ಬೆಂಗಳೂರು: ಕೊರೊನಾ ಸೋಂಕು ದೃಢಪಟ್ಟು ಆಸ್ಪತ್ರೆಗೆ ದಾಖಲಾಗಿರುವ ಆರೋಗ್ಯ ಸಚಿವ ಬಿ.ಶ್ರೀರಾಮುಲು ಶೀಘ್ರ ಗುಣಮುಖರಾಗಲಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ನಾಯಕರು ಹಾರೈಸಿದ್ದಾರೆ.
ಆರೋಗ್ಯ ಸಚಿವ ಶ್ರೀರಾಮುಲು ಅತಿ ಶೀಘ್ರದಲ್ಲಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ, ಮತ್ತೆ ಎಂದಿನಂತೆ ತಮ್ಮ ಕರ್ತವ್ಯ ನಿರ್ವಹಣೆಯಲ್ಲಿ ಸಕ್ರಿಯರಾಗಲಿ ಎಂದು ಹಾರೈಸುತ್ತೇನೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
ಸಚಿವ ಸಂಪುಟದ ಸಹೋದ್ಯೋಗಿ, ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರಿಗೆ ಕೋವಿಡ್ ಪಾಸಿಟಿವ್ ಬಂದಿರುವ ಸುದ್ದಿ ತಿಳಿದು ನನಗೆ ನೋವಾಗಿದೆ. ಆದಷ್ಟು ಬೇಗ ಶ್ರೀರಾಮುಲು ಅವರು ಗುಣಮುಖರಾಗಿ ಬರಲಿ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಟ್ವೀಟ್ ಮಾಡಿದ್ದಾರೆ.
ಇನ್ನು, ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು ಶೀಘ್ರ ಗುಣಮುಖರಾಗಿ, ನಿತ್ಯ ಜನಸೇವೆಗೆ ಹಿಂತಿರುಗುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥನೆ ಸಲ್ಲಿಸುತ್ತೇನೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಟ್ವೀಟ್ ಮಾಡಿದ್ದಾರೆ.