ಬೆಂಗಳೂರು : ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಮೂವರು ಸಾವನ್ನಪ್ಪಿದ ಪ್ರಕರಣದಲ್ಲಿ ಸಂತ್ರಸ್ತ ಕುಟುಂಬದವರಿಗೆ ರಾಜ್ಯ ಸರಕಾರ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಈ ಪ್ರಕರಣವನ್ನು ಸರಕಾರ ಬಹಳ ಗಂಭೀರವಾಗಿ ಪರಿಗಣಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ನಗರದಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಅವರು, ಸಿಎಂ ರಿಲೀಫ್ ಫಂಡ್‌ನಿಂದ 5 ಲಕ್ಷ ರೂ.ಗಳ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. ಪ್ರಕರಣದ ಸಂಪೂರ್ಣ ತನಿಖೆ ಮಾಡಿ ತಾಂತ್ರಿಕ ವರದಿ ಸಲ್ಲಿಸುವಂತೆ ಕೆಡಬ್ಲ್ಯೂಎಸ್‌ಎಸ್‌ಬಿ ಮುಖ್ಯ ಇಂಜಿನಿಯರ್ಗೆ ಸೂಚಿಸಲಾಗಿದೆ. ಪ್ರಕರಣದ ಹಿನ್ನೆಲೆ ರಾಯಚೂರಿನ ಎಲ್ಲಾ ವಾರ್ಡ್ಗಳ ನೀರಿನ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.
ಕುಡಿಯುವ ನೀರಿನ ಸುರಕ್ಷತೆಯ ಬಗ್ಗೆ ಪ್ರಮಾಣೀಕರಣವಾಗಬೇಕು. ಅಧಿಕಾರಿಗಳ ಲೋಪದೋಷವಿದೆಯೇ ಎಂಬ ಬಗ್ಗೆಯೂ ಅಲ್ಲಿಯ ಡಿವೈಎಸ್ಪಿ ನೇತೃತ್ವದಲ್ಲಿ ಪೊಲೀಸ್ ತನಿಖೆಯನ್ನು ಕೂಡ ಕೈಗೊಳ್ಳಲಾಗುವುದು. ತಪ್ಪಿತಸ್ಥರಿದ್ದರೆ ಅವರ ಮೇಲೆ ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದರು.
ಇದನ್ನೂ ಓದಿ: ಮೊಬೈಲ್ ಕ್ಲಿನಿಕ್ಗೆ ಸಿಎಂ ಚಾಲನೆ: ಬೇರೆ ಜಿಲ್ಲೆಗಳಿಗೂ ವಿಸ್ತರಿಸಲು ಚಿಂತನೆ ಎಂದ ಬೊಮ್ಮಾಯಿ