ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪದಡಿ ಸಿಸಿಬಿಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಇನ್‌ಸ್ಪೆಕ್ಟರ್‌ಗೆ ನಾಲ್ಕು ವರ್ಷಗಳ ಜೈಲು ಶಿಕ್ಷೆ ಹಾಗೂ 50 ಲಕ್ಷ ರೂ.ದಂಡ ವಿಧಿಸಿ 23ನೇ ಸಿಸಿಎಚ್ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.
2006ರಲ್ಲಿ ಬೆಂಗಳೂರು ನಗರ ಸಿಸಿಬಿ ಶಾಖೆಯಲ್ಲಿ ಇನ್ಸ್‌ಪೆಕ್ಟರ್ ಆಗಿ ಕರ್ತವ್ಯ ಮಾಡುವಾಗ ಆದಾಯಕ್ಕಿಂತ ಹೆಚ್ಚು ಆಸ್ತಿ ಸಂಪಾದನೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಆಗಿನ ಲೋಕಾಯುಕ್ತ ಪೊಲೀಸರು ಮನೆ ಮೇಲೆ ದಾಳಿ ನಡೆಸಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುವಾಗ 79,79,966 ರೂಪಾಯಿ ಅಕ್ರಮವಾಗಿ ಹಣ ಸಂಪಾದನೆ ಮಾಡಿರುವುದನ್ನು ಪತ್ತೆ ಹಚ್ಚಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
16 ವರ್ಷಗಳ ವಿಚಾರಣೆ ಬಳಿಕ ತೀರ್ಪು ನೀಡಿರುವ 23 ನೇ ಸಿಸಿಎಚ್ ವಿಶೇಷ ನ್ಯಾಯಾಲಯದ ನ್ಯಾ.ಕೆ.ಲಕ್ಷ್ಮೀನಾರಾಯಣ ಭಟ್ ಅವರು ಇನ್‌ಸ್ಪೆಕ್ಟರ್‌ಗೆ ನಾಲ್ಕು ವರ್ಷ ಸಜೆ ಹಾಗೂ 50 ಲಕ್ಷ ದಂಡ ವಿಧಿಸಿದೆ. ದಂಡ ಕಟ್ಟಲು ವಿಫಲನಾದರೆ 6 ತಿಂಗಳು ಸಾಧಾರಣ ಶಿಕ್ಷೆ ಅನುಭವಿಸಬೇಕು ಎಂದು ಹೇಳಿದೆ.
ಪತ್ನಿಗೂ ಶಿಕ್ಷೆ ವಿಧಿಸಿದ ಕೋರ್ಟ್ : ಇನ್ಸ್‌ಪೆಕ್ಟರ್ ಪತ್ನಿ ಬಿಲ್ಕೀಶ್ ಜಹಾನ್ ಅಕ್ರಮ ಆಸ್ತಿ ಗಳಿಕೆಗೆ ಪತಿಗೆ ಪ್ರಚೋದನೆ ನೀಡಿದ್ದರು. ಈಕೆಯ ಹೆಸರಿನಲ್ಲಿ ಆಸ್ತಿ ಕೂಡ ಹೊಂದಿರುವುದು ವಿಚಾರಣೆ ಸಾಬೀತಾಗಿದ್ದರಿಂದ 3 ವರ್ಷ ಜೈಲು ಹಾಗೂ 50 ಸಾವಿರ ದಂಡ ವಿಧಿಸಿದೆ. ದಂಡ ಕಟ್ಟದಿದ್ದಲ್ಲಿ ಹೆಚ್ಚುವರಿಯಾಗಿ ಎರಡು ತಿಂಗಳು ಸಾಧಾರಣ ಜೈಲು ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
ಇದನ್ನೂ ಓದಿ : ಬಿಬಿಎಂಪಿ ಮಾಜಿ ಮಹಿಳಾ ಕಾರ್ಪೋರೇಟರ್‌ಗೆ ಸೇರಿದ 3. 35 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು