ETV Bharat / city

ಕ್ಷೇತ್ರದಲ್ಲಿ ಅಮಾನವೀಯ ಪದ್ಧತಿಗೆ ಕೊನೆ: ಶಾಸಕ ಹರ್ಷವರ್ಧನ್ ಕಾರ್ಯಕ್ಕೆ ಸಿಎಂ ಮೆಚ್ಚುಗೆ - ಮಲ ಹೊರುವ ಪದ್ಧತಿ

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾಗೆ ಭೇಟಿ ನೀಡಿದ ಶಾಸಕ ಹರ್ಷವರ್ಧನ್ ತಮ್ಮ ಕ್ಷೇತ್ರದ ಕೆ.ಆರ್ ಪುರದಲ್ಲಿ ಜನರು ಕೈಯಿಂದಲೇ ಚರಂಡಿಗಳಲ್ಲಿನ ಹೊಲಸು ಹೊತ್ತು ಹಾಕುವ ಅಮಾನವೀಯ ಪದ್ಧತಿ ಕೊನೆಗೊಂಡಿರುವ ಕುರಿತು ಮುಖ್ಯಮಂತ್ರಿಗಳಿಗೆ ವಿವರಣೆ ನೀಡಿ, ಈ ಕುರಿತ ಮಾಹಿತಿ ಫಲಕವನ್ನು ಮುಖ್ಯಮಂತ್ರಿಗಳಿಗೆ ನೀಡಿದರು.

CM Basavaraj Bommai praises MLA Harshavardhan

author img

By

Published : Aug 19, 2021, 8:12 AM IST

ಬೆಂಗಳೂರು: ನಂಜನಗೂಡು ಕ್ಷೇತ್ರದ ಕೆ.ಆರ್ ಪುರದಲ್ಲಿ ಇನ್ನೂ ಜಾರಿಯಲ್ಲಿದ್ದ ಕೈಯಿಂದಲೇ ಚರಂಡಿಗಳಲ್ಲಿನ ಹೊಲಸನ್ನು ಹೊತ್ತು ಹಾಕುವ ಅಮಾನವೀಯ ಪದ್ಧತಿ ಕೊನೆಗೊಳಿಸಿದ ಸ್ಥಳೀಯ ಶಾಸಕ ಹರ್ಷವರ್ಧನ್ ಕಾರ್ಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶಂಸೆ ವ್ಯಕ್ತಪಡಿಸಿದರು‌.

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾಗೆ ಭೇಟಿ ನೀಡಿದ ಶಾಸಕ ಹರ್ಷವರ್ಧನ್ ತಮ್ಮ ಕ್ಷೇತ್ರದ ಕೆ.ಆರ್ ಪುರದಲ್ಲಿ ಜನರು ಕೈಯಿಂದಲೇ ಚರಂಡಿಗಳಲ್ಲಿನ ಹೊಲಸನ್ನು ಹೊತ್ತು ಹಾಕುವ ಅಮಾನವೀಯ ಪದ್ಧತಿ ಕೊನೆಗೊಂಡಿರುವ ಕುರಿತು ಮುಖ್ಯಮಂತ್ರಿಗಳಿಗೆ ವಿವರಣೆ ನೀಡಿ ಈ ಕುರಿತು ಮಾಹಿತಿ ಫಲಕವನ್ನು ಮುಖ್ಯಮಂತ್ರಿಗಳಿಗೆ ನೀಡಿದರು.

ಸಿಎಂ ಭೇಟಿಯಾದ ಶಾಸಕ ಹರ್ಷವರ್ಧನ್
ಸಿಎಂ ಭೇಟಿಯಾದ ಶಾಸಕ ಹರ್ಷವರ್ಧನ್

ತಮ್ಮ ಅಜ್ಜ, ಮಾಜಿ ಸಚಿವ ಬಿ.ಬಸವಲಿಂಗಪ್ಪ ಅವರು 50 ವರ್ಷಗಳ ಹಿಂದೆ ಮಲಹೊರುವ ಪದ್ಧತಿಯನ್ನು ಅಂತ್ಯಗೊಳಿಸುವ ಕುರಿತು ವಿಧಾನಸೌಧದಲ್ಲಿ ಘೋಷಣೆ ಮಾಡಿದ್ದರು. ಈಗ ತಾವು ಶಾಸಕರಾದ ನಂತರ ಮೊದಲ ಆದ್ಯತೆಯಾಗಿ ಕೆ.ಆರ್ ಪುರದಲ್ಲಿ ಇಂದಿಗೂ ನಡೆದುಕೊಂಡು ಬಂದಿರುವ ಅಮಾನವೀಯ ಪದ್ಧತಿಗೆ ತಿಲಾಂಜಲಿ ನೀಡಿರುವ ಕುರಿತು ಮುಖ್ಯಮಂತ್ರಿಗಳಿಗೆ ಹರ್ಷವರ್ಧನ್ ಮಾಹಿತಿ ನೀಡಿದರು.

ಸಮಸ್ಯೆಗಳನ್ನು ನಿವಾರಿಸಿ ಗ್ರಾಮದಲ್ಲಿ ಸೂಕ್ತ ಚರಂಡಿ ವ್ಯವಸ್ಥೆಯನ್ನು ಮಾಡಲಾಗಿದೆ. ಇದರಿಂದಾಗಿ ಗ್ರಾಮದ ಜನರು ಈಗ ನೆಮ್ಮದಿಯಿಂದ ಬದುಕುವ ವಾತಾವರಣ ನಿರ್ಮಾಣವಾಗಿದೆ. ಆರೋಗ್ಯ ಮತ್ತು ಸ್ವಚ್ಛತೆಗೆ ಹೆಚ್ಚಿನ ಗಮನ ನೀಡಲಾಗುತ್ತದೆ. ಗ್ರಾಮದ ಜನರಲ್ಲಿ ಸಂತಸ ಮೂಡಿದೆ ಎಂದು ಮುಖ್ಯಮಂತ್ರಿಗಳಿಗೆ ವಿವರಿಸಿದರು.

ಹರ್ಷವರ್ಧನ್ ಅವರು ನೀಡಿದ ಸಂಪೂರ್ಣ ಮಾಹಿತಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮೆಚ್ಚುಗೆ ವ್ಯಕ್ತಪಡಿಸಿದರು. ನಿಮ್ಮ ಕಾರ್ಯ ಶ್ಲಾಘನೀಯ. ಇಡೀ ಕ್ಷೇತ್ರದಲ್ಲಿ ಇಂತಹ ಮಾದರಿ ಕೆಲಸಗಳನ್ನು ಮಾಡುವಂತೆ ಸಲಹೆ ನೀಡಿ ಪ್ರೋತ್ಸಾಹಕ ನುಡಿಗಳನ್ನಾಡಿದರು‌.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.