ETV Bharat / city

ಏಪ್ರಿಲ್ 23ಕ್ಕೆ ಸಿಎಂ ಬಿಎಸ್​ವೈ ಆಸ್ಪತ್ರೆಯಿಂದ ಬಿಡುಗಡೆ ಸಾಧ್ಯತೆ..? - Chief Minister BS Yeddyurappa discharge on April 23

ಸಿಎಂ ಆಸ್ಪತ್ರೆಗೆ ದಾಖಲಾಗಿ ಇಂದಿಗೆ ನಾಲ್ಕು ದಿನಗಳಾಗಿದ್ದು, ಇನ್ನೆರಡು ದಿನದಲ್ಲಿ ಯಡಿಯೂರಪ್ಪ ಅವರಿಗೆ ಮತ್ತೊಮ್ಮೆ ಕೊರೊನಾ ಪರೀಕ್ಷೆ ನಡೆಸಲಾಗುತ್ತದೆ. ಕೋವಿಡ್ ವರದಿ ನೆಗೆಟಿವ್ ಬಂದಲ್ಲಿ ಏಪ್ರಿಲ್ 23ರ ಶುಕ್ರವಾರದಂದು ಸಿಎಂ ಯಡಿಯೂರಪ್ಪ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುತ್ತದೆ ಎಂಬ ಮಾಹಿತಿ ತಿಳಿದುಬಂದಿದೆ.

Chief Minister BS Yeddyurappa
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
author img

By

Published : Apr 20, 2021, 2:05 PM IST

ಬೆಂಗಳೂರು: ಕೊರೊನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಏಪ್ರಿಲ್ 23ರಂದು ಆಸ್ಪತ್ರೆಯಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಉಪ ಚುನಾವಣಾ ಪ್ರಚಾರದ ವೇಳೆ ಜ್ವರ ಕಾಣಿಸಿಕೊಂಡಿದ್ದ ಬಿಎಸ್​ವೈಗೆ, ಪರೀಕ್ಷೆ ವೇಳೆ ಕೋವಿಡ್ ದೃಢಪಟ್ಟಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಏಪ್ರಿಲ್ 16ರಂದು ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಕೊರೊನಾ ದೃಢಪಟ್ಟಿದ್ದು, ಅಂದೇ ಅವರನ್ನು ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಳೆದ ನಾಲ್ಕು ದಿನಗಳಿಂದ ವೈದ್ಯಕೀಯ ತಂಡ ಸಿಎಂ ಯಡಿಯೂರಪ್ಪ ಅವರಿಗೆ ಕೋವಿಡ್-19 ಪ್ರೋಟೋಕಾಲ್ ಪ್ರಕಾರ, ಪ್ರತಿ ದಿನ ಮೂರು ಬಾರಿ ವೈದ್ಯಕೀಯ ತಪಾಸಣೆ ನಡೆಸುತ್ತಿದೆ. ಸಿಎಂ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಆಸ್ಪತ್ರೆಯಲ್ಲಿ ಹರ್ಷಚಿತ್ತರಾಗಿದ್ದಾರೆ ಎಂದು ಮಣಿಪಾಲ್ ಆಸ್ಪತ್ರೆ ಕಳೆದ ಮೂರು ದಿನದಿಂದ ಪ್ರತಿ ದಿನದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿ ಮಾಹಿತಿ ನೀಡುತ್ತಿದೆ.

ಸಿಎಂ ಆಸ್ಪತ್ರೆಗೆ ದಾಖಲಾಗಿ ಇಂದಿಗೆ ನಾಲ್ಕು ದಿನಗಳಾಗಿದ್ದು, ಇನ್ನೆರಡು ದಿನದಲ್ಲಿ ಯಡಿಯೂರಪ್ಪ ಅವರಿಗೆ ಮತ್ತೊಮ್ಮೆ ಕೊರೊನಾ ಪರೀಕ್ಷೆ ನಡೆಸಲಾಗುತ್ತದೆ. ಕೋವಿಡ್ ವರದಿ ನೆಗೆಟಿವ್ ಬಂದಲ್ಲಿ ಏಪ್ರಿಲ್ 23ರ ಶುಕ್ರವಾರದಂದು ಸಿಎಂ ಯಡಿಯೂರಪ್ಪ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುತ್ತದೆ ಎನ್ನಲಾಗಿದೆ.

ಕಳೆದ 8 ತಿಂಗಳ ಹಿಂದೆ 2020ರ ಆಗಸ್ಟ್ 2ರಂದು ಸಿಎಂ ಯಡಿಯೂರಪ್ಪ ಅವರಿಗೆ ಮೊದಲ ಬಾರಿ ಕೊರೊನಾ ಪಾಸಿಟಿವ್ ದೃಢಪಟ್ಟಿತ್ತು. ಆಗಲೂ ಮಣಿಪಾಲ್ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆದು, ವಾರದ ಬಳಿಕ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಈಗಲೂ ಬಹುತೇಕ ಗುಣಮುಖರಾಗಿರುವ ಸಿಎಂ ಇನ್ನೊಮ್ಮೆ ಕೊರೊನಾ ಪರೀಕ್ಷೆಗೆ ಒಳಗಾಗಬೇಕಿದ್ದು, ವರದಿ ನೆಗೆಟಿವ್ ಬರುತ್ತಿದ್ದಂತೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.

ಆಸ್ಪತ್ರೆಯಿಂದ ಬಿಡುಗಡೆಯಾದ ನಂತರ ಎರಡರಿಂದ ಮೂರು ದಿನ ಅಧಿಕೃತ ನಿವಾಸ ಕಾವೇರಿಯಲ್ಲೇ ಕ್ವಾರಂಟೈನ್ ಆಗಲಿರುವ ಸಿಎಂ, ನಂತರ ಎಂದಿನಂತೆ ಕರ್ತವ್ಯ ಆರಂಭಿಸಲಿದ್ದಾರೆ.

ಓದಿ: ರಾಜ್ಯಪಾಲರ ಸಭೆ ಬಳಿಕ ರಾಜ್ಯದಲ್ಲಿ ಕಠಿಣ ನಿಯಮ ಜಾರಿ: ಆರ್.ಅಶೋಕ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.