ಬೆಂಗಳೂರು: ಕೊರೊನಾ ಸೋಂಕಿನಿಂದ ಹೋಂ ಐಸೋಲೇಷನ್ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಚಿವ ಜಿ.ಟಿ ದೇವೇಗೌಡ ಶೀಘ್ರ ಗುಣಮುಖರಾಗಲಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾರೈಸಿ, ಟ್ವೀಟ್ ಮಾಡಿದ್ದಾರೆ.
ಕೊರೊನಾ ಸೋಂಕು ಇದೀಗ ರಾಜಕಾರಣಿಗಳನ್ನು ಬೆಂಬಿಡದೆ ಕಾಡಲು ಶುರುಮಾಡಿದ್ದು, ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡರಿಗೆ ಸೋಂಕು ತಗುಲಿದೆ.
ರೋಗ ಲಕ್ಷಣಗಳಿಲ್ಲದ ಕಾರಣ ಜಿಟಿಡಿ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದು, ಶೀಘ್ರ ಗುಣಮುಖರಾಗಿ ಮತ್ತೆ ಎಂದಿನಂತೆ ಜನಸೇವೆಯಲ್ಲಿ ಸಕ್ರಿಯರಾಗಲಿ ಎಂದು ಸಿಎಂ ಹಾರೈಸಿದ್ದಾರೆ.