ಬೆಂಗಳೂರು: ಅಕ್ರಮವಾಗಿ ಆಮ್ಲಜನಕ ಸಿಲಿಂಡರ್ಗಳನ್ನು ದಾಸ್ತಾನು ಮಾಡಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಶಿವ ಗಣೇಶ್ ಮತ್ತು ಭರತ್ ಬಂಧಿತ ಆರೋಪಿಗಳು. ಬಂಧಿತರಿಂದ 4 ಆಮ್ಲಜನಕ ಸಿಲಿಂಡರ್ ವಶಕ್ಕೆ ಪಡೆಯಲಾಗಿದೆ. ಶೇಷಾದ್ರಿಪುರ ಮತ್ತು ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಗಳು ಆಕ್ಸಿಜನ್ ಸಿಲಿಂಡರ್ಗಳನ್ನು ಅಕ್ರಮವಾಗಿ ದಾಸ್ತಾನು ಮಾಡಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು. ಕಾಳಸಂತೆಯಲ್ಲಿ ಆಮ್ಲಜನಕ ಡೀಲ್ ಮಾಡುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಪೊಲೀಸ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ.