ಬೆಂಗಳೂರು: ನಾಯಕತ್ವ ಬದಲಾವಣೆ ಚಟುವಟಿಕೆ ಗರಿಗೆದರುತ್ತಿರುವ ನಡುವೆ ಸಿಎಂ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿದೆ. ಸಚಿವ ಸಂಪುಟ ಸಭೆಗೆ ಸಚಿವ ಸಿ.ಪಿ.ಯೋಗೇಶ್ವರ್ ಕೂಡ ಆಗಮಿಸಿರುವುದು ಸಾಕಷ್ಟು ಕುತೂಹಲ ಕೆರಳಿಸಿದೆ.
ವಿಧಾನಸೌಧದಲ್ಲಿ ಸಿಎಂ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ಆರಂಭವಾಗಿದೆ. ನಾಯಕತ್ವ ಬದಲಾವಣೆ ಸಂಬಂಧ ಬಿಜೆಪಿ ವಿರೋಧಿ ಬಣ ದೆಹಲಿ ಕಸರತ್ತು ನಡೆಸಿರುವ ಮಧ್ಯೆಯೇ ಸಚಿವ ಸಂಪುಟ ಸಭೆ ನಡೆಯುತ್ತಿದೆ. ಸಚಿವ ಸಂಪುಟ ಸಭೆಯಲ್ಲಿ ದೆಹಲಿಗೆ ಹೋಗಿ ನಾಯಕತ್ವ ಬದಲಾವಣೆಗೆ ಯತ್ನಿಸಿದ್ದಾರೆ ಎಂಬ ಆರೋಪಕ್ಕೊಳಗಾಗಿರುವ ಸಚಿವ ಸಿ.ಪಿ.ಯೋಗೇಶ್ವರ್ ಸಚಿವ ಸಂಪುಟ ಸಭೆಗೆ ಆಗಮಿಸಿರುವುದು ಕತೂಹಲಕ್ಕೆ ಕಾರಣವಾಗಿದೆ.
ಸಚಿವ ಸಂಪುಟ ಸಭೆಯಲ್ಲಿ ಬಂಡಾಯ ಚಟುವಟಿಕೆ ಸಂಬಂಧ ಚರ್ಚೆಯಾಗುವ ಸಾಧ್ಯತೆ ಇದೆ. ಅನೌಪಚಾರಿಕವಾಗಿ ಸಿಎಂ ಬೆಂಬಲಿಗ ಸಚಿವರು ಈ ಬಗ್ಗೆ ವಿಷಯ ಪ್ರಸ್ತಾಪಿಸುವ ಸಾಧ್ಯತೆ ಇದೆ. ಕೋವಿಡ್ ವಿಪತ್ತಿನ ಈ ಸಂದರ್ಭದಲ್ಲಿ ಇಂತಹ ಚಟುವಟಿಕೆಗಳಿಂದ ಪಕ್ಷಕ್ಕೆ, ಸರ್ಕಾರಕ್ಕೆ ಕೆಟ್ಟ ಹೆಸರು ಬರಲಿದೆ ಎಂಬ ಬಗ್ಗೆ ಆಕ್ಷೇಪ ವ್ಯಕ್ತಪಡಿಸುವ ಸಾಧ್ಯತೆ ಇದೆ. ಈ ಸಂಬಂಧ ಸಚಿವ ಸಿ.ಪಿ.ಯೋಗೇಶ್ವರ್ರಿಂದ ಸ್ಪಷ್ಟೀಕರಣ ಕೇಳುವ ಸಾಧ್ಯತೆ ಇದೆ.