ETV Bharat / city

ವೃತ್ತಿಪರ ಕೋರ್ಸ್​ಗಳ ಪ್ರವೇಶಕ್ಕೆ ಸಿಇಟಿ ಅಂಕ ಪರಿಗಣನೆ ಉತ್ತಮ ನಿರ್ಧಾರ: ಸಚಿವ ಸುರೇಶ್ ಕುಮಾರ್ - ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಸಿಇಟಿ

2020-21ನೇ ಸಾಲಿನ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಯನ್ನು ರದ್ದು ಮಾಡಲಾಗಿದೆ. ಇದರಿಂದ ಇಂಜಿನಿಯರಿಂಗ್ ಸೇರಿದಂತೆ ಎಲ್ಲ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಸಿಇಟಿ ಅಂಕಗಳನ್ನು ಮಾತ್ರ ಪರಿಗಣನೆ ಮಾಡಲು ಉನ್ನತ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಇದು ಉತ್ತಮ ನಿರ್ಧಾರ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್​ಕುಮಾರ್​ ಹೇಳಿದ್ದಾರೆ.

cet-marks-is-a-good-decision-for-admission-to-professional-courses
ಸಚಿವ ಸುರೇಶ್ ಕುಮಾರ್
author img

By

Published : Jun 8, 2021, 4:54 PM IST

ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ಎಲ್ಲ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಅಂಕಗಳನ್ನು ಮಾತ್ರ ಪರಿಗಣನೆ ಮಾಡಲು ನಿರ್ಧರಿಸಿರುವ ಉನ್ನತ ಶಿಕ್ಷಣ ಇಲಾಖೆಯ ನಿರ್ಧಾರವನ್ನು ಸಚಿವ ಸುರೇಶ್ ಕುಮಾರ್ ಸ್ವಾಗತಿಸಿದ್ದಾರೆ.

2020-21ನೇ ಸಾಲಿನ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಯನ್ನು ರದ್ದು ಮಾಡಲಾಗಿದೆ. ಇದರಿಂದ ಇಂಜಿನಿಯರಿಂಗ್ ಸೇರಿದಂತೆ ಎಲ್ಲ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಸಿಇಟಿ ಅಂಕಗಳನ್ನು ಮಾತ್ರ ಪರಿಗಣನೆ ಮಾಡಲು ಉನ್ನತ ಶಿಕ್ಷಣ ಇಲಾಖೆ ನಿರ್ಧರಿಸಿದೆ.

ಉನ್ನತ ಶಿಕ್ಷಣ ಸಚಿವ ಹಾಗೂ ಡಿಸಿಎಂ ಡಾ. ಸಿ.ಎನ್. ಅಶ್ವತ್ಥನಾರಾಯಣ, ಇಲಾಖೆಯ ಸಲಹೆಯನ್ನು ಪರಿಗಣಿಸಿದ್ದಾರೆ. ನಮ್ಮ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಇಂತಹ ನಿರ್ಧಾರ ಅತ್ಯವಶ್ಯಕವಾಗಿತ್ತು. ಅವರಿಗೆ ಭರವಸೆ‌ ತುಂಬಲು ಇದು ಅಗತ್ಯವಿತ್ತು. ಅತ್ಯಂತ ಕ್ಷಿಪ್ರಗತಿಯಲ್ಲಿ ಉಪಮುಖ್ಯಮಂತ್ರಿಗಳು ಇಂತಹದೊಂದು ತೀರ್ಮಾನ ಪ್ರಕಟಿಸಿದ್ದಾರೆ. ವ್ಯವಸ್ಥೆಯ ಕುರಿತಂತೆ ವಿಶ್ವಾಸ ಮೂಡುವ ಇಂತಹ ನಿರ್ಧಾರ ತೆಗೆದುಕೊಂಡ ಅವರಿಗೆ ನಾನು ಅಭಿನಂದಿಸುತ್ತೇನೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.