ಬೆಂಗಳೂರು : ಆರ್‌ಆರ್‌ನಗರ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಮುನಿರತ್ನ ಅವರು ಭಾರೀ ಬಹುಮತದಿಂದ ಗೆಲುವು ಸಾಧಿಸಿರೋದು ಸಂತೋಷದ ವಿಷಯ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ.
ಸಿಎಂ ನಿವಾಸದ ಬಳಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಆರ್‌ಆರ್‌ನಗರ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಮುನಿರತ್ನ ಅವರು ಭಾರೀ ಬಹುಮತದಿಂದ ಗೆಲುವು ಸಾಧಿಸಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.
ಮುಂದಿನ ದಿನದಲ್ಲೂ ಬಿ ಎಸ್ ಯಡಿಯೂರಪ್ಪ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ. ಯಡಿಯೂರಪ್ಪನವರ ಬದಲಾವಣೆ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದೆಯೇ ಹೊರತು ರಾಜ್ಯ ಮತ್ತು ಕೇಂದ್ರ ಮಟ್ಟದಲ್ಲಿ ಯಾವುದೇ ಚರ್ಚೆಯಾಗಿಲ್ಲ. ಮುಂದಿನ ದಿನಗಳಲ್ಲಿ ಯಾವ ಜವಾಬ್ದಾರಿ ಕೊಡಬೇಕೆಂಬುದು ಪಕ್ಷ ತೀರ್ಮಾನ ಮಾಡುತ್ತದೆ ಎಂದು ಹೇಳಿದರು.