ETV Bharat / city

ಮುಂಜಾಗ್ರತಾ ಕ್ರಮಗಳನ್ನು ವಹಿಸಿ ಕೋವಿಡ್​ ಪ್ರಮಾಣವನ್ನು ತಗ್ಗಿಸಿ: ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚನೆ - Bangalore Latest News

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗೃಹ ಕಚೇರಿ ಕೃಷ್ಣಾದಲ್ಲಿ ಕೋವಿಡ್ -19 ಪ್ರಕರಣಗಳು ಹೆಚ್ಚಾಗಿರುವ ಹತ್ತು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಸಿಇಒಗಳೊಂದಿಗೆ ವೀಡಿಯೋ ಸಂವಾದ ನಡೆಸಿದರು.

Chief Minister B.S. Yeddyurappa Video Conversation with district collectors
ಮುಂಜಾಗ್ರತಾ ಕ್ರಮಗಳನ್ನು ವಹಿಸಿ ಕೋವಿಡ್​ ಪ್ರಮಾಣವನ್ನು ತಗ್ಗಿಸಿ: ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚನೆ
author img

By

Published : Oct 8, 2020, 8:24 PM IST

ಬೆಂಗಳೂರು: ಕೋವಿಡ್​-19 ಸೋಂಕಿತರ ಪ್ರಥಮ ಮತ್ತು ದ್ವಿತೀಯ ಸಂಪರ್ಕಗಳನ್ನು ಪತ್ತೆಹಚ್ಚಿ, ಗುರಿಯಾಧಾರಿತ (ಟಾರ್ಗೆಟ್) ಪರೀಕ್ಷೆಗಳನ್ನು ಮಾಡಿ, ಸೂಕ್ತ ಚಿಕಿತ್ಸೆ ನೀಡುವ ಮೂಲಕ ಸಾಂಕ್ರಾಮಿಕ ರೋಗ ತಡೆ ಹಾಗೂ ಸಾವಿನ ಪ್ರಮಾಣ ತಡೆಯಲು ಹೆಚ್ಚಿನ ಮುತುವರ್ಜಿ ವಹಿಸಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಕೋವಿಡ್ -19 ಪ್ರಕರಣಗಳು ಹೆಚ್ಚಾಗಿರುವ ಹತ್ತು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಸಿಇಒಗಳೊಂದಿಗೆ ವೀಡಿಯೋ ಸಂವಾದ ನಡೆಸಿದರು. ಈ ವೇಳೆ ಮಾತನಾಡಿದ ಸಿಎಂ, ಸಾಂಕ್ರಾಮಿಕ ರೋಗಕ್ಕೆ ಮಾಸ್ಕ್​ ಧರಿಸುವುದು, ಸ್ಯಾನಿಟೈಸ್ ಮಾಡುವುದು ಮತ್ತು ಸಾಮಾಜಿಕ ಅಂತರವೇ ಮದ್ದು ಎಂಬುದನ್ನು ಜನರು ಅರಿಯಬೇಕು. ಮಾಸ್ಕ್ ಹಾಕದವರಿಗೆ ದಂಡ ವಿಧಿಸುವುದು ಅರಿವಿನ ಒಂದು ಭಾಗವೇ ಹೊರತು ಸರ್ಕಾರಕ್ಕೆ ಇದರಿಂದ ಬೇರೆ ಉದ್ದೇಶ ಇಲ್ಲ ಎಂಬುದನ್ನು ಜನತೆಗೆ ಮನಗಾಣಿಸಬೇಕು ಎಂದರು.

ಜನಜಾಗೃತಿ ಮುಖಾಂತರ ಮುನ್ನೆಚ್ಚರಿಕೆಯೊಂದಿಗೆ ರೋಗ ತಡೆಯಲು ಸೂಕ್ತ ಕ್ರಮಕೈಗೊಳ್ಳಬೇಕಿದೆ. ಈ ಸಂಬಂಧ ಅಗತ್ಯಗಳಿದ್ದರೆ ಹಿಂಜರಿಯದೆ ನೇರವಾಗಿ ಹೇಳಿ. ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ನೀಡಲು ಸರ್ಕಾರ ಬದ್ದವಾಗಿದ್ದು, ಅಗತ್ಯವಿರುವ ಸೌಲಭ್ಯಗಳನ್ನು ಪಡೆದುಕೊಳ್ಳಲು ಈಗಾಗಲೇ ಸೂಚಿಸಲಾಗಿದೆ. ಕೊರೊನಾಗೆ ಸಂಬಂಧಿಸಿದ ಎಸ್.ಒ.ಪಿಗಳನ್ನು ಪಾಲಿಸಿ, ಮರಣ ಪ್ರಮಾಣ ಹೆಚ್ಚದಂತೆ ಕಾಳಜಿ ವಹಿಸಿ ಎಂದರು.

ಕೋವಿಡ್ ಪ್ರಕರಣಗಳು ಹೆಚ್ಚಾಗಿರುವ ಬಳ್ಳಾರಿ, ದಕ್ಷಿಣ ಕನ್ನಡ, ಹಾಸನ, ಧಾರವಾಡ, ಬೆಳಗಾವಿ, ಮೈಸೂರು, ಶಿವಮೊಗ್ಗ, ತುಮಕೂರು, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಜಿಲ್ಲಾಧಿಕಾರಿಗಳು ತುಲನಾತ್ಮಕ ಅಧ್ಯಯನದೊಂದಿಗೆ ಕೋವಿಡ್ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದರು. ಡೆತ್ ಆಡಿಟ್ ಬಗ್ಗೆ ಪರಿಶೀಲಿಸಿದ ಸಿಎಂ, ಧಾರವಾಡ ಜಿಲ್ಲೆಯಲ್ಲಿ ಮರಣ ಪ್ರಮಾಣ ಹೆಚ್ಚಿರುವ ಹಿನ್ನೆಲೆಯಲ್ಲಿ ಒಂದು ವಿಶೇಷ ತಂಡವನ್ನು ಕಳುಹಿಸಲು ಸೂಚಿಸಿದರು.

ಜಿಲ್ಲೆಗಳಲ್ಲಿ ಆರ್.ಎ.ಟಿ ಪರೀಕ್ಷೆಗಳನ್ನು ಹೆಚ್ಚು ಮಾಡುತ್ತಿದ್ದು, ಇದನ್ನು ಕಡಿಮೆ ಮಾಡಿ ಆರ್​ಟಿಪಿಸಿಆರ್ ಪರೀಕ್ಷೆಗಳನ್ನು ಹೆಚ್ಚು ಮಾಡಬೇಕು ಎಂದು ಸೂಚಿಸಲಾಯಿತು. ಮನೆ ಆರೈಕೆಯಲ್ಲಿರುವವರಿಗೆ ಟೆಲಿ ಮಾನಿಟರಿಂಗ್ ಮುಖಾಂತರ ಆರೋಗ್ಯ ತಪಾಸಣೆಯನ್ನು ಕಾಲಕಾಲಕ್ಕೆ ಮಾಡಬೇಕು ಹಾಗೂ ಆರೋಗ್ಯ ಕಿಟ್‍ಗಳನ್ನು ನೀಡಬೇಕು. ಪಾಸಿಟಿವ್ ಪ್ರಕರಣಗಳನ್ನು ಕಡಿಮೆ ಮಾಡಲು ಸಮೀಕ್ಷೆ ಮಾಡಿ ತಪಾಸಣೆ ಕೈಗೊಳ್ಳಬೇಕು. ಆಸ್ಪತ್ರೆಗಳಲ್ಲಿ ದಾಖಲಾದ ನಂತರ 72 ಗಂಟೆಗಳೊಳಗೆ ಆಗಿರುವ ಮರಣಗಳ ಕಾರಣವನ್ನು ತಿಳಿಯಲು ಮರಣಗಳ ಆಡಿಟ್ ಮಾಡಬೇಕು. ರಾಜ್ಯದಲ್ಲಿ ಶೇ. 50ರಷ್ಟು ಮರಣಗಳು ಮೊದಲ 72 ಗಂಟೆಗಳಲ್ಲಿ ಆಗಿವೆ.
ಹಾಗಾಗಿ ಪರೀಕ್ಷೆಗಳನ್ನು ಮಾಡಿ ಸೋಂಕು ಪತ್ತೆ ಹಚ್ಚುವುದು ಅತಿಮುಖ್ಯ ಎಂದರು.

ಮೈಸೂರು ಜಿಲ್ಲೆಯಲ್ಲಿ ದಸರಾ ಹಬ್ಬವನ್ನು ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ. ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣ ಹೆಚ್ಚಿದ್ದು, ಮುಂದಿನ ಒಂದು ವಾರದೊಳಗೆ ಪ್ರತ್ಯೇಕ ವರದಿಯನ್ನು ನೀಡಬೇಕು. ದಸರಾ ಕಾರ್ಯಕ್ರಮಗಳು ವರ್ಚುಯಲ್ ಆಗಿ ನಡೆಯಲಿ. ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕಡ್ಡಾಯವಾಗಿ ಕೈಗೊಳ್ಳಬೇಕು ಎಂದು ಸೂಚಿಸಿದರು. ಇನ್ನು ಶಿವಮೊಗ್ಗ ಜಿಲ್ಲೆಯಲ್ಲಿ ಶೇ. 20 ರಷ್ಟಿದ್ದ ಕೋವಿಡ್ ಪ್ರಕರಣಗಳನ್ನು ಕಳೆದ ವಾರಗಳಲ್ಲಿ ಶೇ. 6ಕ್ಕೆ ಇಳಿಸಲಾಗಿದೆ. ಇದನ್ನು ಇನ್ನಷ್ಟು ಕಡಿಮೆ ಮಾಡಿದಲ್ಲಿ ರಾಜ್ಯಕ್ಕೇ ಮಾದರಿಯಾಗಬಹುದು ಎಂದರು.

ಬೆಂಗಳೂರು ನಗರಸಭೆ ಮುಂದೂಡಿಕೆ: ಬೆಂಗಳೂರು ನಗರ ಜಿಲ್ಲೆ ಸೇರಿ 11 ಜಿಲ್ಲೆಗಳ ಜಿಲ್ಲಾಡಳಿತದೊಂದಿಗೆ ವಿಡಿಯೋ ಸಂವಾದ ನಿಗದಿಯಾಗಿತ್ತಾದರೂ ಕೊನೆ ಕ್ಷಣದಲ್ಲಿ ಬೆಂಗಳೂರು ನಗರ ಹೊರತು ಇತರ 10 ಜಿಲ್ಲೆಗಳ ಜಿಲ್ಲಾಡಳಿತದ ಜೊತೆ ಸಭೆ ನಡೆಸಿದರು. ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಡಳಿತದ ಜೊತೆ ಪ್ರತ್ಯೇಕವಾಗಿ ಸಭೆ ನಡೆಸುವುದಾಗಿ ಸಿಎಂ ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.