ಬೆಂಗಳೂರು: ಇಂದು ಅಥವಾ ನಾಳೆಯೊಳಗೆ ಸಚಿವ ಸಂಪುಟ ರಚನೆ ಕುರಿತು ಸಂದೇಶ ಬರುವ ಸಾಧ್ಯತೆ ಇದೆ. ಹೈಕಮಾಂಡ್ನಿಂದ ಸಂದೇಶ ಬಂದ ಕೂಡಲೇ ಸಚಿವ ಸಂಪುಟ ರಚನೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಆರ್.ಟಿ ನಗರದ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ರಚನೆ ಸಂಬಂಧ ಹೈಕಮಾಂಡ್ ಸಂದೇಶವನ್ನು ಎದುರು ನೋಡಲಾಗುತ್ತಿದೆ. ವರಿಷ್ಠರು ಸಂದೇಶ ನೀಡುತ್ತಿದ್ದಂತೆ ಸಂಪುಟ ರಚನೆ ಪ್ರಕ್ರಿಯೆ ಆರಂಭ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.
ಪ್ರವಾಹ ಸ್ಥಿತಿ, ಪರಿಹಾರ ಕಾರ್ಯಗಳ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಸೇರಿದಂತೆ ಹಿರಿಯ ಅಧಿಕಾರಿಗಳ ಜೊತೆ ಇಂದು ಸಭೆ ಮಾಡುತ್ತೇನೆ. ಎಲ್ಲಾ ಜಿಲ್ಲಾಧಿಕಾರಿಗಳಿಂದ ವರದಿ ತರಿಸಿಕೊಳ್ಳುತ್ತೇನೆ. ಹಣಕಾಸು ಇಲಾಖೆ ಅಧಿಕಾರಿಗಳ ಜೊತೆ ಸಭೆ ಮಾಡಿ ಅಗತ್ಯ ಹಣಕಾಸು ಬಿಡುಗಡೆ ಬಗ್ಗೆಯೂ ಸಭೆಯಲ್ಲಿ ಪ್ರಸ್ತಾಪ ಮಾಡುತ್ತೇನೆ ಎಂದು ಸಿಎಂ ತಿಳಿಸಿದರು.
ಇದನ್ನೂ ಓದಿ: ಸಂಪುಟ ರಚನೆ ಕಸರತ್ತು: ಬಿಎಸ್ವೈ ನಿವಾಸದಲ್ಲಿ ಸಿಎಂ ಬೊಮ್ಮಾಯಿ ಮಹತ್ವದ ಸಭೆ