ಬೆಂಗಳೂರು: ನಗರದಲ್ಲಿ ಮಾದಕ ವಸ್ತುಗಳ ಮಾರಾಟದಲ್ಲಿ ತೊಡಗಿದ್ದವ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕಡಿಮೆ ಬೆಲೆಗೆ ಎಂಡಿಎಂಎ ಖರೀದಿಸುತ್ತಿದ್ದ ಈತ ಅವುಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಲಾಭ ಗಳಿಸುತ್ತಿದ್ದ. ಹೈಗ್ರೌಂಡ್ಸ್ ಠಾಣಾ ವ್ಯಾಪ್ತಿಯಲ್ಲಿ ದಂಧೆಯಲ್ಲಿ ತೊಡಗಿದ್ದಾಗ ಆರೋಪಿಯನ್ನ ಬಂಧಿಸಿರುವ ಸಿಸಿಬಿಯ ಮಾದಕ ವಸ್ತು ನಿಗ್ರಹ ದಳ ಪೊಲೀಸರು ಆರೋಪಿಯಿಂದ 1.5 ಲಕ್ಷ ಮೌಲ್ಯದ ಎಂಡಿಎಂಎ ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ: ಭೂ ಒತ್ತುವರಿ ವಿವಾದ: ವಿಚಾರಣೆಗೆ ಶಿವಲಿಂಗವನ್ನೇ ಸೈಕಲ್‌ನಲ್ಲಿ ಸಾಗಿಸಿ ತಂದರು!