ಬೆಂಗಳೂರು: ಮಾಜಿ ಸಚಿವ ಡಿ ಕೆ ಶಿವಕುಮಾರ್ ಅವರನ್ನು ಇಂದು ಸಹ ವಿವಿಧ ನಾಯಕರು ಭೇಟಿ ಮಾಡಿ ಹಲವು ಮಹತ್ವದ ವಿಚಾರಗಳ ಕುರಿತು ಚರ್ಚಿಸಿದರು.
ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಡಿಕೆಶಿ ಅವರನ್ನು ಮಾಜಿ ಸಚಿವರಾದ ಚೆಲುವರಾಯಸ್ವಾಮಿ ಹಾಗೂ ಎಂ ಬಿ ಪಾಟೀಲ್ ಭೇಟಿ ಮಾಡಿ ಅವರೊಂದಿಗೆ ಕೆಲ ಕಾಲ ಸಮಾಲೋಚಿಸಿದರು. ಜೊತೆಗೆ ಶಿವಕುಮಾರ್ ಅವರಿಗೆ ಧೈರ್ಯ ತುಂಬುವ ಕೆಲಸ ಮಾಡಿದರು. ಈ ಇಬ್ಬರು ನಾಯಕರ ಜೊತೆ ಮಾತುಕತೆ ನಡೆಸಿದ ನಂತರ ಡಿಕೆಶಿ ರಾಮನಗರದತ್ತ ಪ್ರಯಾಣ ಬೆಳೆಸಿದರು.