ಬೆಂಗಳೂರು: ರಾಜ್ಯ ಸರ್ಕಾರ ಆರು ತಿಂಗಳು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಸಾಧನಾ ಸಮಾರಂಭದಲ್ಲಿ ಭಾಗಿಯಾಗುವ ಮೊದಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೆಂಪಲ್ ರನ್ ಮಾಡಿದರು.
ನಗರದ ಬಾಲಬ್ರೂಯಿ ಅತಿಥಿಗೃಹದ ಪಕ್ಕದಲ್ಲಿರುವ ಭಗವಾನ್ ಮಾರುತಿ ದೇವಸ್ಥಾನಕ್ಕೆ ಭೇಟಿ ನೀಡಿ ಆಂಜನೇಯನ ಆಶೀರ್ವಾದ ಪಡೆದರು. ನಂತರ ರಾಜ್ಯದ ಜನತೆಗೆ ಒಳ್ಳೆಯದಾಗಲಿ ಎಂದು ಅರ್ಚನೆ ಮಾಡಿಸಿದರು.
ದೇವಸ್ಥಾನ ಭೇಟಿ ನಂತರ ಕಾವೇರಿ ನಿವಾಸಕ್ಕೆ ಆಗಮಿಸಿದ ಸಿಎಂ, ತಮ್ಮ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಆರು ತಿಂಗಳು ತುಂಬಿರುವ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಇದೇ ವೇಳೆ ಯಡಿಯೂರಪ್ಪ ಆಶೀರ್ವಾದ ಪಡೆದುಕೊಂಡರು. ಬಿಎಸ್‌ವೈ ಸಿಎಂಗೆ ಜನ್ಮದಿನದ ಶುಭಾಶಯಗಳನ್ನು ಕೋರಿದರು. ಈ ವೇಳೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಕೂಡ ಸಿಎಂಗೆ ಶುಭ ಕೋರಿದರು.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ