ಬೆಂಗಳೂರು : ಅಂತಾರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಗಳನ್ನಾಗಿ ಮಾಡಿ ದೂರ ಸಂಪರ್ಕ ಇಲಾಖೆಗೆ ವಂಚಿಸುತ್ತಿದ್ದ ಆರೋಪಿಯನ್ನ ಬಂಧಿಸುವಲ್ಲಿ ಸಿಸಿಬಿ ಯಶಸ್ವಿಯಾಗಿದೆ.
ಕೇರಳ ಮೂಲದ ಅಶ್ರಫ್ ಎಂಬಾತ ಬಂಧಿತ. ಈತ ಅಂತಾರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಗಳನ್ನಾಗಿ ಮಾಡಿ, ದೂರ ಸಂಪರ್ಕ ಇಲಾಖೆಗೆ ವಂಚಿಸುತ್ತಿದ್ದ.
ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡಸಿ ಅನಧಿಕೃತ ಟೆಲಿಫೋನ್ ಎಕ್ಸೇಂಜ್ ನಡೆಸುತ್ತಿದ್ದ ಅಶ್ರಫ್ನನ್ನು ಬಂಧಿಸಲಾಗಿದ್ದು, ಆರೋಪಿಯಿಂದ ಇಲೆಕ್ಟ್ರಿಕಲ್ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಈ ಕುರಿತು ಸೋಲದೇವನ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.