ETV Bharat / city

ಹರ್ ಘರ್ ತಿರಂಗಾ ಅಭಿಯಾನಕ್ಕೆ ಸಿಎಂ ಬೊಮ್ಮಾಯಿ ಚಾಲನೆ... ಶಕ್ತಿಸೌಧದ ಮುಂದೆ ರಾರಾಜಿಸಿದ ರಾಷ್ಟ್ರಧ್ವಜ - ಸಿಎಂ ಬೊಮ್ಮಾಯಿ

ಹರ್ ಘರ್ ತಿರಂಗಾ ಅಭಿಯಾನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಚಾಲನೆ ನೀಡಿದರು.

Har Ghar Tiranga
ಹರ್ ಘರ್ ತಿರಂಗಾ ಅಭಿಯಾನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ
author img

By

Published : Aug 13, 2022, 12:07 PM IST

Updated : Aug 13, 2022, 1:22 PM IST

ಬೆಂಗಳೂರು: 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ನಿಮಿತ್ತ 'ಹರ್ ಘರ್ ತಿರಂಗಾ' ಅಭಿಯಾನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಚಾಲನೆ ನೀಡಿದರು. ವಿಧಾನಸೌಧದ ಮೆಟ್ಟಿಲುಗಳ ಮೇಲೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ಮನೆ ಮನೆಯಲ್ಲಿ ತ್ರಿವರ್ಣ ಧ್ವಜ ಕಾರ್ಯಕ್ರಮಕ್ಕೆ ಬಲೂನು ಹಾರಿ ಬಿಡುವ ಮೂಲಕ ಮುಖ್ಯಮಂತ್ರಿಗಳು ಚಾಲನೆ ನೀಡಿದರು.

ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿ, ಭವ್ಯ ಭಾರತ ಕಟ್ಟಲು ಯುವಜನತೆ ಸನ್ನದ್ಧರಾಗಬೇಕು. ದೇಶ ಮೊದಲು, ನಂತರ ನಾವೆಲ್ಲರೂ ಎಂಬುದನ್ನು ಪ್ರತಿಪಾದಿಸಬೇಕು. ಸಂಕುಚಿತ, ಸ್ವಾರ್ಥ ಮನೋಭಾವನೆ ತೊರೆದು, ದೇಶಕ್ಕಾಗಿ ನಿಲ್ಲುವ ಕರ್ತವ್ಯ ನಮ್ಮೆಲ್ಲರದ್ದಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯುವಜನತೆಗೆ ಕರೆ ನೀಡಿದರು.

ಹರ್ ಘರ್ ತಿರಂಗಾ ಅಭಿಯಾನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ

ಸ್ವಾತಂತ್ರ್ಯಪೂರ್ವದಲ್ಲಿ ಜನರು ದೇಶಕ್ಕಾಗಿ ಪ್ರಾಣ ಕೊಡುತ್ತಿದ್ದರು. ಈಗ ದೇಶಕ್ಕಾಗಿ ಬದುಕಿ, ದುಡಿಯಬೇಕು. ಭವ್ಯ ಭಾರತದ ನಿರ್ಮಾಣದಲ್ಲಿ ಯುವಕರು ತಮ್ಮ ದುಡಿಮೆಯ ಮೂಲಕ ಪಾಲನ್ನು ನೀಡಬೇಕು. ಇನ್ನು ಮುಂದಿನ 25 ವರ್ಷಗಳ ಕಾಲ ದೇಶಕ್ಕಾಗಿ ನಾನೇನು ಮಾಡಿದ್ದೇನೆ ಎಂಬುದಕ್ಕೆ ಉತ್ತರ ಕಂಡುಕೊಳ್ಳಬೇಕಾಗಿದೆ. ಯುವಕರೆಂದರೆ ಶಕ್ತಿ, ಯುವಕರೆಂದರೆ ಭವಿಷ್ಯ. ನಮ್ಮ ನಾಡಿಗೆ ನವಕರ್ನಾಟಕದಿಂದ ನವಭಾರತ ನಿರ್ಮಾಣ ಮಾಡಬೇಕಿದೆ. ಪ್ರಧಾನಮಂತ್ರಿಗಳು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯ ಸಂಕಲ್ಪ ಮಾಡಿದ್ದು, ಅದಕ್ಕೆ ಕರ್ನಾಟಕದಿಂದ 1 ಟ್ರಿಲಿಯನ್ ಡಾಲರ್ ಆರ್ಥಿಕತೆಯ ಕೊಡುಗೆಯನ್ನು ನೀಡುವ ಗುರಿ ಇದೆ ಎಂದರು.

CM Basavaraj Bommai inaugurates Har Ghar Tiranga campaign

ಇದನ್ನೂ ಓದಿ: ಮನೆ ಮನೆ ತಿರಂಗಾ ಅಭಿಯಾನ.. ಸಿಎಂ ಸೇರಿ ಬಿಜೆಪಿ ನಾಯಕರಿಂದ ಮನೆ ಮುಂದೆ ಧ್ವಜಾರೋಹಣ

ಯುವಕರು ಭಾರತದ ಮುಂದಿನ ಭವಿಷ್ಯವನ್ನು ನಿರ್ಮಿಸುವ ಭಾಗ್ಯಶಾಲಿಗಳು. 75 ವರ್ಷ ವ್ಯಕ್ತಿಗಾದರೆ ದೊಡ್ಡ ವಯಸ್ಸು. ಅದೇ ದೇಶಕ್ಕಾದರೆ ನವ ತರುಣನ ವಯಸ್ಸು. ಶೇ.46ರಷ್ಟು ಯುವಶಕ್ತಿ ಇರುವ ದೇಶ ಭಾರತ. ಸರ್ಕಾರದ ವತಿಯಿಂದ 1 ಕೋಟಿ 8 ಲಕ್ಷ ಧ್ವಜಗಳನ್ನು ನೀಡಿದ್ದೇವೆ. ಜನ ಸ್ವಪ್ರೇರಣೆಯಿಂದ ಧ್ವಜ ಕೊಂಡಿದ್ದಾರೆ. 25 ಲಕ್ಷ ಮನೆಗಳ ಮೇಲೆ ಧ್ವಜ ಹಾರಾಡುತ್ತಿವೆ. ಪ್ರತಿ ಗ್ರಾಮ, ಮನೆಯಲ್ಲಿ ಧ್ವಜ ಹಾರಾಡುತ್ತಿದೆ. ತ್ರಿವರ್ಣ ಶಕ್ತಿ ಎಲ್ಲರನ್ನು ಒಗ್ಗೂಡಿಸುವ ಶಕ್ತಿ ಭಾರತದ ಶಕ್ತಿ ಇಡೀ ವಿಶ್ವವೇ ಗಮನಿಸುತ್ತಿದೆ ಎಂದು ತಿಳಿಸಿದರು.

ಹರ್ ಘರ್ ತಿರಂಗಾ ಅಭಿಯಾನಕ್ಕೆ ಸಿಎಂ ಬೊಮ್ಮಾಯಿ ಚಾಲನೆ

ಸ್ವಾತಂತ್ರ್ಯ ಸುಲಭವಾಗಿ ಬಂದಿಲ್ಲ. ಹಲವರ ಹೋರಾಟ, ತ್ಯಾಗ, ಬಲಿದಾನದಿಂದ ಬಂದಿವೆ. ಸಾವಿರಾರು ಜನ ಅನಾಮಧೇಯ ಹೋರಾಟಗಾರರು ಪ್ರಾಣ ತ್ಯಾಗ ಮಾಡಿದ್ದಾರೆ. ಸ್ವಾತಂತ್ರ್ಯ ಎಲ್ಲರ ಹಕ್ಕು. ಹೋರಾಟವೂ ಸಾವಿರಾರು ಅನಾಮಧೇಯರಿಗೆ ಸೇರಿದೆ. ಯಾರದ್ದೇ ಸ್ವತ್ತಲ್ಲ. ಹೋರಾಟದಲ್ಲಿ ಕೂಲಿ ಕಾರ್ಮಿಕರು, ವಿದ್ಯಾರ್ಥಿಗಳು, ವಿದ್ಯಾವಂತರು ಎಲ್ಲರೂ ಸೇರಿದ್ದರು. ಸ್ವಾತಂತ್ರ್ಯ ಹೋರಾಟಕ್ಕೆ ದಿವ್ಯ ಇತಿಹಾಸವಿದೆ. ಮೊಟ್ಟ ಮೊದಲು ಸ್ವಾತಂತ್ರ್ಯ ಹೋರಾಟದ ಕಹಳೆಯನ್ನು ಮೊಳಗಿಸಿದ್ದು ಕನ್ನಡ ನಾಡಿನ ಹೆಮ್ಮೆಯ ರಾಣಿ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ. ಸ್ವಾತಂತ್ರ್ಯಕ್ಕಾಗಿ ಪ್ರಾಣ ಕೊಟ್ಟವರು ರಾಜ್ಯದಲ್ಲಿ ಇದ್ದಾರೆ. ಮೈಲಾರ ಮಹಾದೇವಪ್ಪ ಬ್ರಿಟಿಷರ ಗುಂಡಿಗೆ ಬಲಿಯಾದರು. ಸಾಹುಕಾರ ಚೆನ್ನಯ್ಯ ಅವರನ್ನು ನೆನಪಿಡಬೇಕು ಎಂದರು.

ಸಬ್​​ ಕಾ ಸಾಥ್, ಸಬ್​​ ಕಾ ವಿಕಾಸ್ ಎಂದು ಇಂದು ಪ್ರಧಾನಿ ನರೇಂದ್ರ ಮೋದಿ ಹೇಳುತ್ತಿದ್ದಾರೆ. ಮುಂದೆ ಸುವರ್ಣ ಯುಗ ಬರುತ್ತದೆ. 100ನೇ ವರ್ಷದ ಸ್ವಾತಂತ್ರ್ಯ ದಿವಸ ಬರುತ್ತದೆ. ಅಂದು ನಾವು ಇರುತ್ತೇವೋ ಇಲ್ಲವೋ ಗೊತ್ತಿಲ್ಲ. ಆದರೆ, ನೀವೆಲ್ಲ ಯುವಕರು ಇರುತ್ತಿರಿ. ಸ್ವಾರ್ಥ ಬಿಟ್ಟು ದೇಶಕ್ಕಾಗಿ ಬದಕಬೇಕು. ದೇಶಕ್ಕಾಗಿ ದುಡಿಯಬೇಕು. ಭವ್ಯ ಭಾರತಕ್ಕೆ ಬೆವರು ಹರಿಸಿ ದುಡಿಯಿರಿ. ದೇಶಕ್ಕೆ ನೀವೆಲ್ಲ ಕೊಡುಗೆ ನೀಡಿ. ನವ ಕರ್ನಾಟಕದಿಂದ ನವ ಭಾರತ ನಿರ್ಮಾಣ ‌ಮಾಡೋಣ ಎಂದು ಯುವಕರಿಗೆ ಸಿಎಂ ಕರೆ ನೀಡಿದರು.

ಈ ಸಂದರ್ಭದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸಭಾಪತಿ ರಘುನಾಥ್ ರಾವ್ ಮಲ್ಕಾಪುರೆ, ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ಅಬಕಾರಿ ಸಚಿವ ಗೋಪಾಲಯ್ಯ, ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಅಪರ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯಲ್, ಡಾ. ಶಾಲಿನಿ ರಜನೀಶ್ ಮತ್ತಿತರರು ಉಪಸ್ಥಿತರಿದ್ದರು.

Last Updated : Aug 13, 2022, 1:22 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.