ETV Bharat / city

ಮೇಕೆದಾಟು ವಿಷಯದಲ್ಲಿ ಯಾವುದೇ ರೀತಿಯ ರಾಜಿ ಇಲ್ಲ: ಅಣ್ಣಾಮಲೈಗೆ ಬೊಮ್ಮಾಯಿ ತಿರುಗೇಟು - Bommai reaction about mekedatu project

ಮೇಕೆದಾಟು ವಿಚಾರವಾಗಿ ಈಗಾಗಲೇ ಕೇಂದ್ರ ನೀರಾವರಿ ಸಚಿವರನ್ನು ಭೇಟಿ ಮಾಡಿದ್ದೇನೆ. ಆದಷ್ಟು ಬೇಗ ಅವರು ಒಪ್ಪಿಗೆ ನೀಡಲಿದ್ದಾರೆ. ಎಲ್ಲವು ಕ್ಲಿಯರ್ ಆದ ಕೂಡಲೇ ಕಾಮಗಾರಿ ಆರಂಭ ಮಾಡುತ್ತೇವೆ ಎಂದು ಸಿಎಂ ಬೊಮ್ಮಾಯಿ ಭರವಸೆ ನೀಡಿದ್ದಾರೆ.

CM Basavaraj Bommai
ಸಿಎಂ ಬೊಮ್ಮಾಯಿ
author img

By

Published : Aug 5, 2021, 10:54 AM IST

Updated : Aug 5, 2021, 11:39 AM IST

ಬೆಂಗಳೂರು: ಮೇಕೆದಾಟು ವಿಷಯದಲ್ಲಿ ಯಾವುದೇ ರೀತಿಯ ರಾಜಿ ಇಲ್ಲ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಐಪಿಎಸ್‌ ಅಧಿಕಾರಿ ಅಣ್ಣಾಮಲೈಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

'ಮೇಕೆದಾಟು ವಿಷಯದಲ್ಲಿ ಯಾವುದೇ ರೀತಿಯ ರಾಜಿ ಇಲ್ಲ'

ಈ ಕುರಿತು ಪ್ರತಿಕ್ರಿಯಿಸಿದ ಅವರು, ತಮಿಳುನಾಡಿನಲ್ಲಿ ಮೇಕೆದಾಟು ವಿಚಾರವನ್ನು ರಾಜಕಾರಣಕ್ಕೆ ಬಳಕೆ ಮಾಡುತ್ತಿದ್ದಾರೆ. ಕಷ್ಟದ ಸಂದರ್ಭದಲ್ಲಿ ನೀರು ಹಂಚಿಕೆ ಮಾಡುವ ಬಗ್ಗೆ ಎಲ್ಲರಿಗೂ ಗೊತ್ತಿದೆ. ಈಗಾಗಲೇ ಕೇಂದ್ರ ನೀರಾವರಿ ಸಚಿವರನ್ನು ಭೇಟಿ ಮಾಡಿದ್ದೇನೆ. ಆದಷ್ಟು ಬೇಗ ಅವರು ಮೇಕೆದಾಟು ಯೋಜನೆಗೆ ಒಪ್ಪಿಗೆ ನೀಡಲಿದ್ದಾರೆ. ಎಲ್ಲವು ಕ್ಲಿಯರ್ ಆದ ಕೂಡಲೇ ಕಾಮಗಾರಿ ಆರಂಭ ಮಾಡ್ತೇವೆ ಎಂದು ಭರವಸೆ ನೀಡಿದರು.

ಇದೇ ವೇಳೆ, ಮೇಕೆದಾಟು ವಿಚಾರವಾಗಿ ಯಾರಾದರೂ ಪ್ರತಿಭಟನೆ ಮಾಡಿದರೆ ಅದಕ್ಕೂ ನಮಗೂ ಸಂಬಂಧವಿಲ್ಲ ಎಂದರು.

ಇದನ್ನೂ ಓದಿ: ಮಾಜಿ ಸಚಿವ ರೋಷನ್ ಬೇಗ್​ ನಿವಾಸದ ಮೇಲೆ ಇಡಿ ಅಧಿಕಾರಿಗಳಿಂದ ದಾಳಿ

Last Updated : Aug 5, 2021, 11:39 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.