vijayendra
ಬೆಂಬಲಿಗರಿಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಮನವಿ

ಅಂತೆಯೇ ಅನಿರೀಕ್ಷಿತ ತಿರುವಿನಲ್ಲಿ ರಾಜಕೀಯ ಪ್ರವೇಶಿಸಿದ ನನಗೆ ರಾಜ್ಯ ಬಿಜೆಪಿಯ ಉಪಾಧ್ಯಕ್ಷನಾಗಿ ಮಹತ್ವದ ಜವಾಬ್ದಾರಿ ನೀಡಿ ನನ್ನ ಬೆನ್ನು ತಟ್ಟಿ ಬೆಳೆಸುತ್ತಿರುವುದು ಪಕ್ಷ ಮತ್ತು ಪಕ್ಷದ ವರಿಷ್ಠರು. ರಾಜಕೀಯ, ಅಧಿಕಾರ ನಿಂತ ನೀರಲ್ಲ. ಅದು ಹರಿಯುವ ನದಿಯ ಹಾಗೆ. ಇದನ್ನು ಕಾರ್ಯಕರ್ತರು ಅಭಿಮಾನಿಗಳು ಅರ್ಥ ಮಾಡಿಕೊಳ್ಳಬೇಕು ಎಂದು ವಿನಂತಿಸಿಕೊಳ್ಳುತ್ತೇನೆ ಎಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಅನಗತ್ಯ ಟೀಕೆ, ಟಿಪ್ಪಣಿಗಳು, ದ್ವೇಷಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದರೆ ಆದರಿಂದ ನನ್ನ ವ್ಯಕ್ತಿತ್ವಕ್ಕೆ ಹಾಗೂ ಪೂಜ್ಯ ತಂದೆಯವರ ಭಾವನೆಗಳಿಗೆ ಮಸಿ ಬಳಿದಂತಾಗುವುದೇ ಹೊರತು ನಮ್ಮನ್ನು ಬೆಂಬಲಿಸಿದಂತೆ ಆಗುವುದಿಲ್ಲ. ಇದನ್ನು ಹಿತೈಷಿ ಎಂದು ಹೇಳಿಕೊಳ್ಳುವ ಪ್ರತಿಯೊಬ್ಬರೂ ಅರಿಯಬೇಕೆಂದು ಈ ಸಂದರ್ಭದಲ್ಲಿ ಹೇಳಬಯಸುತ್ತೇನೆ. ಪಕ್ಷದ ಶಿಸ್ತಿನ ಚೌಕಟ್ಟಿನಲ್ಲಿ ನಾವೆಲ್ಲರೂ ಸಾಮಾನ್ಯ ಕಾರ್ಯಕರ್ತರು. ಈ ನಿಟ್ಟಿನಲ್ಲಿ ಎಲ್ಲರೂ ಸಹನೆ, ಸೌಜನ್ಯದಿಂದ ವರ್ತಿಸಬೇಕೆಂದು ವಿನಮ್ರತೆಯಿಂದ ಮನವಿ ಮಾಡುವೆ. ತಮ್ಮೆಲ್ಲರ ಬೆಂಬಲ, ಆಶೀರ್ವಾದ, ಮಾರ್ಗದರ್ಶನ, ಸಹಕಾರಗಳು ಸದಾ ಇರಲಿ ಎಂದು ಕೋರಿದ್ದಾರೆ‌.

ಇದನ್ನೂ ಓದಿ: ನಮ್ಮ ತಂಡದ ನಾಲ್ವರಿಗೆ ಟಿಕೆಟ್ ಸಿಕ್ಕಿದೆ, ವಿಜಯೇಂದ್ರಗೆ ಬೇರೆ ಬೇರೆ ಅವಕಾಶಗಳಿವೆ: ಕಟೀಲ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.