ETV Bharat / city

ಸಾಮಾಜಿಕ ಕಾರ್ಯಕರ್ತ ಅಶೋಕ್ ಕುಮಾರ್ ಅಡಿಗ ಸಿಸಿಬಿ ವಶಕ್ಕೆ - Social Worker Ashok Kumar Adiga

ಸಾಮಾಜಿಕ ಕಾರ್ಯಕರ್ತ ಅಶೋಕ್ ಕುಮಾರ್ ಅಡಿಗ ವಿರುದ್ಧ ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಸಿಸಿಬಿ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ‌..

ಅಶೋಕ್ ಕುಮಾರ್ ಅಡಿಗ
ಅಶೋಕ್ ಕುಮಾರ್ ಅಡಿಗ
author img

By

Published : May 16, 2022, 1:16 PM IST

ಬೆಂಗಳೂರು : ಇಸ್ಪೀಟ್ ಕ್ಲಬ್ ನಡೆಸುವ ಬಗ್ಗೆ ಆಡಿಯೋವೊಂದು ವೈರಲ್ ಆದ ವಿಚಾರಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಅಶೋಕ್ ಕುಮಾರ್ ಅಡಿಗ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸಿಸಿಬಿ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ‌.

ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ರಮೇಶ್ ಎಂಬುವರು ನೀಡಿದ ದೂರಿನ ಮೇರೆಗೆ ಆರ್ಮ್ಸ್ ಕಾಯ್ದೆ 25, 3 ಹಾಗೂ ಐಪಿಸಿ ಸೆಕ್ಷನ್ 384, 420, 506b ಅಡಿ ಎಫ್‌ಐಆರ್ ದಾಖಲಾಗಿದೆ. ಒಂದು ತಿಂಗಳ ಹಿಂದೆ ಮಾಗಡಿ ರಸ್ತೆಯ ಕ್ಲಬ್‌ವೊಂದರಲ್ಲಿ ಇಸ್ಪೀಟ್ ಕ್ಲಬ್ ಮಾಲೀಕರ ಸಭೆ ನಡೆಸಿದ್ದ ಅಡಿಗ,ಈ ವೇಳೆ ತನ್ನ ಹೆಸರಲ್ಲಿ ಕ್ಲಬ್ ಇದ್ದರೆ ಯಾರು ರೈಡ್ ಮಾಡಲ್ಲ. ಇದಕ್ಕಾಗಿ ಪ್ರತಿ ತಿಂಗಳು ₹50 ಸಾವಿರ ನೀಡಬೇಕು ಎಂದು ಹೇಳಿದ್ದ.

ಆದರೆ, ಇದಕ್ಕೆ ರಮೇಶ್ ಹಾಗೂ ಶ್ರೀನಿವಾಸ್ ಎಂಬುವರು ಒಪ್ಪಿರಲಿಲ್ಲ. ಹೀಗಾಗಿ, ನನ್ನ ಸಹಕಾರವಿಲ್ಲದೆ ಹೇಗೆ ಕ್ಲಬ್ ನಡೆಸುತ್ತೀರಿ ಎಂದು ಆವಾಜ್ ಹಾಕಿದ್ದಲ್ಲದೇ, ಪಿಸ್ತೂಲ್ ತೋರಿಸಿ ನಾನು ಅರ್ಧ ಗಂಟೆಯಲ್ಲಿ ನಿನ್ನ ಕ್ಲಬ್ ಕ್ಲೋಸ್ ಮಾಡಿಸುತ್ತೇನೆ ಎಂದು ಶ್ರೀನಿವಾಸ್​ ಬಳಿ 50 ಸಾವಿರ ತೆಗೆದುಕೊಂಡು ಹೋಗಿದ್ದ ಎಂದು ದೂರು ದಾಖಲಾಗಿದೆ. ಅಷ್ಟೇ ಅಲ್ಲ, ಪ್ರಕರಣಕ್ಕೆ ಸಂಬಂಧಿಸಿದಂತೆ ಆಡಿಯೋವೊಂದು ವೈರಲ್​ ಆಗಿತ್ತು.

ಇದನ್ನೂ ಓದಿ: ಸಾಗರ : ಹಾವು ಹಿಡಿಯಲು ಹೋದ ಯುವಕನಿಗೆ ಹಾವಿನಿಂದಲೇ ಕಡಿತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.