ಬೆಂಗಳೂರು: ಹಿರಿಯ ಸಿವಿಲ್ ನ್ಯಾಯಾಧೀಶರಾಗಿ ಕಾರ್ಯ ನಿರ್ವಹಿಸುತ್ತಿದ್ದ ರಾಜ್ಯದ ವಿವಿಧ ನ್ಯಾಯಾಲಯಗಳ 35 ನ್ಯಾಯಾಧೀಶರಿಗೆ ಜಿಲ್ಲಾ ನ್ಯಾಯಾಧೀಶರಾಗಿ ಬಡ್ತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿ ನಾಗಪ್ಪ ಎಸ್. ಪರೀತ್ ರಾಜ್ಯಪಾಲರ ಆದೇಶಾನುಸಾರ ಅಧಿಸೂಚನೆ ಹೊರಡಿಸಿದ್ದಾರೆ.
ಅಧಿಸೂಚನೆಯಲ್ಲಿ, ಸಂವಿಧಾನದ ವಿಧಿ 233 ಅಡಿ ಲಭ್ಯವಿರುವ ಅಧಿಕಾರ ಚಲಾಯಿಸಿ ರಾಜ್ಯಪಾಲರು 35 ಹಿರಿಯ ಸಿವಿಲ್ ನ್ಯಾಯಾಧೀಶರನ್ನು ಜಿಲ್ಲಾ ನ್ಯಾಯಾಧೀಶರ ಶ್ರೇಣಿಗೆ ಬಡ್ತಿ ನೀಡಿ ಆದೇಶ ಹೊರಡಿಸಿದ್ದಾರೆ. ಹಿರಿತನ ಹಾಗೂ ಮೆರಿಟ್ ಆಧಾರದಲ್ಲಿ ಬಡ್ತಿ ನೀಡಲಾಗಿದ್ದು, ಕರ್ನಾಟಕ ನ್ಯಾಯಾಂಗ ಸೇವಾ (ನೇಮಕಾತಿ) ನಿಯಮಗಳು -2004 ರ ಪ್ರಕಾರ ವೇತನ ಪಡೆಯಲಿದ್ದಾರೆ. ಆದೇಶ ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ತಿಳಿಸಲಾಗಿದೆ.
ಇದನ್ನೂ ಓದಿ: ರಷ್ಯಾ ದಾಳಿಗೆ ನಾಗರಿಕರು, ಸೈನಿಕರು ಸೇರಿ 137 ಮಂದಿ ಸಾವು: ಉಕ್ರೇನ್ ಅಧ್ಯಕ್ಷ