ETV Bharat / city

ಡಿಕೆಶಿ ನಿವಾಸದ ಮೇಲಿನ ಸಿಬಿಐ ದಾಳಿ ದ್ವೇಷ ರಾಜಕಾರಣದ ಪ್ರತೀಕ: ದಿನೇಶ್ ಗುಂಡೂರಾವ್​

author img

By

Published : Oct 21, 2019, 8:04 PM IST

ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರ ನಿವಾಸ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​ ನಾಯಕರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದು ದ್ವೇಷ ರಾಜಕಾರಣಕ್ಕೆ ಉದಾಹರಣೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್​ ಖಂಡಿಸಿದ್ದಾರೆ.

cbi-raid-on-dkshivakumar-homes

ಬೆಂಗಳೂರು: ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರ ನಿವಾಸಗಳ ಮೇಲಿನ ಸಿಬಿಐ ದಾಳಿ ದ್ವೇಷದ ರಾಜಕಾರಣಕ್ಕೆ ಸೂಕ್ತ ಉದಾಹರಣೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರ ಮೇಲೆ ದ್ವೇಷದ ರಾಜಕಾರಣ ನಿರಂತರವಾಗಿ ನಡೆಯುತ್ತಿದೆ. ಭ್ರಷ್ಟಾಚಾರದ ವಿರುದ್ಧ ನಿಷ್ಪಕ್ಷಪಾತವಾಗಿ ತನಿಖೆ ಮಾಡಲಿ. ಆದರೆ ಇಲ್ಲಿ ಆ ರೀತಿ ನಡೆದಿಲ್ಲ. ಇದೆಲ್ಲವನ್ನೂ ಕಾಂಗ್ರೆಸ್ ಸವಾಲಾಗಿ ಸ್ವೀಕರಿಸುತ್ತದೆ ಎಂದರು.

ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕರು

ಶಾಸಕ ಹೆಚ್.ಕೆ. ಪಾಟೀಲ್ ಮಾತನಾಡಿ, ಪ್ರತಿಪಕ್ಷಗಳನ್ನು ದಮನ ಮಾಡುವುದಕ್ಕೆ ಕೇಂದ್ರ ಸರ್ಕಾರ ಇಡಿ, ಐಟಿ, ಸಿಬಿಐ ತನಿಖಾ ಸಂಸ್ಥೆಗಳ ಬಳಕೆ ಮಾಡಿಕೊಳ್ಳುತ್ತಿದೆ. ಇದು ಪ್ರಜಾಪ್ರಭುತ್ವಕ್ಕೆ ಮಾರಕವೆಂದು ಆತಂಕ ವ್ಯಕ್ತಪಡಿಸಿದರು.

ಇನ್ನು, ಉತ್ತರ ಕರ್ನಾಟಕ ಭಾಗದಲ್ಲಿ ಮಳೆ, ಪ್ರವಾಹ ವಿಚಾರವಾಗಿ ಮಾತನಾಡಿದ ಅವರು, ಈವರೆಗೂ ಪರಿಹಾರ ಸಿಕ್ಕಿಲ್ಲ. ಮತ್ತೆ ಮಳೆ ಪ್ರಾರಂಭವಾಗಿದೆ. ಆದರೂ ಸರ್ಕಾರ ಎಚ್ಚೆತ್ತುಕೊಂಡಿಲ್ಲ. ಜನರಿಗೆ ತುಂಬಾ ತೊಂದರೆ ಆಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

Intro:newsBody:ಡಿಕೆಶಿ ನಿವಾಸದ ಮೇಲೆ ಸಿಬಿಐ ದಾಳಿ ದ್ವೇಶದ ರಾಜಕಾರಣಕ್ಕೆ ಸೂಕ್ತ ಉದಾಹರಣೆ: ದಿನೇಶ್

ಬೆಂಗಳೂರು: ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರ ಕನಕಪುರ ಹಾಗೂ ದಿಲ್ಲಿ ನಿವಾಸಗಳ ಮೇಲೆ ಸಿಬಿಐ ದಾಳಿ ದ್ವೇಶದ ರಾಜಕಾರಣ ಕ್ಕೆ ಸೂಕ್ತ ಉದಾಹರಣೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ನಾಯಕರ ಮೇಲೆ ದ್ವೇಶದ ರಾಜಕಾರಣ ನಿರಂತರವಾಗಿ ನಡೆಯುತ್ತಿದೆ. ಭ್ರಷ್ಟಾಚಾರದ ವಿರುದ್ಧ ನಿಸ್ಪಕ್ಷಪಾತವಾಗಿ ತನಿಖೆ ಮಾಡಿ. ಆದರೆ ಇಲ್ಲಿ ಆ ರೀತಿ ನಡೆದಿಲ್ಲ. ಇದೆಲ್ಲವನ್ನೂ ಕಾಂಗ್ರೆಸ್ ಸವಾಲಾಗಿ ಸ್ವೀಕರಿಸುತ್ತದೆ ಎಂದರು.
ರಾಮಲಿಂಗರೆಡ್ಡಿ, ಎಚ್ಕೆಪಿ ಹೇಳಿಕೆ
ಡಿಕೆಶಿ ದೆಹಲಿ ನಿವಾಸದ ಮೇಲೆ ಸಿಬಿಐ ದಾಳಿ ವಿಚಾರ ಈಗಷ್ಟೇ ಅದರ ಬಗ್ಗೆ ಗಮನಕ್ಕೆ ಬಂದಿದೆ. ಇನ್ನೂ ಸಂಪೂರ್ಣವಾಗಿ ಅದರ ಬಗ್ಗೆ ಗೊತ್ತಾಗಿಲ್ಲ ಎಂದರು.
ಮಾಜಿ ಸಚಿವ ಹೆಚ್ ಕೆ ಪಾಟೀಲ್ ಮಾತನಾಡಿ, ಇಡಿ, ಐಟಿ , ಸಿಬಿಐ ತನಿಖಾ ಸಂಸ್ಥೆಗಳನ್ನು ವಿರೋಧ ಪಕ್ಷಗಳನ್ನು ಧಮನ ಮಾಡುವುದಕ್ಕೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇದು ಯಾವುದು ಆರೋಗ್ಯಕರ ಅಲ್ಲ ಪ್ರಜಾಪ್ರಭುತ್ವ ರಕ್ಷಣೆ ಮಾಡಲು ಕಟ್ಟಲು ಆಗಲ್ಲ. ಪ್ರಜಾಪ್ರಭುತ್ವಕ್ಕೆ ಮಾರಕವಾದದ್ದವು.
ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ವಿಚಾರ ಮಾತನಾಡಿದ ಎಚ್ ಕೆ ಪಾಟೀಲ್, ಇನ್ನೂ ಪರಿಹಾರ ಸಿಕ್ಕಿಲ್ಲ ಮತ್ತೆ ಮಳೆ ಪ್ರಾರಂಭ ಆಗಿದೆ. ರಾಜ್ಯ ಸರ್ಕಾರ ಎಚ್ಚೆತುಕೊಂಡಿಲ್ಲ ಈಗಲಾದ್ರು ಎಚ್ಚೆತುಕೊಳ್ಳಬೇಕು. ಜನರಿಗೆ ತುಂಬಾ ತೊಂದರೆ ಆಗುತ್ತದೆ. ಸಂತ್ರಸ್ತರ ಕಡೆ ಗಮನಕೊಟ್ಟಿಲ್ಲ ಮತ್ತೆ ಅವಶ್ಯಕತೆ ಇದ್ರೆ ಹೋರಾಟ ಮಾಡುತ್ತೇವೆ ಎಂದು ಹೇಳಿದರು.Conclusion:news
ETV Bharat Logo

Copyright © 2024 Ushodaya Enterprises Pvt. Ltd., All Rights Reserved.