ETV Bharat / city

ರ‍್ಯಾಪಿಡ್ ಟೆಸ್ಟ್​​​ಗೆ ಆದ್ಯತೆ ಕೊಡಿ: ಪ್ರವಾಹ ಪರಿಸ್ಥಿತಿ ಅರಿತು ವ್ಯವಸ್ಥೆ ಮಾಡಿ- ಡಿಸಿಗಳಿಗೆ ಸಿಎಂ ಸೂಚನೆ - Chief minister B.S.Yadiyurappa

ಹನ್ನೊಂದು ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಉಸ್ತುವಾರಿ ಸಚಿವರ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಕೋವಿಡ್ ನಿಯಂತ್ರಣ, ಕೃಷಿ ಚಟುವಟಿಕೆ, ಪ್ರವಾಹ ಸಮಸ್ಯೆ ಉಂಟಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಎಲ್ಲ ಡಿಸಿಗಳಿಗೆ ಸೂಚಿಸಿದರು.

Chief minister video conference with DC, Ministers
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
author img

By

Published : Jul 13, 2020, 2:55 PM IST

ಬೆಂಗಳೂರು: ಕೋವಿಡ್ ನಿಯಂತ್ರಣ, ಕೃಷಿ ಚಟುವಟಿಕೆ, ಪ್ರವಾಹ ಪರಿಸ್ಥಿತಿಯ ಕುರಿತು ಮಾಹಿತಿ ಪಡೆಯಲು ಹನ್ನೊಂದು ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಉಸ್ತುವಾರಿ ಸಚಿವರ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ರ‍್ಯಾಪಿಡ್ ಟೆಸ್ಟ್ ನಡೆಸಲು ಮತ್ತು ತುರ್ತು ಪ್ರಕರಣಗಳನ್ನು ವಿವೇಚನೆಯಿಂದ ಪರೀಕ್ಷೆ ನಡೆಸಿ ಎಂದು ಸೂಚಿಸಿದರು.

ಖರೀದಿಸಿರುವ ಒಂದು ಲಕ್ಷ ಟೆಸ್ಟ್ ಕಿಟ್​​ಗಳನ್ನು ಈಗಾಗಲೇ ಜಿಲ್ಲೆಗಳಿಗೆ ವಿತರಣೆ ಮಾಡಲಾಗಿದೆ. ಬೆಂಗಳೂರು ನಗರ ಹಾಗೂ ದಕ್ಷಿಣ ಕನ್ನಡ, ಧಾರವಾಡ, ಬಳ್ಳಾರಿ, ಉಡುಪಿ, ಕಲಬುರಗಿ ಹೆಚ್ಚು ಪ್ರಕರಣ ದಾಖಲಾಗಿದೆ. ಬೀದರ್, ಧಾರವಾಡ, ಗದಗ, ಮೈಸೂರು ಜಿಲ್ಲೆಗಳಲ್ಲಿ ಸಾವಿನ ಪ್ರಮಾಣ ಹೆಚ್ಚುತ್ತಿದ್ದು, ಇದನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಬೀದರ್​​​ನಲ್ಲಿ ಸಾವಿನ ಪ್ರಮಾಣ ದೇಶದ 5 ಜಿಲ್ಲೆಗಳಲ್ಲಿ ಒಂದಾಗಿದ್ದು, ಅದನ್ನು ನಿಯಂತ್ರಿಸುವಂತೆ ಸೂಚಿಸಿದರು. ಈವರೆಗೆ ಸಂಭವಿಸಿದ ಮರಣಗಳ ಕುರಿತು ತಜ್ಞರ ವಿಶ್ಲೇಷಣಾ ವರದಿಯನ್ನು ಕೂಡಲೇ ಕಳುಹಿಸುವಂತೆ ನಿರ್ದೇಶನ ನೀಡಿದರು. ಕಂಟೇನ್​​ಮೆಂಟ್ ಝೋನ್​​​ಗಳಲ್ಲಿ ಕಟ್ಟುನಿಟ್ಟಾಗಿ ಕ್ರಮ ವಹಿಸಬೇಕು. ಅಲ್ಲದೇ, ಕ್ಷೇತ್ರ ಮಟ್ಟದ ಆರೋಗ್ಯ ಸಿಬ್ಬಂದಿ ಕೊರತೆ ಇರುವಲ್ಲಿ ಗುತ್ತಿಗೆ ಆಧಾರದಲ್ಲಿ 6 ತಿಂಗಳ ಅವಧಿಗೆ ನೇಮಕ ಮಾಡುವಂತೆ ಸೂಚಿಸಿದರು. ಹೊರಗಿನಿಂದ ವಲಸೆ ಬಂದವರ ಕ್ವಾರಂಟೈನ್ ಮತ್ತು ಹೆಚ್ಚಿನ ನಿಗಾವಹಿಸಲು ಸೂಚಿಸಿದ ಸಿಎಂ, ನಾನ್ ಕೋವಿಡ್ ರೋಗಿಗಳ ಚಿಕಿತ್ಸೆಗೆ ಯಾವುದೇ ಅಡ್ಡಿಯಾಗದಂತೆ ಎಚ್ಚರವಹಿಸಬೇಕು ಎಂದರು.

ಉತ್ಸವಕ್ಕೆ ಬ್ರೇಕ್: ಯಾವುದೇ ಕಾರಣಕ್ಕೂ ಸಾರ್ವಜನಿಕ ಉತ್ಸವಗಳ ಆಚರಣೆ ಮಾಡುವಂತಿಲ್ಲ ಎಂದು ಎಚ್ಚರಿಸಿದರು. ಬೆಂಗಳೂರಿನಲ್ಲಿ ಕೋವಿಡ್ ಮತ್ತು ನಾನ್ ಕೋವಿಡ್ ಚಿಕಿತ್ಸೆ ನೀಡಲು ಸಹಕರಿಸದ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಬೂತ್ ಮಟ್ಟದಲ್ಲಿ ಕ್ವಾರಂಟೈನ್, ಸಂಪರ್ಕಿತರ ಪತ್ತೆ ಹಚ್ಚುವುದು, ಮನೆಮನೆ ಸಮೀಕ್ಷೆ ನಡೆಸುವ ಪ್ರಕ್ರಿಯೆಯನ್ನು ಪರಿಶೀಲನೆ ನಡೆಸಲು ಬೂತ್ ಮಟ್ಟದ ಸಮಿತಿಗಳನ್ನು ರಚಿಸಿ, ಜನಪ್ರತಿನಿಧಿಗಳು ಹಾಗೂ ಸ್ವಯಂ ಸೇವಕರ ಸಹಕಾರವನ್ನು ಪಡೆಯಿರಿ ಎಂದರು.

60 ವರ್ಷ ಮೇಲ್ಪಟ್ಟವರು ಹಾಗೂ ಇತರ ತೀವ್ರ ಸ್ವರೂಪದ ಕಾಯಿಲೆಯಿಂದ ಬಳಲುತ್ತಿರುವವರನ್ನು ಪ್ರತ್ಯೇಕವಾಗಿರಿಸಬೇಕು. ಐಎಲ್ಐ ಮತ್ತು ಉಸಿರಾಟದ ತೊಂದರೆ ಇರುವವರನ್ನು ಗುರುತಿಸಿ, ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೊಳಪಡಿಸಬೇಕು. ಸೀಲ್​​ಡೌನ್ ಪ್ರಕ್ರಿಯೆಯನ್ನು ಪರಿಣಾಮಕಾರಿಯಾಗಿ ಮಾಡಬೇಕು. ಈ ಪ್ರದೇಶಗಳಲ್ಲಿ ಹೆಚ್ಚು ಪರೀಕ್ಷೆ ನಡೆಸಬೇಕು ಎಂದು ಹೇಳಿದರು.

ಅರಿವು ಮೂಡಿಸಿ: ಜನರು ಧಾರ್ಮಿಕ ಸ್ಥಳಗಳಲ್ಲಿ, ಮಾರುಕಟ್ಟೆ ಮೊದಲಾದ ಸ್ಥಳಗಳಲ್ಲಿ ಜನ ಗುಂಪುಗೂಡದಂತೆ ಎಚ್ಚರವಹಿಸಬೇಕು. ಕೋವಿಡ್ ಆಸ್ಪತ್ರೆಯಲ್ಲಿ ಸ್ವಚ್ಛತೆ ನಿರ್ವಹಣೆಯಲ್ಲಿ ತೊಡಗಿರುವ ಡಿ ಗ್ರೂಪ್ ನೌಕರರ ಪ್ರೋತ್ಸಾಹಧನ ಹೆಚ್ಚಳಕ್ಕೆ ಕ್ರಮ ವಹಿಸಲಾಗುವುದು. ಆ್ಯಂಬುಲೆನ್ಸ್ ಮತ್ತು ಚಿಕಿತ್ಸೆಗೆ ಹಾಸಿಗೆಗಳ ಕೊರತೆಯಾಗದಂತೆ ಎಚ್ಚರ ವಹಿಸುವಂತೆ ಸೂಚಿಸಿದರು.

ಡಿಜಿಟಲ್ ಎಕ್ಸ್ ರೇ ಯಂತ್ರಗಳ ಮೂಲಕ ಶ್ವಾಸಕೋಶದ ಸೋಂಕನ್ನು ತ್ವರಿತವಾಗಿ ಪತ್ತೆ ಹಚ್ಚಲು ಸಾಧ್ಯವಿದ್ದು, ಈ ಉಪಕರಣಗಳ ಬಳಕೆಗೆ ಆದ್ಯತೆ ನೀಡುಬೇಕು. ಕೋವಿಡ್ ಮಾರಣಾಂತಿಕ ಕಾಯಿಲೆ ಅಲ್ಲ, ಜನರು ಭಯಭೀತರಾಗುವ ಅಗತ್ಯವಿಲ್ಲ ಎಂದು ಜನರಿಗೆ ತಿಳಿವಳಿಕೆ ನೀಡುವ ಅಗತ್ಯವಿದೆ ಎಂದು ಹೇಳಿದರು.

ಮಳೆ, ಬೆಳೆ: ರಾಜ್ಯದಲ್ಲಿ ಉತ್ತಮ ಮಳೆಯಾಗಿದೆ. ಹೆಚ್ಚು ಮಳೆಯಾಗುತ್ತಿರುವ ಪ್ರದೇಶದಲ್ಲಿ ಜನರ ಸ್ಥಳಾಂತರಕ್ಕೆ ಮೊದಲೇ ಸ್ಥಳ ಗುರುತಿಸುವಂತೆ ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚಿಸಿದರು.

ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲಾಧಿಕಾರಿಗಳೊಂದಿಗೆ ಸತತ ಸಂಪರ್ಕದಲ್ಲಿದ್ದು, ಕೃಷ್ಣಾ ನದಿಗೆ ಅಲ್ಲಿಂದ ಹರಿದುಬರುವ ನೀರಿನ ಪ್ರಮಾಣದ ಕುರಿತು ಜಾಗೃತರಾಗಿರುವಂತೆ ತಿಳಿಸಿದರು. ಅಲ್ಲದೇ, ರಾಜಾಪೂರ ಬ್ಯಾರೇಜಿನಲ್ಲಿ ರಾಜ್ಯದ ಇಂಜಿನಿಯರೊಬ್ಬರನ್ನು ನಿಯೋಜಿಸುವಂತೆ ನಿರ್ದೇಶಿಸಿದರು.

ಅಕ್ಟೋಬರ್​​ವರೆಗೆ ಉತ್ತಮ ಮಳೆ ಆಗುವ ನಿರೀಕ್ಷೆ ಇದೆ. ಪ್ರವಾಹ ಕುರಿತು ಎಚ್ಚರ ವಹಿಸಿ. ಮಣ್ಣಿನ ತೇವಾಂಶ ಹೆಚ್ಚಾಗುವ ಸಾಧ್ಯತೆ ಇದೆ. ಇದರಿಂದ ಬೆಳೆಹಾನಿಯಾಗದಂತೆ ನಿಗಾವಹಿಸಿ. ಉತ್ತಮ ಮಳೆಯಾಗಿ, ಬಂಪರ್ ಬೆಳೆ ಬರುವ ಸಾಧ್ಯತೆ ಇದ್ದು, ಬೇಡಿಕೆ ಕಡಿಮೆ ಇರುವ ಕಾರಣ ಗೋದಾಮುಗಳನ್ನು ಗುರುತಿಸಿ, ಕೃಷಿ ಉತ್ಪನ್ನ ದಾಸ್ತಾನಿಗೆ ಸೂಕ್ತ ವ್ಯವಸ್ಥೆ ಮಾಡಬೇಕು ಎಂದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್.ಅಶೋಕ್, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಮುಖ್ಯಮಂತ್ರಿ ಅಪರ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಹಾಗೂ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು ಇದ್ದರು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.