ETV Bharat / city

ಈ ಅಧಿವೇಶನದಲ್ಲಿ ಜಾತಿ ಗಣತಿ ವರದಿ ಮಂಡನೆಯಾಗಲ್ಲ: ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ

ಜಾತಿ ಗಣತಿ ವರದಿ ಹಿಂದುಳಿದ ವರ್ಗಗಳ ಇಲಾಖೆಯಯಲ್ಲಿದೆ. ಕಾಂತರಾಜು ವರದಿ ಸಿದ್ಧಪಡಿಸಿದ್ದರು. ವರದಿ ಆಯೋಗದ ಸುಪರ್ದಿಯಲ್ಲಿ ಇದೆ.‌ ಈ ಅಧಿವೇಶನದಲ್ಲಿ ಜಾತಿ ಜನಗಣತಿ ವರದಿ ಮಂಡನೆ ಇಲ್ಲ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದ್ದಾರೆ.

minister kota shrinivasa poojary
ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ
author img

By

Published : Aug 19, 2021, 3:18 PM IST

ಬೆಂಗಳೂರು: ಈ ಅಧಿವೇಶನದಲ್ಲಿ ಜಾತಿ ಜನಗಣತಿ ವರದಿ ಮಂಡನೆ ಇಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದ್ದಾರೆ.

ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ

ವಿಧಾನಸೌಧದಲ್ಲಿ ಮಾತನಾಡಿದ ಅವರು, ಜಾತಿ ಗಣತಿ ವರದಿ ಹಿಂದುಳಿದ ವರ್ಗಗಳ ಇಲಾಖೆಯಯಲ್ಲಿದೆ. ಕಾಂತರಾಜು ವರದಿ ಸಿದ್ಧಪಡಿಸಿದ್ದರು. ವರದಿ ಆಯೋಗದ ಸುಪರ್ದಿಯಲ್ಲಿ ಇದೆ.‌ ಸರ್ಕಾರಕ್ಕೆ ವರದಿ ಸಿಕ್ಕಿಲ್ಲ. ಹಿಂದುಳಿದ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ಅವರು ವರದಿಯನ್ನು ಸರ್ಕಾರಕ್ಕೆ ನೀಡಿಲ್ಲ ಎಂದು ಅವರು ತಿಳಿಸಿದರು.

ಹಿಂದೂಪರ ಸಂಘಟನೆಗಳ ಮೇಲಿನ ಪ್ರಕರಣಗಳು:

ಹಿಂದೂಪರ ಸಂಘಟನೆಗಳ ಮೇಲಿನ ಪ್ರಕರಣಗಳನ್ನು ವಾಪಸ್ ಪಡೆಯುವ ವಿಚಾರವಾಗಿ ಪ್ರತಿಕ್ರಿಯಿಸಿ, ಈ ಸಂಬಂಧ ಗೃಹ ಸಚಿವರಿಗೆ ಮನವಿ ಮಾಡಿದ್ದೇನೆ. ಪರಿಶೀಲಿಸಿ ಪ್ರಕರಣಗಳನ್ನು ವಾಪಸ್ ಪಡೆಯಲಾಗುತ್ತದೆ. ಹಿಂದಿನ ಸರ್ಕಾರದಲ್ಲಿ ಒಂದು ವರ್ಗ ಸಂಘಟನೆಗಳ ಮೇಲಿನ ಕೇಸ್​ಗಳನ್ನು ವಾಪಸ್ ಪಡೆಯಲಾಗಿತ್ತು. ಹಿಂದೂಪರ ಸಂಘಟನೆಗಳ ಮೇಲಿನ ಪ್ರಕರಣಗಳ ವಾಪಸ್​ಗೆ ಮನವಿಗಳು ಬಂದಿದ್ದವು. ಈ ಮನವಿಗಳನ್ನು ನಾನು ಗೃಹ ಸಚಿವರಿಗೆ ಕೊಟ್ಟಿದ್ದೇನೆ ಎಂದರು.

ದೇವರಾಜ್ ಅರಸು ಪ್ರಶಸ್ತಿ ‌ಪ್ರದಾನ:

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಹಿಂದುಳಿದ ವರ್ಗಗಳ ಜನಾಂಗವನ್ನು ಮುಖ್ಯವಾಹಿನಿಗೆ ತರಲು ಶ್ರಮಿಸುತ್ತಿರುವ ವ್ಯಕ್ತಿಗಳನ್ನು ಗುರುತಿಸಲಾಗಿದೆ. ಅವರಿಗೆ ನಾಳೆ ಡಿ. ದೇವರಾಜ್ ಅರಸು ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ: ಜನಾಶೀರ್ವಾದ ಯಾತ್ರೆ ಕಾರ್ಯಕ್ರಮದಲ್ಲಿ ಕೋವಿಡ್ ನಿಯಮ ಉಲ್ಲಂಘನೆ: ಆಯೋಜಕ ಸೇರಿ ಹಲವರ ವಿರುದ್ಧ ದೂರು

ಕೋವಿಡ್ ಹಿನ್ನೆಲೆ ಕಳೆದ ಮೂರು ವರ್ಷಗಳಲ್ಲಿ ಪ್ರಶಸ್ತಿ ನೀಡಲು ಸಾಧ್ಯವಾಗಿರಲಿಲ್ಲ. ನಾಳೆ, ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಸಿಎಂ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. 2019-20ನೇ ಸಾಲಿಗೆ ಬೆಳಗಾವಿ ಜಿಲ್ಲೆಯ ಬಸವಪ್ರಭು ಲಖನಗೌಡ ಪಾಟೀಲರನ್ನು ಆಯ್ಕೆ ಮಾಡಲಾಗಿದೆ.

2020-21ಸಾಲಿನ ಪ್ರಶಸ್ತಿಗೆ ಬೆಂಗಳೂರಿನ ಸುಂಮಗಲಿ ಸೇವಾಶ್ರಮದ ಎಸ್.ಸಿ. ಸುಶೀಲಮ್ಮರನ್ನು ಆಯ್ಕೆ ಮಾಡಲಾಗಿದೆ. ಇನ್ನು 2021-22ಸಾಲಿನ ಡಿ. ದೇವರಾಜು ಅರಸು ಪ್ರಶಸ್ತಿಗೆ ಕೆ. ಭಾಸ್ಕರ್ ದಾಸ್ ಎಕ್ಕಾರು ಅವರನ್ನು ಆಯ್ಕೆ ಮಾಡಲಾಗಿದೆ. ನಾಳೆ ಸಿಎಂ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಐದು ಲಕ್ಷ ರೂ. ನಗದು ಪ್ರಶಸ್ತಿ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.