ಬೆಂಗಳೂರು: ಮುಷ್ಕರ ಒಂಭತ್ತನೇ ದಿನಕ್ಕೆ ಕಾಲಿಟ್ಟ ಹಿನ್ನೆಲೆಯಲ್ಲಿ ವಿನೂತನ ಧರಣಿ ನಡೆಸಲು ಸಾರಿಗೆ ನೌಕರರು ತೀರ್ಮಾನಿಸಿದ್ದು, ಸರ್ಕಾರದ ವಿರುದ್ಧ ಮೇಣದ ಬತ್ತಿ ಹಚ್ಚಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
ಮನೆಗಳಿಂದ ಹೊರಬಂದು ದೀಪ ಬೆಳಗಿಸುವ ಮೂಲಕ ತಮ್ಮ ಬದುಕನ್ನು ಕತ್ತಲಾಗಿಸಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಯಲಿದ್ದು, ಸಂಜೆ 6 ಗಂಟೆ ನಂತರ ರಾಜ್ಯಾದ್ಯಂತ ನೌಕರರು ಮೇಣದ ಬತ್ತಿ ಹಚ್ಚಿ ಪ್ರತಿಭಟನೆ ನಡೆಸಲಿದ್ದಾರೆ.
ಇನ್ನು ಪ್ರತಿಭಟನೆಯಲ್ಲಿ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕೋಡಿಹಳ್ಳಿ ಚಂದ್ರಶೇಖರ್ ವಿಶೇಷವಾಗಿ ಮನವಿ ಮಾಡಿದ್ದಾರೆ.
ಇದನ್ನೂ ಓದಿ:ದುಪ್ಪಟ್ಟು ಹಣ ವಸೂಲಿ ಮಾಡುತ್ತಿದ್ದ ಖಾಸಗಿ ಬಸ್ಗಳಿಗೆ ಎಚ್ಚರಿಕೆ ನೀಡಿದ ಆರ್ಟಿಒ ಅಧಿಕಾರಿಗಳು