ETV Bharat / city

ಇಂದು ಸಿಎಂ ದೆಹಲಿ ಪ್ರವಾಸ : ನೀರಾವರಿ ಯೋಜನೆಗಳ ಚರ್ಚೆ, ಸಂಪುಟ ವಿಸ್ತರಣೆ ಬಗ್ಗೆ ಬೊಮ್ಮಾಯಿ ಹೇಳಿದ್ದೇನು? - ಸಂಪುಟ ವಿಸ್ತರಣೆ ಸೂಚನೆ ಬಂದಿಲ್ಲ ಎಂದ ಸಿಎಂ

ದೆಹಲಿ ಪ್ರವಾಸದ ಸಂದರ್ಭದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಗೂ ಸಮಯ ಕೇಳಿದ್ದೇನೆ. ಆದರೆ, ಅವರ ಸಮಯ ನಿಗದಿಯಾಗಿಲ್ಲ. ಸಮಯ ನಿಗದಿಯಾದರೆ ಅವರನ್ನೂ ಭೇಟಿ ಮಾಡುತ್ತೇನೆ ಎಂದು ಸಿಎಂ ಸ್ಪಪ್ಟಪಡಿಸಿದರು..

cm basavaraj bommai
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
author img

By

Published : Apr 5, 2022, 11:57 AM IST

ಬೆಂಗಳೂರು : ಇಂದು ಮಧ್ಯಾಹ್ನ ನಾನು ದೆಹಲಿಗೆ ಪ್ರಯಾಣ ಬೆಳೆಸುತ್ತಿದ್ದೇನೆ. ಸಂಜೆ ರಾಜ್ಯದ ನೀರಾವರಿ ಯೋಜನೆಗಳ ಕುರಿತು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಜೊತೆ ಮಾತುಕತೆ ನಡೆಸಲಿದ್ದೇನೆ. ಸಚಿವ ಸಂಪುಟ ವಿಸ್ತರಣೆ ಸೇರಿದಂತೆ ರಾಜ್ಯ ರಾಜಕೀಯ ವಿದ್ಯಮಾನಗಳ ಕುರಿತು ಹೈಕಮಾಂಡ್ ನಾಯಕರ ಜೊತೆಗೂ ನಾಳೆ ಸಮಾಲೋಚನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಆರ್.ಟಿ.ನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಮೇಕೆದಾಟು, ಮಹಾದಾಯಿ, ಕೃಷ್ಣ ಮೇಲ್ದಂಡೆ, ಭದ್ರಾ ಮೇಲ್ದಂಡೆ ಮತ್ತು ಇತರ ನೀರಾವರಿ ಯೋಜನೆಗಳ ಬಗ್ಗೆ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರೊಂದಿಗೆ ಚರ್ಚಿಸಲಾಗುತ್ತದೆ. ಅವುಗಳಲ್ಲಿ ಇರುವಂತಹ ಅಡೆತಡೆ, ಆಡಳಿತಾತ್ಮಕ ಮತ್ತು ತಾಂತ್ರಿಕ ಕೆಲಸಗಳ ಬಗ್ಗೆ ಮಾತುಕತೆ ನಡೆಸಿ ನಿರ್ದಿಷ್ಟ ಸಮಯದಲ್ಲಿ ಯೋಜನೆಗಳನ್ನು ಪೂರ್ಣಗೊಳಿಸಬೇಕು ಎಂದು ಒತ್ತಾಯಿಸುತ್ತೇನೆ ಎಂದರು.

ನಾಳೆ ಬೆಳಗ್ಗೆ ಜಿಎಸ್​​ಟಿ ವಿಚಾರ ಸಂಬಂಧ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗುತ್ತೇನೆ. ನಂತರ ಸಂಗೊಳ್ಳಿ ರಾಯಣ್ಣ ಶಾಲೆಯನ್ನು ಸೈನಿಕ ಶಾಲೆಯನ್ನಾಗಿ ಮಾಡಲು ಒಪ್ಪಿಗೆ ಸಿಕ್ಕಿದೆ. ಅದರ ಬಗ್ಗೆ ಕೆಲವು ವಿಚಾರಗಳನ್ನು ಮಾತನಾಡಬೇಕಿದೆ. ಹಾಗಾಗಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗುತ್ತೇನೆ. ಇಂಧನ ಸಚಿವರನ್ನು ಭೇಟಿಯಾಗುವ ಪ್ರಯತ್ನ ನಡೆಸುತ್ತಿದ್ದೇನೆ. ಇದಕ್ಕೆ ಇನ್ನೂ ಸಮಯಾವಕಾಶ ನಿಗದಿಯಾಗಿಲ್ಲ. ಅವಕಾಶ ಸಿಕ್ಕಲ್ಲಿ ಭೇಟಿಯಾಗಿ ಮಾತುಕತೆ ನಡೆಸಲಾಗುತ್ತದೆ ಎಂದರು.

ಸಂಪುಟ ವಿಸ್ತರಣೆ ಸೂಚನೆ ಬಂದಿಲ್ಲ : ದೆಹಲಿ ಪ್ರವಾಸದ ಸಂದರ್ಭದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಗೂ ಸಮಯ ಕೇಳಿದ್ದೇನೆ. ಆದರೆ, ಅವರ ಸಮಯ ನಿಗದಿಯಾಗಿಲ್ಲ. ಸಮಯ ನಿಗದಿಯಾದರೆ ಅವರನ್ನೂ ಭೇಟಿ ಮಾಡುತ್ತೇನೆ ಎಂದು ಸಿಎಂ ಸ್ಪಪ್ಟಪಡಿಸಿದರು.

ಅಲ್ಲದೇ, ಸಚಿವ ಸಂಪುಟ ವಿಸ್ತರಣೆ, ಪುನಾರಚನೆ ಕುರಿತಂತೆ ಯಾವುದೇ ಸೂಚನೆ ಹೈಕಮಾಂಡ್​​ನಿಂದ ಬಂದಿಲ್ಲ. ನಡ್ಡಾ, ಅಮಿತ್ ಶಾ ಅವರನ್ನು ಭೇಟಿ ಮಾಡಿದಾಗ ಈ ಪ್ರಸ್ತಾಪ ಬರಬಹುದು. ಆಗ ಆ ಬಗ್ಗೆಯೂ ಚರ್ಚೆ ನಡೆಸಲಾಗುತ್ತದೆ ಎಂದರು.

ಇದನ್ನೂ ಓದಿ: ಜೀರೋ ಟ್ರಾಫಿಕ್‌ ಬಿಟ್ಟು ಸಿಗ್ನಲ್‌ ಫ್ರೀ ರಸ್ತೆಯಲ್ಲೇ ಸಿಎಂ ಸಂಚಾರ; ತಟ್ಟಿತು ಟ್ರಾಫಿಕ್‌ ಕಿರಿಕಿರಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.