ಬೆಂಗಳೂರು: ವಿಧಾನಸಭೆ ಅಧಿವೇಶನದ ವೇಳ ಪಕ್ಷದ ಶಾಸಕರು, ಸಂಸದರಿಗೆ ಭೋಜನಕೂಟ ಏರ್ಪಡಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜನಪ್ರತಿನಿಧಿಗಳ ಅಪೇಕ್ಷೆಯಂತೆ ಇಂದು ಪಕ್ಷದ ಜನಪ್ರತಿನಿಧಿಗಳ ಸಭೆ ಕರೆದಿದ್ದಾರೆ.
ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೂ ಪಕ್ಷದ ಶಾಸಕರು ಮತ್ತು ಸಂಸದರಿಗಾಗಿ ಸಮಯ ಮೀಸಲಿಟ್ಟಿರುವ ಸಿಎಂ ಬೊಮ್ಮಾಯಿ, ರೇಸ್ ಕೋರ್ಸ್ ರಸ್ತೆಯಲ್ಲಿರುವ ಸರ್ಕಾರಿ ನಿವಾಸ ರೇಸ್ ವ್ಯೂ ಕಾಟೇಜ್-1ಕ್ಕೆ ಆಗಮಿಸುವಂತೆ ಪಕ್ಷದ ಶಾಸಕರು, ಪರಿಷತ್ ಸದಸ್ಯರು, ಸಂಸದರು, ರಾಜ್ಯಸಭಾ ಸದಸ್ಯರಿಗೆ ಆಹ್ವಾನ ನೀಡಿದ್ದಾರೆ.
ಕ್ಷೇತ್ರವಾರು ಸಮಸ್ಯೆಗಳು, ಅನುದಾನ ಬಿಡುಗಡೆ, ಅಭಿವೃದ್ಧಿ ಕಾಮಗಾರಿಗಳ ಕುರಿತು ಶಾಸಕರು, ಸಂಸದರ ಕುಂದು ಕೊರತೆಗಳನ್ನು ಆಲಿಸಲಿದ್ದಾರೆ. ಯಡಿಯೂರಪ್ಪ ಅವಧಿಯಲ್ಲಿ ಪಕ್ಷದ ಶಾಸಕರಲ್ಲಿ ಮೂಡಿದ್ದ ಅಸಮಾಧಾನ ತಮ್ಮ ಆಡಳಿತದಲ್ಲಿ ಬಾರದಂತೆ ಮುನ್ನೆಚ್ಚರಿಕೆ ವಹಿಸಲು ಸಿಎಂ ಈ ಸಭೆ ಕರೆದಿದ್ದಾರೆ ಎನ್ನಲಾಗಿದೆ.
ವಿಧಾನಸಭಾ ಅಧಿವೇಶನ ವೇಳೆ ಪಕ್ಷದ ಶಾಸಕರು ಮತ್ತು ಸಂಸದರಿಗೆ ಸಿಎಂ ಭೋಜನಕೂಟ ಏರ್ಪಡಿಸಿದ್ದರು. ಈ ವೇಳೆ ಹಲವು ಶಾಸಕರು ತಮ್ಮ ಕ್ಷೇತ್ರಗಳ ಸಮಸ್ಯೆ ಕುರಿತು ಚರ್ಚಿಸಲು ಅವಕಾಶ ಕಲ್ಪಿಸುವಂತೆ ಮನವಿ ಮಾಡಿದ್ದರು. ಹೀಗಾಗಿ ಸಿಎಂ ಇಂದು ಸಭೆ ಕರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬಿಜೆಪಿ ಶಾಸಕರು, ಸಂಸದರ ಜೊತೆ ಇಂದು ಸಿಎಂ ಬೊಮ್ಮಾಯಿ ಸಭೆ - ಬಿಜೆಪಿ ಶಾಸಕರು, ಸಂಸದರ ಜೊತೆ ಸಿಎಂ ಬೊಮ್ಮಾಯಿ ಸಭೆ
ಬಿಜೆಪಿ ಶಾಸಕರು ಹಾಗೂ ಸಂಸದರ ಕ್ಷೇತ್ರಗಳಲ್ಲಿನ ಸಮಸ್ಯೆಗಳನ್ನು ಆಲಿಸಲು ಮುಂದಾಗಿರುವ ಸಿಎಂ ಬಸವರಾಜ ಬೊಮ್ಮಾಯಿ, ಬೆಂಗಳೂರಿನ ತಮ್ಮ ಸರ್ಕಾರಿ ನಿವಾಸದಲ್ಲಿಂದು ಸಭೆ ಕರೆದಿದ್ದಾರೆ.