ಬೆಂಗಳೂರು : ಸಿಎಂ ರಾಜಕೀಯ ಕಾರ್ಯದರ್ಶಿ ಎನ್. ಆರ್. ಸಂತೋಷ್ ಆತ್ಮಹತ್ಯೆ ಯತ್ನ ಪ್ರಕರಣ ಸಂಬಂಧ ಎಂ.ಎಸ್.ರಾಮಯ್ಯ ಆಸ್ಪತ್ರೆಯಿಂದ ಮೆಡಿಕಲ್ ಲೀಗಲ್ ಕೇಸ್ (ಎಂಎಲ್ ಸಿ) ವರದಿ ಆಧಾರದಡಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಸಂತೋಷ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಐಸಿಯುನಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಎನ್.ಆರ್ ಸಂತೋಷ್ ಗುಣಮುಖನಾದ ಬಳಿಕ ಕ್ರಮ ಕೈಗೊಳ್ಳಲು ಪೊಲೀಸರು ಸಿದ್ದತೆ ನಡೆಸಿದ್ದಾರೆ. ದಾಖಲಿಸಿಕೊಂಡಿರುವ ಎಫ್ಐಆರ್ನಲ್ಲಿ ಸಂತೋಷ್ನನ್ನೇ ಆರೋಪಿಯಾಗಿ ಮಾಡಲಾಗಿದೆ. ಐಪಿಸಿ 309ರ ಪ್ರಕಾರ ಆತ್ಮಹತ್ಯೆ ಯತ್ನ ಪ್ರಕರಣ ದಾಖಲಿಸಿಕೊಂಡಿದ್ದಾರೆ.