ಬೆಂಗಳೂರು: ಕೊರೊನಾ ಹಿನ್ನೆಲೆ ವಿಕಲಚೇತನ ಸಿಬ್ಬಂದಿಗೆ ಮನೆಯಿಂದಲೇ ಕಾರ್ಯನಿರ್ವಹಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಸುತ್ತೋಲೆ ಹೊರಡಿಸಿದ್ದಾರೆ.
ರಾಜ್ಯದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕವಾಗಿ ಹರಡುತ್ತಿರುವ ಹಿನ್ನೆಲೆ ಸಚಿವಾಲಯ ಹಾಗೂ ಎಲ್ಲಾ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ದೃಷ್ಟಿದೋಷ ಹಾಗೂ ಇತರೆ ವಿಕಲಚೇತನ ಅಧಿಕಾರಿ, ನೌಕರರು ಕಚೇರಿಗೆ ಹಾಜರಾಗಿ ಕರ್ತವ್ಯ ನಿರ್ವಹಿಸುವುದು ಕಷ್ಟಸಾಧ್ಯವಾಗಿರುವ ಹಿನ್ನೆಲೆ ಈ ಸುತ್ತೋಲೆ ಹೊರಡಿಸಲಾಗಿದೆ.
ಎಲ್ಲಾ ಸರ್ಕಾರಿ, ಅರೆ ಸರ್ಕಾರಿ, ಸ್ವಾಯತ್ತ ಸಂಸ್ಥೆ, ನಿಗಮ, ಮಂಡಳಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ದೃಷ್ಟಿ ದೋಷ ಹಾಗೂ ಇತರೆ ವಿಕಲಚೇತನ ಅಧಿಕಾರಿ, ಸಿಬ್ಬಂದಿ ಮನೆಯಿಂದಲೇ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಲಾಗಿದೆ.