ETV Bharat / city

ಇನ್ಮುಂದೆ ಎಲ್ಲ ಕೋವಿಡ್ ಆಸ್ಪತ್ರೆಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಕೆ, ಬೆಡ್​ಗಳ ಮೇಲೆ‌ ನಿಗಾ: ಸುಧಾಕರ್​ - bangalore corona update

ಕಳೆದ ಏಳೆಂಟು ತಿಂಗಳ ಪ್ರಯತ್ನದಿಂದಾಗಿ ಪ್ರತಿ ತಾಲೂಕು ಆಸ್ಪತ್ರೆಯಲ್ಲಿ 50 ಆಕ್ಸಿಜನ್ ಹಾಸಿಗೆ ವ್ಯವಸ್ಥೆ ಮಾಡಲಾಗಿದೆ. ಹಾಗೆಯೇ 6 ವೆಂಟಿಲೇಟರ್ ಅಳವಡಿಸಬೇಕೆಂದು ಕ್ರಮ ವಹಿಸಲಾಗಿದೆ. ಆದರೆ ಕೆಲ ಆಸ್ಪತ್ರೆಯಲ್ಲಿ ತಜ್ಞರು ಇಲ್ಲದೇ, ವೆಂಟಿಲೇಟರ್ ಇದ್ದರೂ ಆಕ್ಸಿಜನ್ ಮಾತ್ರ ಬಳಸಲಾಗುತ್ತಿದೆ. ಈ ಸಮಸ್ಯೆ ಪರಿಹರಿಸಲು ಅರವಳಿಕೆ ತಜ್ಞರು, ವೈದ್ಯರನ್ನು ತಾತ್ಕಾಲಿಕವಾಗಿ ನಿಯೋಜಿಸಲು ಸೂಚಿಸಲಾಗಿದೆ ಎಂದು ಸುಧಾಕರ್​ ಮಾಹಿತಿ ನೀಡಿದರು.

  CCTV camera installation in all Covid hospitals

author img

By

Published : May 11, 2021, 9:51 PM IST

ಬೆಂಗಳೂರು: ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದ್ದು, ಆತಂಕಕ್ಕೆ ಒಳಗಾಗುವ ಸೋಂಕಿತರು ಅನಿವಾರ್ಯವಲ್ಲದಿದ್ದರೂ ಆಕ್ಸಿಜನ್ ಬೆಡ್ ಮೊರೆ ಹೋಗುತ್ತಿದ್ದಾರೆ.

ಇತ್ತ ಹೆಚ್ಚುತ್ತಿರುವ ಆಕ್ಸಿಜನ್ ಬೇಡಿಕೆ ತಗ್ಗಿಸಲು ಎಚ್‍ಎಫ್ ಎನ್ ಒ ಬದಲು ಪರ್ಯಾಯವಾಗಿ ವೆಂಟಿಲೇಟರ್ ಅಳವಡಿಸುವ ಚಿಂತನೆಯಲ್ಲಿ ಸರ್ಕಾರ ಇದೆ. ಈ ಸಂಬಂಧ ಎಲ್ಲ ಜಿಲ್ಲೆಗಳ ಆರೋಗ್ಯಾಧಿಕಾರಿಗಳೊಂದಿಗೆ ವಿಡಿಯೋ ಸಭೆ ನಡೆಸಿದ ಸಚಿವ ಸುಧಾಕರ್, ಮಧ್ಯಮ ಪ್ರಮಾಣದ ಲಕ್ಷಣ ಇರುವ ಕೋವಿಡ್ ಸೋಂಕಿತರಿಗೆ ನಿಮಿಷಕ್ಕೆ 20 - 60 ಲೀಟರ್ ಆಮ್ಲಜನಕ ಬೇಕಾಗುತ್ತದೆ. ಆಮ್ಲಜನಕದ ಸಮಸ್ಯೆ ಇರುವುದರಿಂದ ಬೇರೆ ಕ್ರಮ ವಹಿಸಬೇಕಿದೆ. ಇದಕ್ಕಾಗಿ ಎಚ್ಎಫ್‍ಎನ್​ಒ ಗಿಂತ ಹೆಚ್ಚು ಪರಿಣಾಮಕಾರಿಯಾಗಿ ಎನ್‍ಐವಿ (ವೆಂಟಿಲೇಟರ್) ಅಳವಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ

ಇದರಿಂದಾಗಿ ಶೇ.80 ರಷ್ಟು ಆಕ್ಸಿಜನ್ ಬೇಡಿಕೆ ಕಡಿಮೆಯಾಗುತ್ತದೆ. ಎಚ್‍ಎಫ್‍ಎನ್​​ಒ ಇರುವಲ್ಲಿ ಎನ್ ಐವಿ ವೆಂಟಿಲೇಟರ್ ಅಳವಡಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ಅರವಳಿಕೆ ತಜ್ಞರು, ವೈದ್ಯರನ್ನು ತಾತ್ಕಾಲಿಕವಾಗಿ ನಿಯೋಜನೆ:

ಕಳೆದ ಏಳೆಂಟು ತಿಂಗಳ ಪ್ರಯತ್ನದಿಂದಾಗಿ ಪ್ರತಿ ತಾಲೂಕು ಆಸ್ಪತ್ರೆಯಲ್ಲಿ 50 ಆಕ್ಸಿಜನ್ ಹಾಸಿಗೆ ವ್ಯವಸ್ಥೆ ಮಾಡಲಾಗಿದೆ. ಹಾಗೆಯೇ 6 ವೆಂಟಿಲೇಟರ್ ಅಳವಡಿಸಬೇಕೆಂದು ಕ್ರಮ ವಹಿಸಲಾಗಿದೆ. ಆದರೆ, ಕೆಲ ಆಸ್ಪತ್ರೆಯಲ್ಲಿ ತಜ್ಞರು ಇಲ್ಲದೆ, ವೆಂಟಿಲೇಟರ್ ಇದ್ದರೂ ಆಕ್ಸಿಜನ್ ಮಾತ್ರ ಬಳಸಲಾಗುತ್ತಿದೆ. ಈ ಸಮಸ್ಯೆ ಪರಿಹರಿಸಲು ಅರವಳಿಕೆ ತಜ್ಞರು, ವೈದ್ಯರನ್ನು ತಾತ್ಕಾಲಿಕವಾಗಿ ನಿಯೋಜಿಸಲು ಸೂಚಿಸಲಾಗಿದೆ ಎಂದರು.

ಕೋವಿಡ್ ಆಸ್ಪತ್ರೆಯಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಲು ಈಗಾಗಲೇ ಆದೇಶಿಸಲಾಗಿದೆ. ಒಂದು ವಾರದಲ್ಲಿ ಎಲ್ಲ ಕಡೆ ಅಳವಡಿಸಲು ಸೂಚನೆ ನೀಡಲಾಗಿದೆ. ಸಿಸಿಟಿವಿ ಅಳವಡಿಕೆಯಿಂದ ಬೆಡ್ ಗಳ ಸಮರ್ಪಕ ಬಳಕೆ ಬಗ್ಗೆ ಕೂಡ ನಿಗಾ ಇಡಬಹುದು ಎಂದು ತಿಳಿಸಿದರು.

ಮರಣ ಪ್ರಮಾಣ ಕೆಲ ಜಿಲ್ಲೆಗಳಲ್ಲಿ ಹೆಚ್ಚುತ್ತಿದ್ದು, ಇದಕ್ಕೆ ಕಾರಣ ತಿಳಿಯಬೇಕಿದೆ. ಪಾಸಿಟಿವ್ ಬಂದ ಕೂಡಲೇ ತಕ್ಷಣ ಚಿಕಿತ್ಸೆ ಆರಂಭಿಸಬೇಕಿದೆ. ಪಾಸಿಟಿವ್ ಇಲ್ಲದೇ, ಲಕ್ಷಣ ಇದ್ದರೂ ಅವರನ್ನು ಕೋವಿಡ್ ಪಾಸಿಟಿವ್ ಎಂದೇ ಪರಿಗಣಿಸಿ ಚಿಕಿತ್ಸೆ ಕೊಡಬೇಕು ಎಂದು ಸೂಚಿಸಲಾಗಿದೆ. ರಾಜ್ಯದಲ್ಲಿ ಶೇ 33.09ರಷ್ಟು ಪಾಸಿಟಿವಿಟಿ ದರ ಇದೆ. ಈ ದರವನ್ನು ಶೇ5ರಷ್ಟಕ್ಕೆ ಇಳಿಸುವ ಗುರಿ ಇದೆ ಎಂದರು.

ಎಲ್ಲ ಜಿಲ್ಲೆಗಳಲ್ಲಿ ಕೋವಿಡ್ ಚಿಕಿತ್ಸೆ, ಮನೆ ಆರೈಕೆಯಲ್ಲಿರುವವರಿಗೆ ಚಿಕಿತ್ಸೆ ಮೊದಲಾದ ಕ್ರಮಗಳ ಬಗ್ಗೆ ಸಭೆಯಲ್ಲಿ ಮಾಹಿತಿ ಪಡೆದು, ಅಗತ್ಯ ಸಲಹೆ ಸೂಚನೆಗಳನ್ನು ನೀಡಲಾಗಿದೆ ಎಂದು ಹೇಳಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.