ETV Bharat / city

ರಾಜ್ಯದಲ್ಲಿ ಹಿಜಾಬ್‌- ಕೇಸರಿ ಶಾಲು ವಿವಾದ: ಸಿಎಂ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ಆರಂಭ - ಸಿಎಂ ಸಭೆಯಲ್ಲಿ ಹಿಜಾಬ್ ವಿವಾದ ಬಗ್ಗೆ ಚರ್ಚೆ

ರಾಜ್ಯಾದ್ಯಂತ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಜೋರಾದ ಹಿನ್ನೆಲೆಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಶಾಲಾ ಕಾಲೇಜುಗಳಿಗೆ ರಜೆ ಕೊಡುವ ಮೂಲಕ ವಿವಾದಕ್ಕೆ ಕೊಂಚ ಮಟ್ಟಿಗೆ ತೆರೆ ಎಳೆಯಲಾಗಿದೆ. ಹೈಕೋರ್ಟ್‌ನಲ್ಲಿ ಈ ಸಂಬಂಧ ಇಂದು ಮತ್ತೆ ವಿಚಾರಣೆ ನಡೆಯಲಿದ್ದು, ಎಲ್ಲರ ಚಿತ್ತ ಕೋರ್ಟ್ ತೀರ್ಪಿನತ್ತ ನೆಟ್ಟಿದೆ. ಸಂಪುಟ ಸಭೆಯಲ್ಲಿಯೂ ಈ ಸಂಬಂಧ ಚರ್ಚೆ ನಡೆಯಲಿದೆ ಎಂದು ತಿಳಿದುಬಂದಿದೆ.

cm bommai Meeting
ಸಚಿವ ಸಂಪುಟ ಸಭೆ ಆರಂಭ
author img

By

Published : Feb 9, 2022, 12:03 PM IST

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ಆರಂಭಗೊಂಡಿದ್ದು, ರಾಜ್ಯದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿರುವ ಹಿಜಾಬ್ ವಿವಾದದ ಬಗ್ಗೆ ಗಂಭೀರ ಚರ್ಚೆ ನಡೆಯುವ ಸಾಧ್ಯತೆ ಇದೆ.

ರಾಜ್ಯಾದ್ಯಂತ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಜೋರಾದ ಹಿನ್ನೆಲೆಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಶಾಲಾ ಕಾಲೇಜುಗಳಿಗೆ ರಜೆ ಕೊಡುವ ಮೂಲಕ ವಿವಾದಕ್ಕೆ ಕೊಂಚ ಮಟ್ಟಿಗೆ ತೆರೆ ಎಳೆಯಲಾಗಿದೆ. ಹೈಕೋರ್ಟ್‌ನಲ್ಲಿ ಈ ಸಂಬಂಧ ಇಂದು ಮತ್ತೆ ವಿಚಾರಣೆ ನಡೆಯಲಿದ್ದು, ಎಲ್ಲರ ಚಿತ್ತ ಕೋರ್ಟ್ ತೀರ್ಪಿನತ್ತ ನೆಟ್ಟಿದೆ. ಸಂಪುಟ ಸಭೆಯಲ್ಲಿಯೂ ಈ ಸಂಬಂಧ ಚರ್ಚೆ ನಡೆಯಲಿದೆ ಎಂದು ತಿಳಿದುಬಂದಿದೆ.

ಸಚಿವ ಸಂಪುಟ ಸಭೆಯಲ್ಲಿ ರಾಜ್ಯವ್ಯಾಪಿ ಹಬ್ಬಿರುವ ವಿವಾದವನ್ನು ನಿಯಂತ್ರಿಸುವ ಬಗ್ಗೆ ಸಮಾಲೋಚನೆ‌ ನಡೆಯಲಿದೆ. ಒಂದು ವೇಳೆ ಹೈಕೋರ್ಟ್ ತೀರ್ಪು ಬಳಿಕವೂ ವಿವಾದ ಬಗೆಹರಿಯದಿದ್ದರೆ ಯಾವ ರೀತಿ ಕ್ರಮ ಕೈಗೊಳ್ಳಬೇಕೆಂಬುದರ ಕುರಿತು, ಎಲ್ಲಾ ಶಾಲಾ ಕಾಲೇಜುಗಳಿಗೆ ವಸ್ತ್ರಸಂಹಿತೆ ನೀತಿ ಜಾರಿಗೆ ತರುವ ಬಗ್ಗೆಯೂ ಚರ್ಚೆ ನಡೆಯಲಿದೆ. ಜೊತೆಗೆ ಹಿಜಾಬ್ ವಿವಾದ ಸಂಬಂಧ ಯಾರೂ ವಿವಾದಾತ್ಮಕ ಹೇಳಿಕೆ ನೀಡದಂತೆ ಸಚಿವರುಗಳಿಗೆ ಸಿಎಂ ತಾಕೀತು ಮಾಡುವ ಸಾಧ್ಯತೆ ಇದೆ.

ಸಭೆಯಲ್ಲಿ ಹಿಜಾಬ್, ಕೇಸರಿ ಶಾಲು ಸಂಬಂಧ ಜಿಲ್ಲೆಗಳ ಪರಿಸ್ಥಿತಿ ಬಗ್ಗೆ ಸಿಎಂ ಮಾಹಿತಿ ಪಡೆಯಲಿದ್ದಾರೆ. ಈಗಾಗಲೇ ಉಸ್ತುವಾರಿ ಸಚಿವರುಗಳಿಂದ ಆಯಾಯ ಜಿಲ್ಲೆಗಳ ಸ್ಥಿತಿಗತಿ ಬಗ್ಗೆ ಮಾಹಿತಿ ಸಂಗ್ರಹಿಸಲಾಗಿದೆ. ಇಡೀ ಪ್ರಕರಣ ತೀವ್ರಗೊಳ್ಳಲು ಕೆಲ ರಾಜಕೀಯ ಪಕ್ಷಗಳು, ಸಂಘಟನೆಗಳು ಕಾರಣ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆ, ತನಿಖೆಯ ಅಗತ್ಯತೆಯ ಬಗ್ಗೆಯೂ ಕೆಲ ಸಚಿವರು ವಿಷಯ ಪ್ರಸ್ತಾಪಿಸಲಿದ್ದಾರೆ.

ಇದನ್ನೂ ಓದಿ: 'ನಾನು ಹಿಜಾಬ್ ಹಾಕಲ್ಲ‌, ಅದು ಅವರವರ ಸ್ವಾತಂತ್ರ್ಯ': ಸರಿಗಮಪ ಖ್ಯಾತಿಯ ಗಾಯಕಿ ಸುಹಾನ ಸೈಯದ್

ಉಳಿದಂತೆ ಸಂಪುಟ ಸಭೆಯಲ್ಲಿ ಬೆಂಗಳೂರು ಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ ಸಂಬಂಧ ಹಲವು ಮಾರ್ಪಾಡುಗಳೊಂದಿಗೆ ನಿರ್ಮಾಣ ಮಾಡುವ ಪ್ರಸ್ತಾವನೆಗೆ ಅನುಮೋದನೆ ನೀಡಲಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಝಂಜುರವಾಡ ಗ್ರಾಮದ ಹತ್ತಿರ ಕೃಷ್ಣಾ ನದಿಯಿಂದ ಏತ ನೀರಾವರಿ ಯೋಜನೆ ಮೂಲಕ ಯಲ್ಲಮ್ಮನವಾಡಿ ಕೆರೆಗೆ ನೀರು ತುಂಬಿಸುವ ಯೋಜನೆಯ ಮೊದಲನೇ ಹಂತದ ಕಾಮಗಾರಿಯನ್ನು 49.51 ಕೋಟಿ ರೂ. ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡುವ ಸಾಧ್ಯತೆಯಿದೆ. ಕರ್ನಾಟಕ ಮುದ್ರಾಂಕ (ತಿದ್ದುಪಡಿ) ವಿಧೇಯಕ 2022ಗೆ ಅನುಮೋದನೆ ನೀಡುವ ಬಗ್ಗೆ ಚರ್ಚೆ ನಡೆಯಲಿದೆ. ಇನ್ನು ಜಲ ಜೀವನ ಮಿಷನ್ ಯೋಜನೆಯಡಿ ಹಲವು ಕಾಮಗಾರಿಗಳಿಗೆ ಅನುಮೋದನೆ ಸಿಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.