ETV Bharat / city

ಹಣ ಪಡೆದಿರುವ ಆರೋಪ: ಕೆಲ ಹೊತ್ತಲ್ಲೇ ಸಿಸಿಬಿ ವಿಚಾರಣೆಗೆ ನಟಿ ರಾಧಿಕಾ ಕುಮಾರಸ್ವಾಮಿ

author img

By

Published : Jan 7, 2021, 5:41 PM IST

Updated : Jan 8, 2021, 10:44 AM IST

ನಟಿ ರಾಧಿಕಾ ಕುಮಾರಸ್ವಾಮಿಗೆ ಸಿಸಿಬಿಯಿಂದ ನೊಟೀಸ್

17:36 January 07

ಸಿಸಿಬಿ ವಿಚಾರಣೆಗೆ ನಟಿ ರಾಧಿಕಾ ಕುಮಾರಸ್ವಾಮಿ

ಬೆಂಗಳೂರು: ವಂಚನೆ ಆರೋಪಯಿಂದ ಹಣ ಪಡೆದಿರುವ ಆರೋಪ ಎದುರಿಸುತ್ತಿರುವ ಸ್ಯಾಂಡಲ್​​ವುಡ್ ನಟಿ ರಾಧಿಕಾ ಕುಮಾರಸ್ವಾಮಿ ಕೆಲ ಹೊತ್ತಲ್ಲೇ ಸಿಸಿಬಿ ವಿಚಾರಣೆಗೆ ಹಾಜರಾಗಲಿದ್ದಾರೆ.

ವಂಚನೆ ಆರೋಪದಲ್ಲಿ ಬಂಧಿತರಾಗಿರುವ ಯುವರಾಜ್​​ನಿಂದ 75 ಲಕ್ಷ ಹಣ ಪಡೆದಿರುವ ಆರೋಪ ಹಿನ್ನೆಲೆ ರಾಧಿಕಾಗೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ನೋಟಿಸ್ ಜಾರಿ ಮಾಡಿತ್ತು. ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ಬೆಳಗ್ಗೆ 11 ಗಂಟೆಗೆ ಹಾಜರಾಗುವಂತೆ ರಾಧಿಕಾ ಕುಮಾರಸ್ವಾಮಿ ಅವರಿಗೆ ಸೂಚಿಸಲಾಗಿತ್ತು.

ರಾಜಕಾರಣಿ, ಸರ್ಕಾರಿ ನೌಕರರಿಗೆ ಸೇರಿದಂತೆ ಹಲವರಿಗೆ ಹಣ ವಂಚನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಯುವರಾಜ್​ನನ್ನು ಸಿಸಿಬಿ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಬಂಧಿತರ ಬ್ಯಾಂಕ್ ಖಾತೆಗಳನ್ನು ಜಪ್ತಿ ಮಾಡಿ ಪರಿಶೀಲಿಸಿದಾಗ ರಾಧಿಕಾ ಕುಮಾರಸ್ವಾಮಿ ಬ್ಯಾಂಕ್ ಅಕೌಂಟ್​ಗೆ ಹಣ ಹಾಕಿರುವುದು ಬೆಳಕಿಗೆ ಬಂದಿತ್ತು.

ಈ ಹಿನ್ನೆಲೆಯಲ್ಲಿ ಬುಧವಾರವಷ್ಟೇ ರಾಧಿಕಾ ಸುದ್ದಿಗೋಷ್ಠಿ ನಡೆಸಿ, ಸಿನಿಮಾ ನಿರ್ಮಾಣಕ್ಕಾಗಿ ಯುವರಾಜ್​​ನಿಂದ 15 ಲಕ್ಷ ಹಾಗೂ ಬೇರೆ ಖಾತೆಯಿಂದ 60 ಲಕ್ಷ ಹಣ ಬಂದಿರುವುದಾಗಿ ಹೇಳಿದ್ದಾರೆ.

ರಾಧಿಕಾ ಹೇಳಿಕೆಯಲ್ಲಿ ಗೊಂದಲ ಮೂಡಿದ ಕಾರಣ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿರುವುದಾಗಿ ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

ಇದನ್ನೂ ಓದಿ: ಸ್ವಾಮಿ 15 ಲಕ್ಷ ಮಾತ್ರ ನನ್ನ ಖಾತೆಗೆ ಹಾಕಿದ್ದು: ನಟಿ ರಾಧಿಕಾ ಕುಮಾರಸ್ವಾಮಿ

Last Updated : Jan 8, 2021, 10:44 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.