ಬೆಂಗಳೂರು: ಸ್ಯಾಂಡಲ್ವುಡ್ಗೆ ಡ್ರಗ್ಸ್ ನಂಟು ಆರೋಪ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಸಿಸಿಬಿ ಪೊಲೀಸರು ಇದೀಗ ನಟ ಹಾಗೂ ಟಿವಿ ಕಾರ್ಯಕ್ರಮಗಳ ನಿರೂಪಕ ಅಕುಲ್ ಬಾಲಾಜಿ, ನಿರ್ಮಾಪಕ ಸಂತೋಷ್ ಕುಮಾರ್ ಮತ್ತು ಮಾಜಿ ಶಾಸಕ ಆರ್ ವಿ ದೇವರಾಜ್ ಅವರ ಮಗ ಯುವರಾಜ್ಗೆ ನೋಟಿಸ್ ನೀಡಿದ್ದಾರೆ.
ಪ್ರಕರಣ ಸಂಬಂಧ ನಟಿ ರಾಗಿಣಿ, ಸಂಜನಾ, ಪ್ರತೀಕ್ ಶೆಟ್ಟಿ, ವೈಭವ್ ಜೈನ್ ಹಾಗೂ ಇತರೆ ಆರೋಪಿಗಳಿಂದ ಮಾಹಿತಿ ಪಡೆದಿರುವ ಸಿಸಿಬಿ ಪೊಲೀಸರು, ನಾಳೆ ಬೆಳಗ್ಗೆ 10 ಗಂಟೆಗೆ ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ಈ ಮೂವರಿಗೆ ಸೂಚನೆ ನೀಡಿದ್ದಾರೆ.
ನಾಳೆ ಮೂವರ ಬಳಿಯಿಂದ ಮೊಬೈಲ್ಗಳನ್ನು ವಶಕ್ಕೆ ಪಡೆದುಕೊಂಡು ಪೊಲೀಸರು ಎಫ್ಎಸ್ಎಲ್ ಕಚೇರಿಗೆ ರವಾನೆ ಮಾಡಲಿದ್ದಾರೆ.
ಐಂದ್ರಿತಾ ಹಾಗೂ ದಿಗಂತ್ ವಿಚಾರಣೆ ವೇಳೆ ಕೂಡ ಅಕುಲ್ ಮತ್ತು ಸಂತೋಷ್ ಹೆಸರು ಪ್ರಸ್ತಾಪವಾಗಿದೆ. ಪ್ರತೀಕ್ ಶೆಟ್ಟಿ ನಡೆಸಿದ್ದ ಪಾರ್ಟಿಗಳಲ್ಲಿ ಯಾರೆಲ್ಲಾ ಭಾಗಿಯಾಗ್ತಿದ್ರು ಅನ್ನೋ ಕುರಿತಂತೆ ಅಧಿಕಾರಿಗಳಿಗೆ ದಿಗಂತ್ - ಐಂದ್ರಿತಾ ಮಾಹಿತಿ ನೀಡಿದ್ದರು ಎನ್ನಲಾಗ್ತಿದೆ.