ಬೆಂಗಳೂರು: ಧರ್ಮಸ್ಥಳದಿಂದ ಬರುವಾಗ ನೈಸ್ ರಸ್ತೆಯಲ್ಲಿ ಕಾರು-ಲಾರಿ ನಡುವೆ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದರೆ, ಮಗು ಸೇರಿ ನಾಲ್ವರು ಗಾಯಗೊಂಡಿದ್ದಾರೆ. ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಧ್ಯರಾತ್ರಿ ಅಪಘಾತ ಸಂಭವಿಸಿದೆ. 24 ವರ್ಷದ ಸುಲೋಚನ ಸಾವನ್ನಪ್ಪಿದ್ದಾರೆ.
ಅನೇಕಲ್ ಮೂಲದ ಮುರಳಿ ಎಂಬುವವರ ಕುಟುಂಬ ಧರ್ಮಸ್ಥಳಕ್ಕೆ ಹೋಗಿ ಕಾರಿನಲ್ಲಿ ವಾಪಸ್ ಆಗುತ್ತಿತ್ತು. ಈ ವೇಳೆ ವೇಗವಾಗಿ ಹೋಗುತ್ತಿದ್ದ ಲಾರಿಯು ಕಾರಿಗೆ ಡಿಕ್ಕಿ ಹೊಡೆದಿದೆ. ಮುರಳಿ ಸೇರಿ ನಾಲ್ವರು ಗಾಯಗೊಂಡಿದ್ದು, ಕಾರು ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಬ್ಯಾಡರಹಳ್ಳಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ: ತುಮಕೂರಿನಲ್ಲಿ ಭೀಕರ ಅಪಘಾತ: ನವ ವರ ಸೇರಿ ಮೂವರು ಸ್ಥಳದಲ್ಲೇ ಸಾವು!