ETV Bharat / city

ಗೋಹತ್ಯೆ ನಿಷೇಧ ಕಾಯ್ದೆ: ಸೆಕ್ಷನ್ 5 ಜಾರಿಗೊಳಿಸಲು ಅನುಮತಿ ಕೋರಿದ ಸರ್ಕಾರ

author img

By

Published : Dec 16, 2021, 4:39 PM IST

ಗೋಹತ್ಯೆ ನಿಷೇಧ ಕಾಯ್ದೆಯ ಅಧಿನಿಯಮ-2020 ರ ಸೆಕ್ಷನ್ 5 ಜಾರಿಗೊಳಿಸಲು ಅನುಮತಿ ಕೊಡುವಂತೆ ಹೈಕೋರ್ಟ್​ಗೆ ರಾಜ್ಯ ಸರ್ಕಾರ ಮನವಿ ಮಾಡಿದೆ.

ಗೋಹತ್ಯೆ ನಿಷೇಧ ಕಾಯ್ದೆ
ಗೋಹತ್ಯೆ ನಿಷೇಧ ಕಾಯ್ದೆ

ಬೆಂಗಳೂರು: ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ-2020ರ ಸೆಕ್ಷನ್ 5 ಜಾರಿಗೊಳಿಸಲು ಅನುಮತಿ ನೀಡುವಂತೆ ರಾಜ್ಯ ಸರ್ಕಾರ, ಹೈಕೋರ್ಟ್​ಗೆ ಮನವಿ ಮಾಡಿದೆ.

ಹತ್ಯೆಗಾಗಿ ಜಾನುವಾರುಗಳನ್ನು ಸಾಗಣೆ ಮಾಡುವುದನ್ನು ನಿರ್ಬಂಧಿಸುವ ಈ ನಿಯಮ ಜಾರಿಗೊಳಿಸಲು ಸರ್ಕಾರ ಲಿಖಿತ ಮನವಿ ಸಲ್ಲಿಸಿದ್ದು, ಇದಕ್ಕೆ ಯಾವುದೇ ಆಕ್ಷೇಪಣೆ ಇದ್ದಲ್ಲಿ ಅದನ್ನು ಮೂರು ವಾರಗಳಲ್ಲಿ ದಾಖಲಿಸುವಂತೆ ಹೈಕೋರ್ಟ್ ಅರ್ಜಿದಾರರಿಗೆ ಸೂಚಿಸಿದೆ.

ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಿರುವ ಸರ್ಕಾರದ ಕ್ರಮ ಪ್ರಶ್ನಿಸಿ ಆರೀಫ್ ಜಮೀಲ್ ಹಾಗೂ ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇಂದು ಸಿಜೆ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ, ಸರ್ಕಾರದ ಪರ ಹಾಜರಿದ್ದ ಅಡ್ವೊಕೇಟ್ ಜನರಲ್ ಪೀಠಕ್ಕೆ ಮನವಿ ಮಾಡಿ, ಕಾಯ್ದೆಯ ಸೆಕ್ಷನ್ 5ನ್ನು ನ್ಯಾಯಾಲಯದ ಅನುಮತಿ ಇಲ್ಲದೇ ಜಾರಿಗೊಳಿಸುವುದಿಲ್ಲ ಎಂದು ಸರ್ಕಾರ ಈ ಮೊದಲು ಭರವಸೆ ನೀಡಿದೆ. ಆದ್ದರಿಂದ ನಿಯಮ ಜಾರಿಗೊಳಿಸಲು ಸಮ್ಮತಿಸುವಂತೆ ಕೋರಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಸೆಕ್ಷನ್ 5ಕ್ಕೆ ನಿಯಮಗಳನ್ನು ರೂಪಿಸಲಾಗಿದೆಯೇ ಎಂದು ಪ್ರಶ್ನಿಸಿತು. ಎಜಿ ಉತ್ತರಿಸಿ ಸುಗ್ರೀವಾಜ್ಞೆ ಇದೀಗ ಕಾಯ್ದೆಯಾಗಿದೆ. ಹಾಗೆಯೇ, ಸೆಕ್ಷನ್ 5ಕ್ಕೆ ಪೂರಕ ನಿಯಮಗಳನ್ನು ರೂಪಿಸಲಾಗಿದೆ ಎಂದು ತಿಳಿಸಿದರು.

ಇದೇ ವೇಳೆ, ಅರ್ಜಿದಾರರ ಪರ ಹಿರಿಯ ವಕೀಲ ಪ್ರೊ.ರವಿವರ್ಮ ಕುಮಾರ್, ಇಂದು ಅರ್ಜಿಯ ಅಂತಿಮ ವಾದ ಆಲಿಸುವುದಾಗಿ ನ್ಯಾಯಾಲಯ ಹಿಂದಿನ ವಿಚಾರಣೆ ವೇಳೆ ತಿಳಿಸಿತ್ತು. ನ್ಯಾಯಲಯ ಸಮ್ಮತಿಸಿದರೆ ವಾದ ಮಂಡಿಸಲಾಗುವುದು. ಕಡಿಮೆ ಕಾಲಾವಕಾಶದಲ್ಲೇ ಅಂತಿಮ ವಾದ ಮಂಡಿಸಲಾಗುವುದು ಎಂದರು.

ಪ್ರತಿಕ್ರಿಯಿಸಿದ ಪೀಠ, ಅಂತಿಮ ವಾದವನ್ನು ಆಲಿಸೋಣ. ಮೊದಲು ಸೆಕ್ಷನ್ 5ನ್ನು ಜಾರಿಗೊಳಿಸಲು ಕೋರಿ ಸರ್ಕಾರ ಸಲ್ಲಿಸಿರುವ ಅರ್ಜಿಗೆ ಆಕ್ಷೇಪಣೆಗಳಿದ್ದರೆ ಅದನ್ನು ಮೂರು ವಾರಗಳಲ್ಲಿ ದಾಖಲಿಸಿ. ನಂತರ ವಿಚಾರಣೆ ಮುಂದುವರೆಸೋಣ ಎಂದು ತಿಳಿಸಿ, ವಿಚಾರಣೆ ಮುಂದೂಡಿತು.

(ಇದನ್ನೂ ಓದಿ: ಗೋ ಹತ್ಯೆ ನಿಷೇಧ ಕಾಯ್ದೆ ತರುವಲ್ಲಿ ಆಸಕ್ತಿ; ಆದರೆ ಸರ್ಕಾರಿ ಗೋ ಶಾಲೆ ಸ್ಥಾಪಿಸುವಲ್ಲಿ ಮಾತ್ರ ನಿರಾಸಕ್ತಿ?)

ETV Bharat Logo

Copyright © 2024 Ushodaya Enterprises Pvt. Ltd., All Rights Reserved.