ಬೆಂಗಳೂರು: ಕೋವಿಡ್-19 ಹಿನ್ನೆಲೆ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಅಕ್ಟೋಬರ್ 12ರಿಂದ ಮೂರು ವಾರಗಳ ಕಾಲ ಮಧ್ಯಂತರ ರಜೆಯನ್ನು ಸಿಎಂ ಘೋಷಿಸಿದ್ದಾರೆ.
ಅಕ್ಟೋಬರ್ 12 ರಿಂದ ಅ.30ರ ವರೆಗೆ ಶಾಲೆಗಳಿಗೆ ಮಧ್ಯಂತರ ರಜೆ ನೀಡಲು ಸಿಎಂ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಅನೇಕ ಶಿಕ್ಷಕರು ಕೊರೊನಾಗೆ ತುತ್ತಾಗಿರುವುದನ್ನು ಗಮನಿಸಿದ್ದೇನೆ. ಹೀಗಾಗಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.
ಕೋವಿಡ್-19 ಹಿನ್ನೆಲೆ ಸದ್ಯಕ್ಕೆ ಶಾಲೆಗಳನ್ನು ಪ್ರಾರಂಭಿಸದಿರಲು ಹಾಗೂ ವಿದ್ಯಾಗಮ ಯೋಜನೆಯನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ. ಈಗ ಮೂರು ವಾರಗಳ ಕಾಲ ಶಾಲೆಗಳಿಗೆ ಮಧ್ಯಂತರ ರಜೆ ನೀಡಲು ಸರ್ಕಾರ ನಿರ್ಧರಿಸಿದೆ.