ETV Bharat / city

ಸ್ವಾತಂತ್ರ್ಯ ದಿನಾಚರಣೆ ಸರಳವಾಗಿ ಆಚರಿಸಲು ಸರ್ಕಾರದಿಂದ ಸುತ್ತೋಲೆ

ನೆರೆ ಸಂತ್ರಸ್ತರಿಗೆ ಪರಿಹಾರ ಒದಗಿಸುವ ಉದ್ದೇಶದಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಿಸಲು ಸರ್ಕಾರ ಆದೇಶ ಹೊರಡಿಸಿದೆ.

Circular by the government to simply celebrate Independence Day
author img

By

Published : Aug 14, 2019, 3:15 AM IST

ಬೆಂಗಳೂರು: ರಾಜ್ಯದಲ್ಲಿ ನೆರೆ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವ ಉದ್ದೇಶದಿಂದ ಪೂರ್ವ ತಾಲೂಕು ಕಚೇರಿಯಲ್ಲಿ 73ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಿಸುವಂತೆ ಸರ್ಕಾರ ಸುತ್ತೋಲೆ ಹೊರಡಿಸಿದೆ ಎಂದು ತಾಲೂಕು ದಂಡಾಧಿಕಾರಿ ತೇಜಸ್​​ಕುಮಾರ್​ ಹೇಳಿದರು.

ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಪ್ರವಾಹದಿಂದ ಉಂಟಾಗಿರುವ ನಷ್ಟಕ್ಕೆ ಪರಿಹಾರ ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಆದ್ದರಿಂದ ರಾಜ್ಯದ ಎಲ್ಲಾ ಕಡೆ ಸರಳವಾಗಿ ಆಚರಿಸಲು ಸರ್ಕಾರ ನಿಶ್ಚಯಿಸಿದೆ ಎಂದರು.

ತಾಲೂಕು ದಂಡಾಧಿಕಾರಿ ತೇಜಸ್​​ಕುಮಾರ್​
ಅಂದು ಪಥ ಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಶಾಸಕ ಅರವಿಂದ್ ಲಿಂಬಾವಳಿ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅಥಿತಿಗಳಾಗಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, ಸಂಸದ ಪಿ.ಸಿ.ಮೋಹನ್, ಜಿಲ್ಲಾ ಪಂಚಾಯತಿ ಅಧ್ಯಕ್ಷ ಸಿ.ಮುನಿರಾಜ್, ಶಾಸಕರಾದ ಕೆ.ಜೆ.ಜಾರ್ಜ್, ಕೃಷ್ಣ ಬೈರೆಗೌಡ, ಎನ್.ಎ.ಹ್ಯಾರೀಸ್, ಬಿ.ಎಸ್ ಸುರೇಶ್ ಹಾಗೂ ಎಂ.ನಾರಾಯಣ ಸ್ವಾಮಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

Intro:ಕೃಷ್ಣರಾಜಪುರ :

73ನೇ ಯ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಿಸಲು ರಾಜ್ಯ ಸರ್ಕಾರದಿಂದ ಸುತ್ತೋಲೆ.

ಪೂರ್ವ ತಾಲ್ಲೂಕು ಕಚೇರಿಯಲ್ಲಿ 73ನೇ ಸ್ವಾತಂತ್ರ್ಯ ದಿನದ ಆಚರಣೆಯ ಅಂಗವಾಗಿ ಕರೆಯಲಾಗಿದ್ದ ಪೂರ್ವ ಭಾವಿ ಸಭೆಯಲ್ಲಿ ಮಾತನಾಡಿ ಇತ್ತೀಚಿಗೆ ಸಂಭವಿಸಿರುವ ಪ್ರವಾಹ ದಿಂದ ಸುಮಾರು ನೂರಾರು ಕೋಟಿ ಪ್ರಕೃತಿ ವಿಕೋಪಕ್ಕೆ ನಾಶವಾಗಿ, ಹಲವಾರು ಜೀವರಾಶಿಗಳು ಬಲಿಯಾಗಿವೆ. ನೆರೆ ಸಂತ್ರಸ್ತರಿಗೆ ಪುನಃ ವಸತಿ ಕಲ್ಪಿಸಲು ರಾಜ್ಯ ಸರ್ಕಾರದೊಂದಿಗೆ ಕೈಜೋಡಿಸುವ ಸಲುವಾಗಿ 73ನೇ ಯ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಿಸಲು ರಾಜ್ಯ ಸರ್ಕಾರದಿಂದ ಸುತ್ತೋಲೆ ಬಂದಿದೆ ಎಂದು ಬೆಂಗಳೂರು ಪೂರ್ವ ತಾಲ್ಲೂಕು ದಂಡಾಧಿಕಾರಿ‌ ತೇಜಸ್ ಕುಮಾರ್ ತಿಳಿಸಿದರು.

Body:ಕಾರ್ಯಕ್ರಮದ ಆಕರ್ಷಕ ಪಥ ಸಂಚಲನ ಹಾಗೂ ಸಂಸ್ಕೃತಿಕ ಕಾರ್ಯಕ್ರಮಗಳು ನಡೆಲಿವೆ ಎಂದು ವಿವರಿಸಿದರು.

ಈ 73ನೆ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆಡಂಬರದ ಸನ್ಮಾನಕ್ಕೆ ಕಡಿವಾಣ ಹಾಕಿ ಖಾದಿ ಟವಲ್ ಒದಿಸುವ ಮೂಲಕ ಸನ್ಮಾನ ಮಾಡಲಾಗುತ್ತದೆ ಎಂದು ತಿಳಿಸಿದರು.

Conclusion:ಈ ಕಾರ್ಯಕ್ರಮಕ್ಕೆ ಮಹದೇವಪುರ ಶಾಸಕ ಹಾಗೂ ಮಾಜಿ ಸಚಿವ ಅರವಿಂದ್ ಲಿಂಬಾವಳಿ ಅವರು ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅಥಿತಿ ಯಾಗಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, ಸಂಸದ ಪಿ.ಸಿ.ಮೋಹನ್, ಜಿಲ್ಲಾ ಪಂಚಾಯತಿ ಅದ್ಯಕ್ಷ ಸಿ.ಮುನಿರಾಜ್, ಶಾಸಕರಾದ ಕೆ.ಜೆ ಜಾರ್ಜ್, ಕೃಷ್ಣ ಬೈರೆಗೌಡ, ಎನ್.ಎ ಹ್ಯಾರೀಸ್, ಬಿ.ಎಸ್ ಸುರೇಶ್ ಹಾಗೂ ಎಂ. ನಾರಾಯಣ ಸ್ವಾಮಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಪತ್ರಿಕಾ ಗೋಷ್ಠಿಯಲ್ಲಿ ವಿಶೇಷ ತಹಶಿಲ್ದಾರ್ ಶಿವಕುಮಾರ್ , ಶಿರಸ್ತೆದಾರ್ ಲಕ್ಷಿ ಪ್ರಸಾದ್ , ಆರ್. ಓ.ಜಗನ್ನಾಥ್ ರೆಡ್ಡಿ , ಮಲ್ಲಿಕಾರ್ಜುನ್ ಭಾಗವಹಿಸಿದ್ದರು.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.