ETV Bharat / city

ಹಿಜಾಬ್ ವಿವಾದ: ಶಾಲಾ, ಕಾಲೇಜು ರಜೆ ವಿಸ್ತರಣೆ ಬಗ್ಗೆ ಸಂಜೆ ಸಭೆಯಲ್ಲಿ ತೀರ್ಮಾನ- ಸಿಎಂ

ಇಂದು ಸಂಜೆ ಶಿಕ್ಷಣ ಮತ್ತು ಗೃಹ ಸಚಿವರ ಜೊತೆ ಸಭೆ ನಡೆಸಿ ಶಾಲಾ ಕಾಲೇಜು ರಜೆ ವಿಸ್ತರಣೆ ಸಂಬಂಧ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದೆಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

author img

By

Published : Feb 10, 2022, 11:31 AM IST

cm basavaraja bommai
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಭುಗಿಲೆದ್ದ ಹಿಜಾಬ್, ಕೇಸರಿ ಶಾಲು ವಿವಾದ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ ಸಂಬಂಧ ಇಂದು ಸಂಜೆ ಶಿಕ್ಷಣ ಸಚಿವರು ಮತ್ತು ಗೃಹ ಸಚಿವರ ಜೊತೆ ಸಭೆ ನಡೆಸಿ, ಮುಂದಿನ ನಿರ್ಧಾರ ಕೈಗೊಳ್ಳಲಾಗುವುದೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಆರ್.ಟಿ.ನಗರದ ತಮ್ಮ ನಿವಾಸದ ಬಳಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಶಾಲಾ ಕಾಲೇಜು ರಜೆ ವಿಸ್ತರಣೆ ಬಗ್ಗೆ ಸಂಜೆ ಸಭೆಯಲ್ಲಿ ತೀರ್ಮಾನ ಮಾಡುತ್ತೇವೆ. ಶಾಲಾ ಕಾಲೇಜುಗಳಲ್ಲಿ ಮೊದಲಿನ‌ ರೀತಿ ಶಾಂತಿ ಸೌಹಾರ್ದತೆ ತರುವ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡುತ್ತೇವೆ ಎಂದು ಹೇಳಿದರು.

ಹಿಜಾಬ್, ಕೇಸರಿ ಶಾಲು ವಿವಾದದ ವಿಚಾರಣೆಗೆ ಹೈಕೋರ್ಟ್‌ ತ್ರಿಸದಸ್ಯ ಪೀಠ ರಚಿಸಿದೆ. ಇಂದು ಅರ್ಜಿಗಳ ವಿಚಾರಣೆ ನಡೆಯಲಿದೆ. ಶಾಲೆಗಳಲ್ಲಿ ಸಮಸ್ಯೆ ಆಗದಂತೆ ರಜೆ ಘೋಷಣೆ ಮಾಡಿದ್ದೇವೆ. ಹೊರಗಿನ ಸಂಘಟನೆಗಳು ಕಾನೂನು ಸುವ್ಯವಸ್ಥೆ ಕಾಪಾಡಬೇಕು. ಕೋರ್ಟ್ ಆದೇಶಕ್ಕೆ ಎಲ್ಲರೂ ಕಾಯಬೇಕು ಎಂದರು.

ಇದನ್ನೂ ಓದಿ: ರಾತ್ರೋರಾತ್ರಿ ದೆಹಲಿಗೆ ತೆರಳಿದ ಶೆಟ್ಟರ್: ಕುತೂಹಲ ಕೆರಳಿಸಿದ ಮಾಜಿ ಸಿಎಂ ಪ್ರಯಾಣ

ಯಾರ್ಯಾರು ಏನೇನು ಹೇಳಿಕೆ ಕೊಡಬೇಕೋ ಎಲ್ಲ ಕೊಟ್ಟಿದ್ದಾರೆ. ಇನ್ನು ಮುಂದೆ ಯಾರು ಕೂಡ ಈ ಬಗ್ಗೆ ಹೇಳಿಕೆ ಕೊಡದಂತೆ ಕೇಳಿಕೊಳ್ಳುತ್ತೇನೆ. ಶಾಂತಿ ಕಾಪಾಡುವ ಕೆಲಸ ಮಾಡೋಣ ಎಂದು ಮನವಿ ಮಾಡಿದರು.

ಮಂತ್ರಿ ಮಗನೇ ಕೇಸರಿ ಶಾಲು ಹಂಚುತ್ತಿದ್ದಾನೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿಎಂ, ಎರಡೂ ಕಡೆ ಆರೋಪ-ಪ್ರತ್ಯಾರೋಪಗಳು ಆಗಿವೆ. ನಾನು ಟೀಕೆಗಳ ಬಗ್ಗೆ ಮಾತನಾಡೋಕೆ ಹೋಗಲ್ಲ. ಇನ್ನು ಮುಂದೆಯಾದರೂ ನಿಲ್ಲಿಸಿಬಿಡಿ. ಇದರಿಂದ ಏನೂ ಲಾಭವಿಲ್ಲ. ನಾವು ಜವಾಬ್ದಾರಿಯುತ ಸ್ಥಾನದಲ್ಲಿದ್ದು ಮಕ್ಕಳ ವಿಚಾರದಲ್ಲಿ ಸಂವೇದನಾಶೀಲರಾಗಿ ವರ್ತಿಸಬೇಕು. ಕೋರ್ಟ್ ತನ್ನ ಕೆಲಸ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಸಿಎಂ ಮನವಿ ಮಾಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.