ಬೆಂಗಳೂರು: ಕೊರೊನಾ ಭೀತಿಯನ್ನೇ ಬಂಡವಾಳ ಮಾಡಿಕೊಂಡು ಅಧಿಕ ಬೆಲೆಯಲ್ಲಿ ಮಾಸ್ಕ್ ಮಾರಾಟ ಮಾಡುತ್ತಿದ್ದ ನಗರದ 210 ಮೆಡಿಕಲ್ ಶಾಪ್ಗಳ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ ಎಚ್ಚರಿಕೆ ನೀಡಿದ್ದಾರೆ.
ಕೊರೊನಾ ಭೀತಿ ಹಚ್ಚಾದ ಹಿನ್ನೆಲೆ ಮೆಡಿಕಲ್ ಶಾಪ್ನಲ್ಲಿ ಹೆಚ್ಚಿನ ಬೆಲೆಗೆ ಮಾಸ್ಕ್ಗಳನ್ನು ಮಾರಾಟಮಾಡಲಾಗುತ್ತಿತ್ತು. ಮಾಹಿತಿ ತಿಳಿದ ಸಿಸಿಬಿ ಅಧಿಕಾರಿಗಳು ಏಕಕಾಲಕ್ಕೆ ನಗರದ 210 ಮೆಡಿಕಲ್ ಶಾಪ್ಗಳ ಮೇಲೆ ದಾಳಿ ನಡೆಸಿದ್ದಾರೆ. ಜಯನಗರ, ಕಲಾಸಿಪಾಳ್ಯ, ಚಾಮರಾಜಪೇಟೆ, ಸಂಜಯನಗರ ಹಾಗೂ ಮಹಾಲಕ್ಷ್ಮಿ ಲೇಔಟ್ ಸುತ್ತಮುತ್ತಲಿನಲ್ಲಿರುವ ಮೆಡಿಕಲ್ ಶಾಪ್ಗಳಲ್ಲಿ ಅಧಿಕ ಮೊತ್ತಕ್ಕೆ ಮಾಸ್ಕ್ಗಳ ಮಾರಾಟ ಮಾಡುತ್ತಿರುವುದು ಪತ್ತೆಯಾಗಿದೆ.
ಮೆಡಿಕಲ್ ಶಾಪ್ಗಳ ಮೇಲೆ ಕ್ರಮಕ್ಕೆ ಅಧಿಕಾರಿಗಳಿಗೆ ಸಿಸಿಬಿ ಸೂಚನೆ ನೀಡಿದೆ. ಕಳೆದ ವಾರ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳಿಂದ ದಾಳಿ ನಡೆದಿತ್ತು ಸದ್ಯ ಸಿಸಿಬಿ ಪೊಲೀಸರಿಂದ ಮತ್ತೆ ನಗರದ ಮೆಡಿಕಲ್ ಶಾಪ್ಗಳ ಮೇಲೆ ದಾಳಿ ಮಾಡಿ ಅಧಿಕ ಬೆಲೆಯಲ್ಲಿ ಮಾಸ್ಕ್ ಮಾರಾಟ ಮಾಡುವ ಮಾಫಿಯಾಗೆ ಬ್ರೇಕ್ ಹಾಕಿದ್ದಾರೆ.