ETV Bharat / city

ಆದೇಶ ಪಾಲಿಸದಿದ್ದರೆ ಐಸಿಎಂಆರ್​ಗೆ ಪತ್ರ.. ದಾವಣಗೆರೆ ಜೆಜೆಎಂ ಮೆಡಿಕಲ್ ಕಾಲೇಜಿಗೆ ಸಿಎಂ ಎಚ್ಚರಿಕೆ...! - Minister Dr. Sudhakar

ದಾವಣಗೆರೆ ಜೆಜೆಎಂ ಮೆಡಿಕಲ್​ ಕಾಲೇಜು ಆಡಳಿತ ಮಂಡಳಿ ಜೊತೆ ಇನ್ನೊಮ್ಮೆ ಚರ್ಚೆ ನಡೆಸಿ ಮನವೊಲಿಸಬೇಕು. ಒಂದು ವೇಳೆ ಸರ್ಕಾರದ ಆದೇಶವನ್ನು ಪಾಲಿಸದೇ ಇದ್ದರೆ ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾಗೆ ಪತ್ರ ಬರೆಯುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್​ಗೆ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

Chief Minister BS Yeddyurappa statement
ಸರ್ಕಾರದ ಆದೇಶ ಪಾಲಿಸದಿದ್ದಲ್ಲಿ ಐಸಿಎಂಆರ್​ಗೆ ಪತ್ರ..ದಾವಣಗೆರೆ ಜೆಜೆಎಂ ಮೆಡಿಕಲ್ ಕಾಲೇಜಿಗೆ ಸಿಎಂ ಎಚ್ಚರಿಕೆ...!
author img

By

Published : Jul 12, 2020, 6:32 PM IST

ಬೆಂಗಳೂರು: ದಾವಣಗೆರೆಯ ಜೆಜೆಎಂ ಮೆಡಿಕಲ್ ಕಾಲೇಜು ಸರ್ಕಾರದ ಆದೇಶವನ್ನು ಪಾಲನೆ ಮಾಡದೇ ಇದ್ದಲ್ಲಿ ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾಗೆ ಪತ್ರ ಬರೆಯುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್​ಗೆ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ಜೆಜೆಎಂ ಮೆಡಿಕಲ್ ಪಿಜಿ ವಿದ್ಯಾರ್ಥಿಗಳು ಸಮಸ್ಯೆಯಲ್ಲಿ ಸಿಲುಕಿ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ, ಪರಿಸ್ಥಿತಿ ಕುರಿತು ಸಚಿವ ಡಾ. ಸುಧಾಕರ್ ಜೊತೆ ಸಿಎಂ ಯಡಿಯೂರಪ್ಪ ದೂರವಾಣಿ ಮೂಲಕ ಮಾತುಕತೆ ನಡೆಸಿ ಸಮಗ್ರ ಮಾಹಿತಿ ಪಡೆದುಕೊಂಡರು. ಬಳಿಕ ದಾವಣಗೆರೆ ಜೆಜೆಎಂ ಮೆಡಿಕಲ್ ಕಾಲೇಜು ಪಿಜಿ ವಿದ್ಯಾರ್ಥಿಗಳ ಶಿಷ್ಯ ವೇತನದ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಸಚಿವ ಸುಧಾಕರ್​ಗೆ ಸಿಎಂ ಸೂಚನೆ ನೀಡಿದರು. ಅಲ್ಲದೇ, ಕಾಲೇಜು ಆಡಳಿತ ಮಂಡಳಿ ಜೊತೆ ಇನ್ನೊಮ್ಮೆ ಚರ್ಚೆ ನಡೆಸಿ ಮನವೊಲಿಸಬೇಕು. ಒಂದು ವೇಳೆ ಸರ್ಕಾರದ ಆದೇಶವನ್ನು ಪಾಲಿಸದೇ ಇದ್ದರೆ ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾಗೆ ಪತ್ರ ಬರೆಯುವಂತೆ ಸೂಚನೆ ನೀಡಿದರು.

ಈ ವೇಳೆ ಸರ್ಕಾರ ವಿದ್ಯಾರ್ಥಿಗಳ ಪರವಾಗಿ ಇದ್ದು, ಅವರಿಗೆ ಸೂಕ್ತ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ಜೊತೆಗೆ ಪ್ರತಿಭಟನೆ ಕೈಬಿಡುವಂತೆ ವಿದ್ಯಾರ್ಥಿಗಳ ಮನವೊಲಿಸಬೇಕು ಎಂದು ಸೂಚನೆ ನೀಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.