ಬೆಂಗಳೂರು: ನಮ್ಮ ದೇಶದಲ್ಲಿ ಯಾವುದೆ ಕಾರಣಕ್ಕೂ ಧರ್ಮದ ಆಧಾರದ ಮೇಲೆ ಪೌರತ್ವ ತಿದ್ದುಪಡಿ ಮಾಡುವುದು ಸರಿಯಲ್ಲ ಎಂದು ಸಂಸದ ಡಿ.ಕೆ ಸುರೇಶ್ ತಿಳಿಸಿದ್ದಾರೆ.
ಇಂದು ಬೇಗೂರಿನ ಬಿಬಿಎಂಪಿ ನೂತನ ಕಟ್ಟಡವನ್ನ ಉದ್ಘಾಟಿಸಿ ಮಾತನಾಡಿದ ಅವರು, ಪೌರತ್ವ ತಿದ್ದುಪಡಿ ವಿಚಾರ ಈಗಾಗಲೇ ಹಲವು ಬಾರಿ ಲೋಕಸಭೆಯಲ್ಲಿ ಚರ್ಚೆಯಾಗಿದೆ. ಈ ಕಾಯ್ದೆಯನ್ನ ಸ್ಟಾಂಡಿಂಗ್ ಕಮಿಟಿ ಮುಂದೆ ಇಟ್ಟು ಅದರ ಸಾಧಕ ಬಾಧಕಗಳನ್ನ ಚರ್ಚೆ ಮಾಡಿ, ನಂತರ ಅನುಷ್ಟಾನ ಮಾಡಿದರೆ ಜನರಿಗೆ ಅನುಕೂಲವಾಗಲಿದೆ. ಆದರೆ ಕೇಂದ್ರ ಸರ್ಕಾರ ತರಾತುರಿಯಲ್ಲಿ ಈ ಪೌರತ್ವ ತಿದ್ದುಪಡಿ ಕಾಯ್ದೆಯನ್ನ ಜಾರಿ ಮಾಡಲು ಹೊರಟಿರುವುದು ಇಡೀ ದೇಶದಲ್ಲಿ ಒಂದು ರೀತಿಯ ಅಶಾಂತಿಯ ವಾತಾವರಣ ಸೃಷ್ಟಿ ಮಾಡಿದೆ. ಹಾಗಾಗಿ ಕೇಂದ್ರ ಈ ವಿಚಾರದಲ್ಲಿ ಮತ್ತೊಮ್ಮೆ ಪರಾಮರ್ಶೆ ಮಾಡಬೇಕೆಂದು ಸುರೇಶ್ ತಿಳಿಸಿದರು.
ಸಿದ್ದರಾಮಯ್ಯ ರಾಜೀನಾಮೆ ಬಳಿಕ ಮಲ್ಲಿಕಾರ್ಜುನ ಖರ್ಗೆರವರು ರಾಜ್ಯ ರಾಜಕಾರಣಕ್ಕೆ ಮರಳುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಡಿ.ಕೆ ಸುರೇಶ್, ಖರ್ಗೆರವರು ನಮ್ಮ ರಾಷ್ಟ್ರ ನಾಯಕರು. ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿರೀಕ್ಷಿತ ಫಲಿತಾಂಶ ಬಾರದ ಕಾರಣ ಸಿದ್ದರಾಮಯ್ಯನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆ ಈ ರಾಜೀನಾಮೆಯನ್ನ ಯಾವುದೇ ಕಾರಣಕ್ಕೂ ಉರ್ಜಿತಗೊಳಿಸದಂತೆ ಎಐಸಿಸಿ ಕೇಂದ್ರ ನಾಯಕರಿಗೆ ತಿಳಿಸಲಾಗಿದೆ. ಹಾಗಾಗಿ ಸಿದ್ದರಾಮಯ್ಯನವರೇ ನಮ್ಮನ್ನ ಮುಂದೆಯೂ ಮುನ್ನಡೆಸಲಿದ್ದಾರೆ ಎಂದು ಡಿ.ಕೆ ಸುರೇಶ್ ತಿಳಿಸಿದ್ದಾರೆ.