ETV Bharat / city

ಸದನದಲ್ಲಿ ರಾಷ್ಟ್ರಧ್ವಜ ಪ್ರದರ್ಶಿಸಿ ಧ್ವಜಸಂಹಿತೆಯನ್ನು ಕಾಂಗ್ರೆಸ್ ಉಲ್ಲಂಘಿಸಿದೆ : ಸಿಎಂ - c m basavaraja bommai talk about congress protest in bengalore

ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ಮಾಡುವ ಜೊತೆಗೆ ಜನರ ಸಮಸ್ಯೆಗಳ ಬಗ್ಗೆ ವಿರೋಧ ಪಕ್ಷದವರು ಚರ್ಚಿಸಬಹುದಿತ್ತು. ಸಚಿವರು ಸ್ಪಷ್ಟೀಕರಣ ನೀಡಿದ್ದಾರೆ. ಕೇಸರಿ ಧ್ವಜವನ್ನು 300-400 ವರ್ಷಗಳ ನಂತರ ಹಾರಿಸಲು ಸಾಧ್ಯವಾಗಬಹುದು ಎಂದು ಹೇಳುವ ಜೊತೆಗೆ ರಾಷ್ಟ್ರಧ್ವಜವನ್ನು ಒಪ್ಪಿಕೊಂಡಿದ್ದು, ಎಲ್ಲರೂ ಗೌರವ ನೀಡಬೇಕು ಎಂದು..

basava raja bommaiy
ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ
author img

By

Published : Feb 16, 2022, 7:50 PM IST

ಬೆಂಗಳೂರು : ಜವಾಬ್ದಾರಿಯುತ ವಿರೋಧಪಕ್ಷವಾಗಿ ಕೆಲಸ ಮಾಡುವಲ್ಲಿ ಕಾಂಗ್ರೆಸ್ ಪಕ್ಷ ವಿಫಲವಾಗಿದೆ. ಸದನದಲ್ಲಿ ರಾಷ್ಟ್ರಧ್ವಜ ಪ್ರದರ್ಶನದ ಮೂಲಕ ರಾಷ್ಟ್ರಧ್ವಜ ಸಂಹಿತೆಯನ್ನು ಉಲ್ಲಂಘನೆ ಮಾಡಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.

ರಾಷ್ಟ್ರಧ್ವಜ ಪ್ರದರ್ಶಿಸಿದ ಕಾಂಗ್ರೆಸ್​ನ ನಡೆ ಬಗ್ಗೆ ಸಿಎಂ ಪ್ರತಿಕ್ರಿಯೆ

ವಿಧಾನಸೌಧದಲ್ಲಿ ಮಾತನಾಡಿದ ಅವರು, ರಾಷ್ಟ್ರಧ್ವಜವನ್ನು ಹೇಗೆ ಬಳಕೆ ಮಾಡಬೇಕು ಎನ್ನುವ ಬಗ್ಗೆ ಸಂಹಿತೆಯಿದೆ. ರಾಷ್ಟ್ರಧ್ವಜದ ವಿಷಯ ಎಲ್ಲಿಯೂ ದುರುಪಯೋಗ ಆಗಬಾರದು ಎನ್ನುವುದು ಸಂಹಿತೆಯಲ್ಲಿದೆ. ಆದರೆ, ವಿರೋಧಪಕ್ಷದವರು ರಾಜಕೀಯ ಪ್ರೇರಿತವಾಗಿ ಸದನದಲ್ಲಿ ಈ ವಿಷಯವನ್ನು ದುರುಪಯೋಗ ಮಾಡಿಕೊಂಡಿರುವುದು ಸ್ಪಷ್ಟವಾಗಿದೆ.

ಜನರು ಎಲ್ಲ ಬೆಳವಣಿಗೆಗಳನ್ನು ಗಮನಿಸುತ್ತಿದ್ದಾರೆ. ಈಶ್ವರಪ್ಪನವರ ಹೇಳಿಕೆಯಾಗಲಿ ಅಥವಾ ಇನ್ನಾವುದೇ ವಿಚಾರಗಳ ಬಗ್ಗೆ ಸದನದಲ್ಲಿ ಚರ್ಚೆ ಮಾಡಲು ಹಾಗೂ ಉತ್ತರ ನೀಡಲು ತಯಾರಿರುವುದಾಗಿ ತಿಳಿಸಿದರು.

100 ವರ್ಷಗಳ ಇತಿಹಾಸವಿದೆ ಎಂದು ಹೇಳಿಕೊಳ್ಳುವ ಕಾಂಗ್ರೆಸ್​ ಪಕ್ಷ ಸದನದಲ್ಲಿ ಈ ರೀತಿ ಮಾಡುವುದು ಪಕ್ಷಕ್ಕೆ ಶೋಭೆ ತರುವಂಥದ್ದಲ್ಲ. ತಮ್ಮ ನಿಲುವು ಹಾಗೂ ವರ್ತನೆಗಳಿಂದ ಇಡೀ ದೇಶದಲ್ಲಿ ನೆಲಕಚ್ಚುತ್ತಿದ್ದು, ಜನರಿಂದ ದೂರವಾಗುತ್ತಿದೆ ಎಂದು ದೂರಿದರು.

ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ಮಾಡುವ ಜೊತೆಗೆ ಜನರ ಸಮಸ್ಯೆಗಳ ಬಗ್ಗೆ ವಿರೋಧ ಪಕ್ಷದವರು ಚರ್ಚಿಸಬಹುದಿತ್ತು. ಸಚಿವರು ಸ್ಪಷ್ಟೀಕರಣ ನೀಡಿದ್ದಾರೆ. ಕೇಸರಿ ಧ್ವಜವನ್ನು 300-400 ವರ್ಷಗಳ ನಂತರ ಹಾರಿಸಲು ಸಾಧ್ಯವಾಗಬಹುದು ಎಂದು ಹೇಳುವ ಜೊತೆಗೆ ರಾಷ್ಟ್ರಧ್ವಜವನ್ನು ಒಪ್ಪಿಕೊಂಡಿದ್ದು, ಎಲ್ಲರೂ ಗೌರವ ನೀಡಬೇಕು ಎಂದು ತಿಳಿಸಿದ್ದಾರೆ.

ಈಶ್ವರಪ್ಪ ಅವರ ಹೇಳಿಕೆಯ ಆಯ್ದ ಭಾಗಗಳನ್ನು ಮಾತ್ರ ಉಲ್ಲೇಖಿಸಿ ಜನರ ಹಾಗೂ ಸದನದ ದಾರಿ ತಪ್ಪಿಸುವ ಕೆಲಸ ಮಾಡಲಾಗುತ್ತಿದೆ. ಸಚಿವರ ಹೇಳಿಕೆಯಲ್ಲಿ ಕಾನೂನಾತ್ಮಕವಾಗಿ ಯಾವುದೇ ಉಲ್ಲಂಘನೆಯಾಗಿಲ್ಲ. ಇಲ್ಲಸಲ್ಲದ ವಿಚಾರಗಳನ್ನು ಎತ್ತಿ ಮಾತನಾಡುತ್ತಿರುವುದು ವಿರೋಧ ಪಕ್ಷದವರ ರಾಜಕೀಯ ದಿವಾಳಿತನವನ್ನು ಪ್ರದರ್ಶಿಸುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ: ರಾಷ್ಟ್ರ ಧ್ವಜ ಹಿಡಿದು ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಸದನದ ಬಾವಿಗಿಳಿದು ಕೈ ಶಾಸಕರ ಪ್ರತಿಭಟನೆ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.