ETV Bharat / city

ಎಸಿಬಿ ರದ್ದು.. ಸಂಪುಟ ಸಭೆಯಲ್ಲಿ ಚರ್ಚೆ: ಸಿಎಂ ಬಸವರಾಜ ಬೊಮ್ಮಾಯಿ

ಎಸಿಬಿ ರದ್ದು ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

CM Basavaraj Bommai
ಸಿಎಂ ಬಸವರಾಜ ಬೊಮ್ಮಾಯಿ
author img

By

Published : Aug 12, 2022, 12:56 PM IST

ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ರದ್ದು ವಿಚಾರಕ್ಕೆ ಸಂಬಂಧಿಸಿದಂತೆ ನಿನ್ನೆ ಹೈಕೋರ್ಟ್ ತೀರ್ಪು ನೀಡಿದೆ. ಇಂದು ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ವಿಧಾನಸೌಧದಲ್ಲಿ ಸಂಪುಟ ಸಭೆಗೂ ಮುನ್ನ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಮ್ಮ ಪಕ್ಷದ ಪ್ರಣಾಳಿಕೆ ಗಮನದಲ್ಲಿಟ್ಟುಕೊಂಡು ಹಾಗೂ ಹೈಕೋರ್ಟ್ ಆದೇಶ ಕೊಟ್ಟಿರುವ ಪ್ರತಿಯನ್ನು ಇಟ್ಟುಕೊಂಡು ಏನೆಲ್ಲ ಮಾಡಬಹುದು ಎಂಬ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದರು.

ಸಿಎಂ ಬಸವರಾಜ ಬೊಮ್ಮಾಯಿ

ಇದನ್ನೂ ಓದಿ: ಎಸಿಬಿ ರಚನೆ ರದ್ದುಪಡಿಸಿ ಹೈಕೋರ್ಟ್ ಆದೇಶ

ಸರ್ಕಾರಿ ಗೌರವಗಳೊಂದಿಗೆ ಅಂತಿಮ ವಿಧಿ - ವಿಧಾನ: ಖ್ಯಾತ ಸುಗಮ ಸಂಗೀತಗಾರ ಶಿವಮೊಗ್ಗ ಸುಬ್ಬಣ್ಣ ನಮ್ಮನ್ನು ಅಗಲಿರುವುದು ಬಹಳ ದುಃಖಕರ ಸಂಗತಿ. ಅವರು ಸಾಹಿತ್ಯ, ಸಂಗೀತ, ಹಾಡುಗಾರಿಕೆ ಎಲ್ಲದರಲ್ಲೂ ಮುಂಚೂಣಿಯಲ್ಲಿದ್ದರು. ಹಲವು ಪ್ರಶಸ್ತಿಗಳಿಗೆ ಭಾಜನರಾದವರು. ಕರ್ನಾಟಕದ ಮನೆ ಮನೆಗೆ ಅವರ ಹಾಡು ಮುಟ್ಟಿತ್ತು. ಕನ್ನಡದ ಮಹಾನ್ ಕಲಾವಿದರನ್ನು ಕಳೆದುಕೊಂಡು ರಾಜ್ಯ ಬಡವಾಗಿದೆ. ರವೀಂದ್ರ ಕಲಾಕ್ಷೇತ್ರದಲ್ಲಿ ಅವರ ಪಾರ್ಥಿವ ಶರೀರ ಅಂತಿಮ ದರ್ಶನಕ್ಕೆ ಇಡಲಾಗಿದೆ. ಸರ್ಕಾರಿ ಗೌರವಗಳೊಂದಿಗೆ ಅವರ ಅಂತಿಮ ವಿಧಿ-ವಿಧಾನ ಮಾಡಲಾಗುತ್ತದೆ ಎಂದು ಸಿಎಂ ತಿಳಿಸಿದರು.

ಇದನ್ನೂ ಓದಿ: ಖ್ಯಾತ ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ್ಣ ನಿಧನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.