ಬೆಂಗಳೂರು: ಪ್ರತಿ ವರ್ಷ ರಾಜ್ಯದಲ್ಲಿ 64,000 ಹೊಸ ಕ್ಯಾನ್ಸರ್ ಪ್ರಕರಣಗಳು ಪತ್ತೆಯಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ತಪಾಸಣೆಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ ನಿರ್ದೇಶಕ ಡಾ. ಸಿ.ರಾಮಚಂದ್ರ ಹೇಳಿದರು.
ಕಿದ್ವಾಯಿ ಆಸ್ಪತ್ರೆಯಲ್ಲಿ ಹಮ್ಮಿಕೊಂಡಿದ್ದ ಕ್ಯಾನ್ಸರ್ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ತನ ಕ್ಯಾನ್ಸರ್ ಪ್ರಕರಣಗಳು ದಿನೇ ದಿನೆ ಹೆಚ್ಚುತ್ತಿದೆ. ಕ್ಯಾನ್ಸರ್ ಪತ್ತೆ, ತಪಾಸಣೆ ಶಿಬಿರಗಳನ್ನು ಹೆಚ್ಚಾಗಿ ನಡೆಸುವ ಮೂಲಕ ಕ್ಯಾನ್ಸರ್ ಉಲ್ಬಣಗೊಳ್ಳದಂತೆ ತಡೆಯಬೇಕು. ಇಂತಹ ಶಿಬಿರಗಳು ಗ್ರಾಮೀಣ ಭಾಗದಲ್ಲಿ ಅಗತ್ಯವಿದೆ ಎಂದರು.
ಇನ್ನು ತಂಬಾಕು ಸೇವನೆಯಿಂದ ಸಹ ಕ್ಯಾನ್ಸರ್ ಹೆಚ್ಚುತ್ತದೆ. ಹಾಗಾಗಿ ಜೀವನಶೈಲಿಯನ್ನು ಬದಲಾಯಿಸಿಕೊಳ್ಳಬೇಕು, ಹೆಚ್ಚಾಗಿ ಜಂಕ್ ಫುಡ್ಗಳನ್ನು ಬಳಸಬಾರದು. ಪ್ರತಿ ದಿನ ವ್ಯಾಯಾಮ ಹಾಗೂ ವಾಕಿಂಗ್ ಮಾಡುವುದನ್ನು ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಪರಿಸರ ತಜ್ಞ ಡಾ.ಯಲಪ್ಪರೆಡ್ಡಿ ಅವರನ್ನು ಸನ್ಮಾನಿಸಲಾಯಿತು.