ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ- 2022ರ ಅಂಗವಾಗಿ ವಿಧಾನಸೌಧದಲ್ಲಿ ಆಯೋಜಿಸಲಾಗಿರುವ ವ್ಯಾಪಾರ ಮೇಳಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಕೌಶಲ್ಯ ಅಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ವಿವಿಧ ಮಳಿಗೆಗಳಿಗೆ ಭೇಟಿ ಕೊಟ್ಟ ಮುಖ್ಯಮಂತ್ರಿಗಳು ಕರಕುಶಲ ವಸ್ತುಗಳನ್ನು ನೋಡಿ ಆನಂದಿಸಿದರು. ಹಲವು ವಸ್ತುಗಳು ಹಾಗೂ ಉಡುಗೆ ತೊಡುಗೆಗಳು ಬೆಲೆ ವಿಚಾರಿಸಿದ ಅವರು ಇದಕ್ಕೆ ಯಾವ ರೀತಿಯ ಮಾರುಕಟ್ಟೆ ಇದೆ ಎಂಬ ಮಾಹಿತಿಯನ್ನು ವ್ಯಾಪಾರಿಗಳಿಂದ ಕೇಳಿ ತಿಳಿದುಕೊಂಡರು.
ಇದನ್ನೂ ಓದಿ: ರಷ್ಯಾ - ಉಕ್ರೇನ್ ಯುದ್ಧದಿಂದ ಚಿನ್ನ ಪ್ರಿಯರಿಗೆ ಬಿಗ್ ಶಾಕ್; ಬಂಗಾರದ ಮೇಲೆ 2,500 ರೂಪಾಯಿ ಏರಿಕೆ
ವ್ಯಾಪಾರ ಮೇಳದಲ್ಲಿ ಐವತ್ತಕ್ಕೂ ಹೆಚ್ಚು ಮಳಿಗೆಗಳಿದ್ದು, ರಾಜ್ಯದ ವಿವಿಧ ಭಾಗಗಳಿಂದ ವ್ಯಾಪಾರಿಗಳು ಆಗಮಿಸಿದ್ದಾರೆ. ಮಹಿಳಾ ಉದ್ಯಮವನ್ನು ಉತ್ತೇಜಿಸುವ ಉದ್ದೇಶದಿಂದ ಸರ್ಕಾರ ಆಯೋಜಿಸಿರುವ ಈ ಮೇಳದಲ್ಲಿ ವಿಧಾನಸೌಧದ ಮಹಿಳಾ ಸಿಬ್ಬಂದಿ ಹಾಗೂ ವಿಧಾನಮಂಡಲದ ಉಭಯ ಸದನಗಳ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್ ಹಾಗೂ ವಿಧಾನಸಭೆ, ಪರಿಷತ್ತಿನ ಮಾರ್ಷಲ್ಗಳು ಹೆಚ್ಚಿನ ಸಂಖ್ಯೆಯಲ್ಲಿ ಮಳಿಗೆಗಳಿಗೆ ಭೇಟಿ ನೀಡಿ ಉತ್ಪನ್ನಗಳನ್ನು ಖರೀದಿಸುತ್ತಿದ್ದಾರೆ.