ETV Bharat / city

ಅಮಿತ್ ಶಾ ನೇತೃತ್ವದಲ್ಲಿ ಮುಖ್ಯಮಂತ್ರಿಗಳ ಸಮ್ಮೇಳನ.. ನಾಳೆ ತಿರುಪತಿಗೆ ಸಿಎಂ ಬೊಮ್ಮಾಯಿ..

ದಕ್ಷಿಣ ಭಾರತದ ವಿವಿಧ ರಾಜ್ಯಗಳ (South CM's Meeting) ನಡುವೆ ಸಮನ್ವಯತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ನಡೆಯುವ ಮುಖ್ಯಮಂತ್ರಿಗಳ ಸಮ್ಮೇಳನ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಕೇರಳ, ಪಾಂಡಿಚೇರಿ ಮುಖ್ಯಮಂತ್ರಿಗಳು ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ..

cm bommai
cm bommai
author img

By

Published : Nov 13, 2021, 8:31 PM IST

ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ (Home Minister Amith Sha) ನೇತೃತ್ವದಲ್ಲಿ ಭಾನುವಾರ ತಿರುಪತಿಯಲ್ಲಿ ನಡೆಯಲಿರುವ ದಕ್ಷಿಣ ಭಾರತ ಮುಖ್ಯಮಂತ್ರಿಗಳ (South CMs Meeting) ಸಮ್ಮೇಳನದಲ್ಲಿ ಸಿಎಂ ಬೊಮ್ಮಾಯಿ ಭಾಗವಹಿಸಲಿದ್ದಾರೆ. ರಾಜ್ಯದ ಗಡಿಭಾಗದಲ್ಲಿನ ನೀರಾವರಿ ಯೋಜನೆಗಳು (Water Projects) ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ.

ನಾಳೆ ಮಧ್ಯಾಹ್ನ 12 ಗಂಟೆಗೆ ಸಿಎಂ ಬೆಂಗಳೂರಿನಿಂದ ತಿರುಪತಿಗೆ ತೆರಳಲಿದ್ದಾರೆ. ಭಾನುವಾರ ಸಮ್ಮೇಳನದಲ್ಲಿ ಭಾಗವಹಿಸಿ ತಿರುಪತಿಯಲ್ಲೇ ವಾಸ್ತವ್ಯ ಹೂಡಿ, ಸೋಮವಾರ ಬೆಳಗ್ಗೆ 5.45ಕ್ಕೆ ತಿರುಪತಿ ತಿಮ್ಮಪ್ಪನ ದರ್ಶನ‌ ಪಡೆಯಲಿದ್ದಾರೆ. ಬಳಿಕ ಸೋಮವಾರ ಬೆಳಗ್ಗೆ 11 ಗಂಟೆಗೆ ಬೆಂಗಳೂರಿಗೆ ಮರಳಲಿದ್ದಾರೆ.

ದಕ್ಷಿಣ ಭಾರತದ ವಿವಿಧ ರಾಜ್ಯಗಳ ನಡುವೆ ಸಮನ್ವಯತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ನಡೆಯುವ ಮುಖ್ಯಮಂತ್ರಿಗಳ ಸಮ್ಮೇಳನ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಕೇರಳ, ಪಾಂಡಿಚೇರಿ ಮುಖ್ಯಮಂತ್ರಿಗಳು ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.

ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪೂರ್ವಭಾವಿಯಾಗಿ ಸಭೆ ನಡೆಸಿ ಅಗತ್ಯ ಮಾಹಿತಿಗಳನ್ನು ಸಂಗ್ರಹಿಸಿದ್ದಾರೆ. ಸರ್ಕಾರದ ನಡೆಯ ಬಗ್ಗೆ ಸಮ್ಮೇಳನದಲ್ಲಿ ವಿವರಿಸಲಿದ್ದಾರೆ. ಸಭೆಯಲ್ಲಿ ಹೆಚ್ಚಾಗಿ ಗಡಿಭಾಗದಲ್ಲಿ ಕೈಗೊಂಡಿರುವ ನೀರಾವರಿ ಯೋಜನೆಗಳ ಕುರಿತು ಚರ್ಚೆ ನಡೆಯಲಿದೆ.

ತುಂಗಾಭದ್ರಾ ನದಿಗೆ ಅಡ್ಡಲಾಗಿ ಆಂಧ್ರಪ್ರದೇಶ ಸರ್ಕಾರವು ಗುಡ್ರವುಳು ಯೋಜನೆ ನಿರ್ಮಿಸುವ ಸಂಬಂಧ ರಾಜ್ಯ ಸರ್ಕಾರ ಉತ್ತರ ನೀಡಲಿದೆ. ಅಲ್ಲಿ ಎರಡು ರಾಜ್ಯಗಳ ಜಂಟಿ ಸಮೀಕ್ಷೆ ನಡೆಸಬೇಕಾದ ಅಗತ್ಯತೆ, ರಾಜ್ಯಕ್ಕೆ ಲಭ್ಯವಾಗುವ ನೀರಿನ ಪ್ರಮಾಣದ ಬಗ್ಗೆ ಮಾಹಿತಿ ಕೋರಲಾಗುತ್ತದೆ. ತೆಲಂಗಾಣ ಸರ್ಕಾರದ ರಾಜೀವ್‌ ಗಾಂಧಿ ಸಂಗಮಬಂಡ ಬ್ಯಾರೇಜ್ ಯೋಜನಾ ಕುರಿತು ಚರ್ಚೆ ನಡೆಸಲಾಗುತ್ತದೆ.

ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸುವ ಈ ಯೋಜನೆಯ ಸಮೀಕ್ಷೆ, ನೀರಿನ ಲಭ್ಯತೆ ಸೇರಿದಂತೆ ಇನ್ನಿತರ ವಿಚಾರಗಳ ಬಗ್ಗೆ ಸಮಾಲೋಚನೆ ನಡೆಯಲಿದೆ. ಕೇಂದ್ರದ ಯೋಜನೆಗಳ ಕುರಿತು, ಕೇಂದ್ರ ಆರೋಗ್ಯ ಇಲಾಖೆಯ ಯೋಜನೆಗಳ ಅನುಷ್ಠಾನದ ಕುರಿತು ಸಹ ಸಭೆಯಲ್ಲಿ ಚರ್ಚೆ ನಡೆಯಲಿದೆ. (ಹಿಂದಿ ಎಲ್ಲ ಭಾರತೀಯ ಭಾಷೆಗಳ ಸ್ನೇಹಿತ: ಅಮಿತ್ ಶಾ)

ETV Bharat Logo

Copyright © 2024 Ushodaya Enterprises Pvt. Ltd., All Rights Reserved.