ETV Bharat / city

ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ. 2.75ರಷ್ಟು ಹೆಚ್ಚಳ - dearness allowance increased

ಸರ್ಕಾರಿ ನೌಕರರಿಗೆ ಜನವರಿ 1ರಿಂದ ಜಾರಿಗೆ ಬರುವಂತೆ ತುಟ್ಟಿ ಭತ್ಯೆಯನ್ನು ಹೆಚ್ಚಿಸಲಾಗಿದೆ.

CM Basavaraj bommai
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
author img

By

Published : Apr 5, 2022, 12:50 PM IST

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಜನವರಿ 1ರಿಂದ ಪೂರ್ವಾನ್ವಯವಾಗುವಂತೆ ಶೇ 2.75ರಷ್ಟು ಹೆಚ್ಚಿಸಲಾಗಿದೆ. ಇದಕ್ಕಾಗಿ ಸರ್ಕಾರ 1,447 ಕೋಟಿ ರೂ. ವಾರ್ಷಿಕ ವೆಚ್ಚ ಭರಿಸಲಿದೆ. ಈ ಕುರಿತು ಸರ್ಕಾರಿ ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

  • ರಾಜ್ಯ ಸರ್ಕಾರಿ ನೌಕರರಿಗೆ ಜನವರಿ 1 ರಿಂದ ಜಾರಿಗೆ ಬರುವಂತೆ ತುಟ್ಟಿ ಭತ್ಯೆಯನ್ನು ಶೇ. 2.75 ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ಸರ್ಕಾರ 1447 ಕೋಟಿ ರೂ. ವಾರ್ಷಿಕ ವೆಚ್ಚ ಭರಿಸಲಿದೆ. ಸರ್ಕಾರಿ ಆದೇಶ ಹೊರಡಿಸಲಾಗುವುದು.

    — Basavaraj S Bommai (@BSBommai) April 5, 2022 " class="align-text-top noRightClick twitterSection" data=" ">

ಇದನ್ನೂ ಓದಿ: ಆಜಾನ್‌ಗೆ ಅಪಸ್ವರ.. ನಾವು ಯಾವುದೇ ಹೊಸ ಆದೇಶಗಳನ್ನು ಮಾಡಿಲ್ಲ, ಎಲ್ಲವೂ ಹಳೆಯದೇ : ಸಿಎಂ ಬೊಮ್ಮಾಯಿ

ಬಜೆಟ್​ ಮೇಲಿನ ಚರ್ಚೆಯ ವೇಳೆ 7ನೇ ವೇತನ ಆಯೋಗ ಜಾರಿಗೆ ಅಧಿಕಾರಿಗಳ ವೇತನ ಸಮಿತಿ ರಚನೆ ಬಗ್ಗೆ ಸಿಎಂ ಘೋಷಣೆ ಮಾಡಿದ್ದರು. ಈ ಮೂಲಕ ಮುಂಬರುವ ಚುನಾವಣೆಯಲ್ಲಿ ಸರ್ಕಾರಿ ನೌಕರರ ಮತಬುಟ್ಟಿ ಭದ್ರಪಡಿಸಿಕೊಳ್ಳಲು ಕಸರತ್ತು ನಡೆಸಿದ್ದಾರೆ. ಇದರ ಭಾಗವಾಗಿ ತುಟ್ಟಿಭತ್ಯೆ ಹೆಚ್ಚಿಸಿ ಸರ್ಕಾರಿ ನೌಕರರ ಮನಗೆಲ್ಲುವ ಪ್ರಯತ್ನ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.