ETV Bharat / city

ಅಶ್ವತ್ಥ್ ನಾರಾಯಣ್-ಎಂ.ಬಿ. ಪಾಟೀಲ್​ರದ್ದು ಕೇವಲ ಸಹಜ ಭೇಟಿಯಷ್ಟೇ: ಡಿಕೆಶಿ ವ್ಯಂಗ್ಯ - KPCC President D.K. Shivakumar

ರೈತರ ಸಮಸ್ಯೆಗಳ ಬಗ್ಗೆ, ಸಾಮಾನ್ಯ ಪ್ರಜೆಗಳ ಸಮಸ್ಯೆಯ ಬಗ್ಗೆ ಚರ್ಚಿಸುವ ಬದಲು ಕೇವಲ ಲಂಚದ ಹಣದ ಬಗ್ಗೆ ಮಾತ್ರ ಸರ್ಕಾರ ಗಮನ ಹರಿಸುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಆರೋಪಿಸಿದ್ದಾರೆ. ಇದೇ ವೇಳೆ ಮಾಜಿ ಸಚಿವ ಎಂ ಬಿ ಪಾಟೀಲ್​- ಸಚಿವ ಅಶ್ವತ್ಥ್​ನಾರಾಯಣ ಅವರ ಭೇಟಿ ಕುರಿತು ಅವರು ಮಾತನಾಡಿದ್ದಾರೆ.

D.K.Shivakumar Talked to Press
ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ
author img

By

Published : May 10, 2022, 6:02 PM IST

ಬೆಂಗಳೂರು: ಉನ್ನತ ಶಿಕ್ಷಣ ಸಚಿವ ಅಶ್ವತ್ಥ್​​ ನಾರಾಯಣ್ ಅವರು ತಮ್ಮ ಇಲಾಖೆ ಹಗರಣಗಳ ವಿಚಾರಗಳ ಬಗ್ಗೆ ಯಾರು ಧ್ವನಿ ಎತ್ತಬಾರದು, ತಮ್ಮನ್ನು ತಾವು ರಕ್ಷಣೆ ಮಾಡಿಕೊಳ್ಳಬೇಕು ಎಂಬ ಉದ್ದೇಶದಿಂದ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಅವರನ್ನು ಭೇಟಿ ಮಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಎಂ.ಬಿ. ಪಾಟೀಲ್ ಅವರ ನಿವಾಸಕ್ಕೆ ಸಚಿವ ಅಶ್ವತ್ಥ್​ ನಾರಾಯಣ್ ಅವರ ಭೇಟಿ ಕುರಿತು ಸದಾಶಿವನಗರ ನಿವಾಸದ ಬಳಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್ ಅವರು, ಇದೊಂದು ಖಾಸಗಿ ಭೇಟಿ. ನಾವು ಶಿಕ್ಷಣ ಸಂಸ್ಥೆಗಳನ್ನು ಹೊಂದಿದ್ದು, ಸಲಹೆ ಪಡೆಯಲು ಎಂ.ಬಿ. ಪಾಟೀಲರ ಮನೆಗೆ ಹೋಗಿದ್ದೆ ಎಂಬ ಸಬೂಬು ನೀಡುತ್ತಾರೆ. ಈಗ ಈ ವಿಚಾರವಾಗಿ ಚರ್ಚೆ ಮಾಡುವುದು ಬೇಡ. ಈ ವಿಚಾರವಾಗಿ ಅವರನ್ನೇ ಕೇಳಿ ಎಂದರು.

ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ

ಧ್ವನಿವರ್ಧಕದಲ್ಲಿ ಹನುಮಾನ್​ ಚಾಲೀಸ ಪಠಿಸುವ ವಿಚಾರವಾಗಿ ಬಿ.ಕೆ. ಹರಿಪ್ರಸಾದ್ ಅವರು ಹಿಂದೂ ಭಯೋತ್ಪಾದಕರು ಎಂದು ನೀಡಿರುವ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ, ಬಿ.ಕೆ. ಹರಿಪ್ರಸಾದ್ ಅವರು ಹಿರಿಯ ನಾಯಕರು. ಜವಾಬ್ದಾರಿಯುತ ಸ್ಥಾನದಲ್ಲಿ ಇದ್ದಾರೆ. ಅವರ ಹೇಳಿಕೆಗಳನ್ನು ಮಾಧ್ಯಮಗಳು ತಿರುಚಬಾರದು. ಭಯೋತ್ಪಾದಕರು ಎಂದರೆ ಅಶಾಂತಿ ಉಂಟುಮಾಡುವವರು, ಎರಡು ಜಾತಿಗಳ ನಡುವೆ, ಎರಡು ಧರ್ಮಗಳ ನಡುವೆ ದ್ವೇಷದ ಕಿಚ್ಚು ಹಚ್ಚುವವರು ಎಂಬ ಅರ್ಥದಲ್ಲಿ ಮಾತನಾಡಿದ್ದಾರೆ ಎಂದು ಡಿಕೆಶಿ ಸಮರ್ಥಿಸಿಕೊಂಡರು.

ರಸಗೊಬ್ಬರ ಬೆಲೆ ಏರಿಕೆ, ರೈತರಿಗೆ ನೀಡುವ ಬೆಂಬಲ ಬೆಲೆ, ರೈತರಿಂದ ಖರೀದಿ ಮಾಡುವ ಹಾಲಿನ ದರ ಹೆಚ್ಚಳದ ಬಗ್ಗೆ ಸರ್ಕಾರ ಗಮನ ಹರಿಸಲಿ. ಅಡುಗೆ ಅನಿಲಕ್ಕೆ ₹50 ಹೆಚ್ಚಿಸುತ್ತಿರುವಾಗ, ಹಾಲು ಉತ್ಪಾದಕರಿಗೆ ಸರ್ಕಾರ ನಾಲ್ಕು ರುಪಾಯಿ ಹೆಚ್ಚು ನೀಡಿದರೆ ಏನಾಗುತ್ತದೆ? ಗೋವುಗಳಿಗೆ ಹಾಕುವ ಫುಡ್​ಗಳಿಗೆ 600 ರೂಪಾಯಿಂದ ಸಾವಿರದ ಇನ್ನೂರು ರೂಪಾಯಿಗೆ ಏರಿಕೆಯಾಗಿದೆ. ಇದಕ್ಕೆಲ್ಲಾ ಹೊಣೆ ಯಾರು? ರೈತರು ಬದುಕುವುದಾದರೂ ಹೇಗೆ? ರೈತರನ್ನು ಹೇಗೆ ರಕ್ಷಣೆ ಮಾಡಬೇಕು ಎಂಬುದರ ಬಗ್ಗೆ ಸರ್ಕಾರ ಚಿಂತಿಸುತ್ತಿಲ್ಲ. ಕೇವಲ ಲಂಚ ಹಣದ ಬಗ್ಗೆ ಮಾತ್ರ ಸರ್ಕಾರ ಗಮನ ಹರಿಸುತ್ತಿದೆ ಎಂದರು.

ಶಿವಮೊಗ್ಗ ಪ್ರವಾಸ ಈಶ್ವರಪ್ಪನವರ ವಿರುದ್ಧದ ಪ್ರತಿಭಟನೆಯೇ ಎಂಬ ಬಗ್ಗೆ ಕೇಳಿದ ಪ್ರಶ್ನೆಗೆ, 'ನಾನು ಯಾವುದೇ ಒಬ್ಬ ವ್ಯಕ್ತಿ ವಿರುದ್ಧ ಪ್ರತಿಭಟನೆಗೆ ಹೋಗುತ್ತಿಲ್ಲ. ನಾವು ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ವಿಚಾರವಾಗಿ ರಾಜ್ಯದಾದ್ಯಂತ ಪ್ರತಿಭಟನೆ ಮಾಡುತ್ತಿದ್ದು, ಸರ್ಕಾರ ಈ ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿದೆ. ಈ ಪ್ರಕರಣದಲ್ಲಿ ಈಶ್ವರಪ್ಪನವರು ರಾಜೀನಾಮೆ ನೀಡಿದ್ದು, ನಾವು ಬಿಜೆಪಿ ಸರ್ಕಾರದ ಎಲ್ಲಾ ವೈಫಲ್ಯಗಳನ್ನು ಜನರಿಗೆ ತಿಳಿಸುವ ಕೆಲಸ ಮಾಡುತ್ತಿದ್ದೇವೆ ಎಂದು ಉತ್ತರಿಸಿದರು.

ವಿವಿಧ ಇಲಾಖೆಗಳ ಅಕ್ರಮ ವಿಚಾರವಾಗಿ ಕೇಳಿದ ಪ್ರಶ್ನೆಗೆ, 'ಕೇವಲ ಕೆಪಿಎಸ್ಸಿ ಮಾತ್ರವಲ್ಲ. ಪಿಡಬ್ಲ್ಯೂಡಿ, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಬಮೂಲ್, ಸಹಕಾರ ಸಂಘಗಳಲ್ಲಿನ ಅವ್ಯವಹಾರ ಕುರಿತು ಮಾಧ್ಯಮಗಳಲ್ಲಿ ವರದಿಗಳು ಬರುತ್ತಿವೆ. ವಿವಿಧ ಇಲಾಖೆಗಳ ಸರ್ಕಾರಿ ಹುದ್ದೆಗಳಿಗೆ ಎಷ್ಟೆಷ್ಟು ಹಣ ನಿಗದಿಯಾಗಿದೆ ಎಂದು ಪತ್ರಿಕೆಗಳಲ್ಲಿ ಪಟ್ಟಿಗಳು ಪ್ರಕಟವಾಗಿದೆ. ಸರ್ಕಾರಕ್ಕೆ ತಾಕತ್ತಿದ್ದರೆ ಇವರಿಗೆ ನೋಟಿಸ್ ನೀಡಲಿ.

ಸಹಕಾರ ಸಂಘದಲ್ಲಿ ನಡೆದಿದೆ ಎನ್ನಲಾದ ಹಗರಣದ ಬಗ್ಗೆ ಸಚಿವ ಸೋಮಶೇಖರ್ ಅವರ ಜೊತೆ ಮಾತನಾಡಿದ್ದು, ಇಲಾಖೆಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ಅವರು ತಿಳಿಸಿದ್ದಾರೆ. ನಿನ್ನೆ 300 ರೂಪಾಯಿಗೆ ರಸಗೊಬ್ಬರ ಖರೀದಿ ಮಾಡಿ, ಸಾವಿರ ರೂಪಾಯಿಗೆ ತಮಿಳುನಾಡು ಹಾಗೂ ಕೇರಳ ರಾಜ್ಯಗಳಿಗೆ ಕಳುಹಿಸುತ್ತಿದ್ದಾರೆ ಎಂಬ ಮಾಹಿತಿ ಬಂದಿದೆ. ಈ ಸರ್ಕಾರದಲ್ಲಿ ಕಾಸಿಲ್ಲದೆ ಯಾವುದೇ ಕೆಲಸಗಳು ನಡೆಯುತ್ತಿಲ್ಲ. ಈ ವಿಚಾರವಾಗಿ ನಾವು ಮುಂದಿನ ದಿನಗಳಲ್ಲಿ ಪಟ್ಟಿಯನ್ನು ಬಿಡುಗಡೆ ಮಾಡುತ್ತೇವೆ ಎಂದು ಡಿಕೆಶಿ ತಿಳಿಸಿದ್ದಾರೆ.

ಇದನ್ನೂ ಓದಿ: ತಿಹಾರ್, ಪರಪ್ಪನ ಆಗ್ರಹಾರ ಜೈಲಿಗಾದ್ರೂ ಹಾಕಲಿ ನಾನು ಹೆದರಲ್ಲ: ಡಿ.ಕೆ.ಶಿವಕುಮಾರ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.